ಲಕ್ನೋ: ಹರಿದ್ವಾರದಿಂದ ಹಿಂದಿರುಗಿ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿ ವಾಹನದಲ್ಲಿದ್ದ 10 ಜನ ಭಕ್ತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಹರಿದ್ವಾರದಿಂದ ಹಿಂತಿರುಗಿ ಬರುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ 10 ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ.
ಒಂದು ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗಾಯಗೊಂಡವರು ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.