Sunday, May 16, 2021

ಸರಣಿ ಡಿಕ್ಕಿ ಹೊಡೆದು ಅಚಾನಕ್ ಕೋಳಿ ಅಂಗಡಿಗೆ ನುಗ್ಗಿದ ಆ್ಯಂಟನಿ ವೇಸ್ಟ್ ವಾಹನ..!

ಮಂಗಳೂರು: ತ್ಯಾಜ್ಯ ವಿಲೇವಾರಿಯ ಲಾರಿಯೊಂದು ಹಠಾತ್ ಆಗಿ ಚಲಿಸಿದ ಪರಿಣಾಮ ಕೋಳಿ ಅಂಗಡಿ ಹಾಗೂ ವಾಹನಗಳಿಗೆ ಹಾನಿಯಾದ ಘಟನೆ ಮಂಗಳೂರು ಕಂಕನಾಡಿ ಮಾರುಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿದೆ. ಆ್ಯಂಟನಿ ಕಂಪನಿಗೆ ಸೇರಿದ ತ್ಯಾಜ್ಯ ವಿಲೇವಾರಿ ವಾಹನ ಇದಾಗಿದ್ದು,ಲಾರಿಯನ್ನು ಸಂಪೂರ್ಣ ಸ್ಥಗಿತಗೊಳಿಸದಿರುವುದರಿಂದ  ಲಾರಿಯು ಏಕಾಏಕಿ ಚಲಿಸಿ ಮೂರು ಕಾರು, ಎರಡು ದ್ವಿಚಕ್ರ ವಾಹನ, ಒಂದು ಟೆಂಪೋಗೆ ಢಿಕ್ಕಿ ಹೊಡೆದಿದೆ. ಅಲ್ಲದೆ ಸಮೀಪದ ಕೋಳಿ ಅಂಗಡಿಗೂ ಢಿಕ್ಕಿ ಹೊಡೆದಿದೆ. ಇದರಿಂದ ಒಂದು ದ್ವಿಚಕ್ರ ವಾಹನ ಅಪ್ಪಚ್ಚಿಯಾದರೆ ಕೋಳಿ ಅಂಗಡಿಯ ಜನರೇಟರ್ಗೆ ಹಾನಿಯಾಗಿದೆ.ಘಟನೆ ನಡೆಯುವಾಗ ಅಲ್ಲೇ ಇದ್ದ ಚಾಲಕ ಬಳಿಕ ಪರಾರಿಯಾಗಿದ್ದಾನೆ . ಈ ಮಧ್ಯೆ ಲಾರಿ ಚಾಲಕ ಸ್ಥಳಕ್ಕೆ ಆಗಮಿಸಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಬಳಿಕ ಪ್ರಕರಣ ದಾಖಲಿಸಿಕೊಂಡಿದ್ಧಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...