Tuesday, May 30, 2023

ಸಿಸಿಬಿ ಕಾರ್ಯಾಚರಣೆ : ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿಸಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪಿ ಕೇರಳದಲ್ಲಿ ಅರೆಸ್ಟ್..!

ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ಹಲವಾರು ಮಂದಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಪ್ರಕರಣದಲ್ಲಿನ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು :  ಒಳ್ಳೆಯ ಲಾಭಾಂಶವನ್ನು ಪಡೆಯಬಹುದು ಎಂದು ಹಲವಾರು ಮಂದಿ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ ಪ್ರಕರಣದಲ್ಲಿನ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೇರಳದ ಮಲಪ್ಪುರ ಜಿಲ್ಲೆಯ ಹಂಝಾ ಸಿಟಿ ಬಂಧಿತ ಆರೋಪಿಯಾಗಿದ್ದಾನೆ.

ಹಂಝಾನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ರಾಜೇಂದ್ರ, ಹಾಗೂ ಸಿಸಿಬಿ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದರು.

ಕ್ರಿಸ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಾಂತರ ರೂಪಾಯಿ ಹಣ ಲಾಭಗಳಿಸಬಹುದು ಎಂದು ಹಲವಾರು ಮಂದಿಯಿಂದ ಹಣವನ್ನು ಹೂಡಿಕೆ ಮಾಡಿಕೊಂಡು ನಂತರ ತಿಂಗಳಿಗೆ ಶೇಕಡ 25 ರಷ್ಟು ಲಾಭಾಂಶವನ್ನು ನೀಡುವುದಾಗಿ ಮಂಗಳೂರು ಕಣ್ಣೂರು ಪರಿಸರದ ನಿವಾಸಿಯಿಂದ ಹಾಗೂ ಇತರ ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿಯನ್ನು ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿಕೊಂಡು ಲಾಭಾಂಶವನ್ನು ನೀಡದೇ ಹಂಝಾ ವಂಚನೆ ಮಾಡಿದ್ದಾರೆ ಎಂದು ಪೊಲೀಸ್ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics