Wednesday, December 1, 2021

ಮುಂಬೈ ರಸ್ತೆ ಅಪಘಾತದಲ್ಲಿ ಉಡುಪಿ ಮೂಲದ ವ್ಯಕ್ತಿ ಸಾವು

ಉಡುಪಿ: ಮುಂಬೈನ ಚೆಂಬೂರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಕೊಳಲಗಿರಿ ಮೂಲದ ರೋಶನ್ ಡಿಸೋಜಾ (33) ಮೃತಪಟ್ಟಿದ್ದಾರೆ.


ರೋಶನ್, ಏಳು ವರ್ಷಗಳಿಂದ ಮುಂಬೈ‌ನ ಶಿಪ್ ಯಾರ್ಡ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕೆಲಸ ಮುಗಿಸಿ ಮನೆಗೆ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಢಿಕ್ಕಿ ಹೊಡೆದಿದೆ.

ಇದರ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇವರ ಮೃತದೇಹವನ್ನು ಮುಂಬೈನಿಂದ ಊರಿಗೆ ತರಲಾಗುತ್ತಿದೆ. ಇಂದು ಸಂಜೆ 4 ಗಂಟೆಗೆ ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...