Connect with us

    BANTWAL

    ಬಂಟ್ವಾಳ: ಸರ್ಕಾರಿ ವೈದ್ಯರ ನಕಲಿ ಸಹಿ ಬಳಸಿ ವಂಚನೆ-ಆರೋಪಿ ಬಂಧನ

    Published

    on

    ಬಂಟ್ವಾಳ: ಸರಕಾರಿ ವೈದ್ಯರೋರ್ವರ ನಕಲಿ ಸಹಿ ಹಾಗೂ ಸೀಲ್ ಬಳಸಿ ಸರಕಾರಕ್ಕೆ ವಂಚಿಸಲು ಪ್ರಯತ್ನಿಸಿದ ಆರೋಪಿ ಜೈಲು ಪಾಲಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ವಿಟ್ಲ ಶಾಲಾ ರಸ್ತೆ ನಿವಾಸಿ ಶೇಖ್ ಫಿರೋಜ್ ಆದಂ (26) ಬಂಧಿತ ಆರೋಪಿ.


    ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ವೇದಾವತಿ ಅವರು ನೀಡಿದ ದೂರಿನ ಮೇಲೆ ಶೇಖ್ ಫಿರೋಜ್ ಆದಂನನ್ನು ಬಂಧಿಸಲಾಗಿದೆ.

    ಆರೋಪಿ ಫಿರೋಜ್ ಆದಂ ವಿಟ್ಲ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಇರುವಂತಹ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ಮಾಲಕ ಅಬ್ದುಲ್ ಖಾದರ್ ಅವರ ಮಗನಾಗಿದ್ದು ಗ್ರಾಹಕನೋರ್ವನ ಪಿಟ್‌ನೆಸ್‌ಗಾಗಿ ವೈದ್ಯರ ನಕಲಿ ಸಹಿ ಬಳಸಿದ್ದಾನೆ ಎಂಬ ಆರೋಪದಲ್ಲಿ ಪೋಲೀಸರು ಬಂಧಿಸಿ‌ದ್ದಾರೆ.

    ಇಸುಬು ಎಂಬ ಗ್ರಾಹಕರೋರ್ವರು ಲೈಸೆನ್ಸ್ ಮರುನವೀಕರಣ ಮಾಡಲು ನ್ಯಾಷನಲ್ ಡ್ರೈವಿಂಗ್ ಸ್ಕೂಲ್‌ಗೆ ಅರ್ಜಿ ಸಲ್ಲಿಸಿದರು. ಆದರೆ ಲೈಸೆನ್ಸ್ ಮರುನವೀಕರಣಕ್ಕೆ ವೈದ್ಯರ ಪಿಟ್ ನೆಸ್ ಸರ್ಟಿಫಿಕೇಟ್ ಪಡೆಯಬೇಕು ಎಂಬುದು‌ ಇಲಾಖೆಯ ನಿಯಮವಿದೆ.

    ಆದರೆ ಆರೋಪಿಯು ವೈದ್ಯರ ಸಹಿ ಹಾಗೂ‌ ಸೀಲ್ ನಕಲಿ ಮಾಡಿ ಲೈಸೆನ್ಸ್ ನವೀಕರಣ ಮಾಡಲು ಮೆಲ್ಕಾರ್ ಆರ್.ಟಿ.ಒ ಕಚೇರಿಗೆ ಕಳುಹಿಸಿಕೊಟ್ಟಿದ್ದರು.

    ಅಲ್ಲಿ ವೈದ್ಯರ ಸಹಿ ಹಾಗೂ ಪಿಟ್‌ನೆಸ್ ಅರ್ಜಿಯಲ್ಲಿರುವ ವೈದ್ಯರ ಸಹಿ ತಾಳೆ ಮಾಡಿದಾಗ ವ್ಯತ್ಯಾಸ ಗಳು ಕಂಡು ಬಂದಾಗ ಆರ್.ಟಿ.ಒ. ಇನ್ಸ್ ಪೆಕ್ಟರ್ ಅವರು ವಿಟ್ಲ ವೈದ್ಯಾಧಿಕಾರಿಯಾದ ಡಾ. ವೇದಾವತಿ ಅವರಿಗೆ ಪರಿಶೀಲನೆಗಾಗಿ ಕಳುಹಿಸಿಕೊಟ್ಟಿದ್ದಾರೆ.

    ಆರೋಗ್ಯ ಅಧಿಕಾರಿ ಅದನ್ನು ‌ಪರಿಶೀಲಿಸಿದಾಗ ನಕಲಿ ಸಹಿ ಹಾಕಿದ ಬಗ್ಗೆ ಗಮನಕ್ಕೆ ಬಂದು ಇದರ ತನಿಖೆಗಾಗಿ ವಿಟ್ಲ ಪೋಲಿಸರಿಗೆ ದೂರು ನೀಡಿದ್ದರು.

    ಈ ದೂರಿನ ಮೇಲೆ ಕಾರ್ಯಚರಣೆ ಮಾಡಿದ ವಿಟ್ಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಾಗರಾಜ್ ಎಚ್ ಅವರು ಆರಂಭದಲ್ಲಿ ಲೈಸೆನ್ಸ್ ನವೀಕರಣ ಮಾಡಲು ಅರ್ಜಿ ನೀಡಿದ ಇಸುಬು ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತ ನ್ಯಾಷನಲ್ ಡ್ರೈವಿಂಗ್ ಸ್ಕೂಲ್‌ನಲ್ಲಿ ಅರ್ಜಿ ನೀಡಿದ ಬಗ್ಗೆ ಮಾಹಿತಿ ನೀಡಿದ್ದಾನೆ.

    ಈತನ ಮಾಹಿತಿ ಮೇಲೆ ಫಿರೋಜ್ ಆದಂ ನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಸತ್ಯ ಸಂಗತಿ ಬಯಲಾಗಿದೆ.

    ಈ ಆರೋಪದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    BANTWAL

    ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!

    Published

    on

    ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
    ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.

    ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

     

    ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ

    ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :

    ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
    ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    BANTWAL

    ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ

    Published

    on

    ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್‌ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.

    ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ! 

    ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
    ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

    Continue Reading

    BANTWAL

    ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

    Published

    on

    ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

    ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


    ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending