ಬೆಂಗಳೂರು: ಸ್ಯಾಂಡಲ್‌ವುಡ್ ನಟ ದಿಗಂತ್ ಅವರಿಗೆ ಗೋವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆನ್ನು ಮೂಳೆ, ಕುತ್ತಿಗೆಗೆ ಪೆಟ್ಟಾಗಿದೆ. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಏರ್‌ಲಿಫ್ಟ್ ಮಾಡಲಾಗಿದೆ.
ಕುಟುಂಬದ ಜೊತೆ ಪ್ರವಾಸ ಹೋಗಿದ್ದಾಗ ಈ ಅವಘಡ ನಡೆದಿದೆ. ಗೋವಾದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿಗೆ ಕರೆತರಲಾಗಿದೆ.