Monday, July 4, 2022

ಉಪ್ಪಿಂಗಡಿಯಲ್ಲಿ ಮುಖಾಮುಖಿ ಕಾರು ಢಿಕ್ಕಿ: ಇಬ್ಬರು ಗಂಭೀರ

ಉಪ್ಪಿನಂಗಡಿ: ಕಾರುಗಳೆರಡರ ನಡುವೆ  ಮುಖಾಮುಖಿ  ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ.

ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ಆಲ್ಟೋ-800 ಹಾಗೂ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಲೆನೋ ಕಾರಿನ ನಡುವೆ ಕುಂಡಾಜೆ ಸಮೀಪದ ಕಿರು ಸೇತುವೆಯ ತಿರುವಿನಲ್ಲಿ ಮುಖಾಮುಖೀ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸದ್ಯ ಅಪಘಾತದಿಂದ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ.ಸ್ಥ ಳಕ್ಕೆ ಕಡಬ ಠಾಣಾ ಎಸ್.ಐ ರುಕ್ಮ ನಾಯ್ಕ್, ಎ.ಎಸ್.ಐ ಸುರೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ‘ಬ್ಲಡ್ ಡೋನರ್ಸ್’ ಇದರ 350ನೇ ರಕ್ತದಾನ ಶಿಬಿರಕ್ಕೆ ಚಾಲನೆ

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ...

ಕೆರೆಗೆ ಬಿದ್ದ ಹಾಲಿನ ವಾಹನ-ನೀರುಪಾಲಾದ ಲೀಟರ್‌ಗಟ್ಟಲೆ ಹಾಲು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ...

‘ಕುಡ್ಲ ನಾದುಂಡುಯೇ’: ಮಂಗಳೂರಿನಲ್ಲಿ ಮುಗಿಯುತ್ತಿಲ್ಲ ಪೌರಕಾರ್ಮಿಕರ ಧರಣಿ

ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ  ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ.ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ...