Friday, July 1, 2022

ಉಡುಪಿ: ಬಾಡಿಗೆ ನೆವನದಲ್ಲಿ ಚಾಲಕನನ್ನು ಸುಲಿಗೆ ಮಾಡಿದ ಆರೋಪಿಗಳು ಅಂದರ್

ಉಡುಪಿ: ಬಾಡಿಗೆಯ ಹೆಸರಿನಲ್ಲಿ ಚಾಲಕನನ್ನೇ ಸುಲಿಗೆ ಮಾಡಿದ ಘಟನೆ ಮಣಿಪಾಲದಲ್ಲಿ ನಡೆದಿದ್ದು ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಉಳ್ಳಾಲ ನಿವಾಸಿ ಚರಣ್‌ (35), ಶಿರ್ವ ನಿವಾಸ ಮೊಹಮ್ಮದ್‌ ಅಝರುದ್ದೀನ್‌ (39), ಬಂಟ್ವಾಳ ನಿವಾಸಿ ಶರತ್‌ ಪೂಜಾರಿ (36) ಮತ್ತು ಮಂಗಳೂರು ನಿವಾಸಿ ಜಯಪ್ರಸಾದ್‌ (43) ಬಂಧಿತ ಆರೋಪಿಗಳು.


ಮಣಿಪಾಲದಿಂದ ಬಾಡಿಗೆ ಹೆಸರಿನಲ್ಲಿ ಕಾರವಾರಕ್ಕೆ ಕರೆದೊಯ್ದ ಚಾಲಕನನ್ನು ಆರೋಪಿಗಳು ಸುಲಿಗೆ ಮಾಡಿದ್ದಾರೆ.

ಕಾರು ಮಾಲಕ ಶ್ರೀಧರ್ ಅವರು ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಜೆ ತನ್ನ ಕಾರನ್ನು ಬಾಡಿಗೆಗೆ ನಿಲ್ಲಿಸಿದ್ದು, ಈ ವೇಳೆ ನಾಲ್ಕು ಮಂದಿ ಬಂದು, ಕಾರವಾರಕ್ಕೆ ಹೋಗಲು ಕಾರನ್ನು ಬಾಡಿಗೆ ಗೊತ್ತು ಮಾಡಿ ಕರೆದುಕೊಂಡು ಹೋಗಿದ್ದರು.

ರಾತ್ರಿ 8.40 ಗಂಟೆಗೆ ಅಂಕೋಲ ರೈಲ್ವೆ ನಿಲ್ದಾಣದ ಸಮೀಪ ಕಾರನ್ನು ಆರೋಪಿಗಳು ನಿಲ್ಲಿಸಲು ಹೇಳಿ, ಹಿಂಬದಿಯಲ್ಲಿದ್ದ ಓರ್ವ ಶ್ರೀಧರ ಭಕ್ತರ ಕುತ್ತಿಗೆಯನ್ನು ಒತ್ತಿ ಹಿಡಿದು, ಉಳಿದ ಮೂವರು ಅವರನ್ನು ಚಾಲಕ ಸೀಟಿನಿಂದ ಹಿಂದಿನ ಸೀಟಿಗೆ ಎಳೆದು ಕುಳ್ಳಿರಿಸಿದ್ದರು. ನಂತರ ಚೂರಿ ತೋರಿಸಿ, ಬೆದರಿಸಿ ಶ್ರೀಧರ ಭಕ್ತ ಪರ್ಸ್‌ನಲ್ಲಿದ್ದ 3000ರೂ. ನಗದು ಹಾಗೂ ಕೈಯಲ್ಲಿದ್ದ ವಾಚ್ ತೆಗೆದುಕೊಂಡಿದ್ದರು.

ಬಳಿಕ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಕಾರನ್ನು ಚಲಾಯಿಸಿಕೊಂಡು ರಾತ್ರಿ 11.30ರ ಸುಮಾರಿಗೆ ಕುಂದಾಪುರದ ಆನೆಗುಡ್ಡೆಗೆ ಕರೆದುಕೊಂಡು ಬಂದಿದ್ದು, ಎಟಿಎಂ ಬಳಿ ಕಾರನ್ನು ನಿಲ್ಲಿಸಿ ಹಣ ತೆಗೆದು ತರುವಂತೆ ಶ್ರೀಧರ ಭಕ್ತನಿಗೆ ಹೇಳಿದ್ದರು.

ಕಾರಿನಿಂದ ಇಳಿದು ಎ.ಟಿ.ಎಂ ನ ಒಳಗೆ ಹೋದ ಶ್ರೀಧರ್ ಭಕ್ತ, ಸ್ಥಳದಿಂದ ಓಡಿ ಹೋಗಿ ಪರಾರಿಯಾಗಿದ್ದರು.

ಬಳಿಕ ಶ್ರೀಧರ ಭಕ್ತ ಅವರು ಮಣಿಪಾಲ ಠಾಣೆಯಲ್ಲಿ ದೂರು ನೀಡಿದ್ದರು.
ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಡುಪಿ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಐಪಿಎಸ್ ರವರು ಹಾಗೂ ಹೆಚ್ಚುವರಿ ಎಸ್ ಪಿ ಸಿದ್ದಲಿಂಗಪ್ಪ ನವರ ಮಾರ್ಗದರ್ಶನ ದಲ್ಲಿ ಉಡುಪಿ ಉಪವಿಭಾಗದ ಡಿವೈಎಸ್ಪಿ ಸುಧಾಕರ ನಾಯಕ್‌ ನೇತೃತ್ವದಲ್ಲಿ ಮಣಿಪಾಲ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ್‌, ಉಪನಿರೀಕ್ಷಕರಾದ ರಾಜಶೇಖರ್‌ ವಂದಲಿ, ಸಿಬ್ಬಂದಿ ಶೈಲೇಶ್‌, ನಾಗೇಶ್‌ ನಾಯ್ಕ್‌, ಪ್ರಸನ್ನ, ಇಮ್ರಾನ್‌, ಪ್ರಸಾದ್‌ ಬಂಧನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...