Connect with us

    BANTWAL

    ಮನೆಯೊಂದರಲ್ಲಿ  ಆಕಸ್ಮಿಕ ಬೆಂಕಿ ಅವಘಡ ಮನೆ ಸಾಮಾಗ್ರಿಗಳು ಸಂಪೂರ್ಣ ಭಸ್ಮ:

    Published

    on

    ಬಂಟ್ವಾಳ:ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿ ಮನೆಯೊಳಗಿನ ಎಲ್ಲಾ ಸಾಮಾಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣ ಒಂದರಲ್ಲಿ ಮಂಗಳವಾರ ಮಧ್ಯ ರಾತ್ರಿ ವೇಳೆಗೆ ನಡೆದಿದೆ. ಉದ್ಯಮಿ ಹನೀಫ್ ಹಾಸ್ಕೋ ಅವರ ಕುಟುಂಬ ವಾಸ್ತವ್ಯ ಹೊಂದಿರುವ ಮನೆಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಮನೆ ಇರುವ ಈ ವಸತಿ ಸಂಕೀರ್ಣ ಇಸ್ಮಾಯಿಲ್ ಎಂಬವರಿಗೆ ಸೇರಿದೆ.ಸಂಬಂಧಿಕರೊಬ್ಬರು ಮರಣ ಹೊಂದಿದ್ದ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲ ಅಲ್ಲಿಗೆ ತೆರಳಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

    ಆದರೆ ಅದಾಗಲೇ ಮನೆಯೊಳಗಿನ ಸೊತ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. 

    ಮನೆಯೊಳಗಿನ ವಿದ್ಯುತ್ ಉಪಕರಣಗಳು, ಪೀಠೋಪಕರಣಗಳು ಸಹಿತ ಕಪಾಟಿನೊಳಗಿದ್ದ ವಸ್ತ್ರ, ಬಟ್ಟೆ-ಬರೆಗಳು, ಚಿನ್ನಾಭರಣಗಳು ಹಾಗೂ ನಗದು ಹಣ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

    50 ಸಾವಿರ ರೂಪಾಯಿಗೂ ಅಧಿಕ ಹಣ, ಸುಮಾರು 20 ಪವನ್ ಗೂ ಅಧಿಕ ಚಿನ್ನಾಭರಣ, ಇತರ ಅತ್ಯಮೂಲ್ಯ ದಾಖಲೆ ಪತ್ರಗಳು ಬೆಂಕಿಯ ಕೆನ್ನಾಲಗೆಗೆ ಆಹುತಿಯಾಗಿದೆ.

    ಈ ಬೆಂಕಿ ಅವಘಡದಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.  ಘಟನಾ ಸ್ಥಳಕ್ಕೆ ರಾತ್ರೋರಾತ್ರಿ ಆಗಮಿಸಿದ ಸ್ಥಳೀಯ ಕೌನ್ಸಿಲರ್ ಅಬೂಬಕ್ಕರ್ ಸಿದ್ದೀಕ್ ಅವರು ಅಗ್ನಿಶಾಮಕ ಸಿಬ್ಬಂದಿ ಕರೆಸಿ ಬೆಂಕಿ ನಂದಿಸುಲ್ಲಿ ಸಹಕರಿಸಿದ್ದು, ಸ್ಥಳೀಯ ಯುವಕರು ಕೈಜೋಡಿಸಿದ್ದಾರೆ…

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending