BANTWAL
ಬಂಟ್ವಾಳದಲ್ಲಿ ಬೆಂಕಿ ಆಕಸ್ಮಿಕ : ಸಕಾಲದ ಕಾರ್ಯಾಚರಣೆ ಉಳಿಸಿತು ಮನೆ..!
Published
2 years agoon
By
Adminದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಮಾ. 6 ರಂದು ತಡರಾತ್ರಿ ನಡೆದಿದೆ.
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಮಾ. 6 ರಂದು ತಡರಾತ್ರಿ ನಡೆದಿದೆ.
ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ 2 ವಾಹನಗಳು ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದರಿಂದ ಮನೆ ರಕ್ಷಿಸಲ್ಪಟ್ಟಿದೆ.
ಘಟನೆಯಿಂದ ಜನರಿಗೆ ಯಾವುದೇ ಹಾನಿ ಉಂಟಾಗಿಲ್ಲ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ.
ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಬೆಂಕಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ..
BANTWAL
ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ
Published
3 days agoon
16/01/2025By
NEWS DESK3ಬಂಟ್ವಾಳ : ಕಾರೊಂದು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದ್ಮಾನ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಉಸ್ಮಾನ್ (24) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಉಸ್ಮಾನ್ ಅವರು ತನ್ನ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದು ಸತ್ತಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ನೋಂದಣಿಯಾಗದ ಕಾರೊಂದು ಏಕಾಏಕಿ ಅವರ ಸ್ಕೂಟರ್ ಗೆ ಢಿಕ್ಕಿಯಾಗಿತ್ತು.
ಇದನ್ನೂ ಓದಿ: ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು
ಈ ಸಂದರ್ಭ ಸ್ಕೂಟರ್ ನಲ್ಲಿ ಕುಳಿತಿದ್ದ ಉಸ್ಮಾನ್ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಕಾರು ಮತ್ತು ಬೈಕ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
LATEST NEWS
ತುಳುಚಲನಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ
ಭಾರತೀಯರಿಗೆ ಬಿಗ್ ಶಾ*ಕ್; ಸೌದಿ ಅರೇಬಿಯಾದಲ್ಲಿ ಹೊಸ ವೀಸಾ ನಿಯಮಗಳು ಜಾರಿ
ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ
ಸುಖ ದಾಂಪತ್ಯ ಜೀವನಕ್ಕೆ ಸರಳ ಸೂತ್ರಗಳು ಇಲ್ಲಿದೆ
WATCH : ಆ ಒಂದು ರೀಲ್ಸ್ನಿಂದ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ
ಈ ವಾರ ಮನೆಯಿಂದ ಹೊರ ಬರುವ ಕಂಟೆಸ್ಟೆಂಟ್ಸ್ಗಳು ಇವರೇ ?
Trending
- BIG BOSS6 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS4 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS4 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS5 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?