bengaluru
ಬೆಂಗ್ಳೂರಲ್ಲಿ ಖೋಟಾ ನೋಟು ಮಾರುತ್ತಿದ್ದ ಖತರ್ನಾಕ್ ಆರೋಪಿಗಳು ಅರೆಸ್ಟ್-1 ಕೋಟಿ 28 ಲಕ್ಷ ರೂ. ಮೌಲ್ಯದ ನಕಲಿ ನೋಟು ವಶ
Published
2 years agoon
By
Adminಬೆಂಗಳೂರು: ಖೋಟಾನೋಟುಗಳನ್ನು ಮುದ್ರಿಸಿ ನಗರದ ವಿವಿಧೆಡೆ ಚಲಾವಣೆ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಸಿಬಿ ಪೊಲೀಸರು, 1 ಕೋಟಿ 28 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ಜಪ್ತಿ ಮಾಡಿದ್ದಾರೆ.
ಈ ಎಲ್ಲ ಖೋಟಾನೋಟುಗಳು 2 ಸಾವಿರ ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆವುಳ್ಳವಾಗಿವೆ.
ಬಂಧಿತರನ್ನು ತಮಿಳುನಾಡಿನ ತುತುಕುಡಿಯ ಪಿಚ್ಚುಮುತ್ತ್ತು(48), ನಲ್ಲಕಣಿ(53) ಹಾಗೂ ಮಣಿಯನ್(60) ಎಂದು ಗುರುತಿಸಲಾಗಿದೆ.
2 ಸಾವಿರ ರೂಪಾಯಿ ಮುಖಬೆಲೆಯ 2300 ನಕಲಿ ನೋಟು, 500 ಮುಖಬೆಲೆಯ 174 ನಕಲಿ ನೋಟುಗಳು, ಪ್ರಿಂಟರ್ ಹಾರ್ಡ್ ಡಿಸ್ಕ್, ಮೊಬೈಲ್‍ಗಳನ್ನು ವಶಕ್ಕೆ ಪಡೆದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.
ನಕಲಿ ನೋಟುಗಳನ್ನು ಕೊಟ್ಟು ಅಸಲಿ ನೋಟುಗಳನ್ನು ಪಡೆಯಲು ಆರೋಪಿಗಳು ಬೆಂಗಳೂರಿಗೆ ಬಂದಿದ್ದರು.
ತಿರುನಲ್‍ವೇಲಿಯ ಪ್ರಮುಖ ಆರೋಪಿ ಕಣ್ಣಿ ಎಂಬಾತನ ಸೂಚನೆ ಮೇರೆಗೆ ಪಿಚ್ಚುಮುತ್ತು ಮತ್ತು ತಂಡ ಬೆಂಗಳೂರಿಗೆ ಬಂದಿತ್ತು.
ಈ ವೇಳೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
bengaluru
ಪಟಾಕಿ ದುರಂತ: ಡಬ್ಬದ ಮೇಲೆ ಯುವಕನನ್ನು ಕೂರಿಸಿ ಬಾಂಬ್ ಸಿಡಿಸಿದ್ರು; ಸ್ಥಳದಲ್ಲೇ ಸಾ*ವು!
Published
3 weeks agoon
04/11/2024By
NEWS DESK2ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.
ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬ*ಲಿಯಾಗಿದ್ದಾನೆ.
ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾ*ವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
bangalore
ಅಬ್ಬಬ್ಬಾ! ಖತರ್ನಾಕ್ ಗರ್ಲ್ ಫ್ರೆಂಡ್; ಪ್ರಿಯಕರನನ್ನೇ ರಾಬರಿ ಮಾಡಿಸಿದ ಯುವತಿ, ಯಾಕೆ ಗೊತ್ತಾ!?
Published
2 months agoon
29/09/2024By
NEWS DESK4ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.
ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.
ಆ್ಯಕ್ಸಿಡೆಂಟ್ – ಡ್ರಾಮಾ :
ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಇದನ್ನು ಓದಿ:ಪುತ್ತೂರು ಕಾಂಗ್ರೆಸ್ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್..!
ಬೇಡವಾಗಿದ್ದ ಬಾಯ್ ಫ್ರೆಂಡ್ :
ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ