Connect with us

LATEST NEWS

ವರನ ಸೋಗಿನಲ್ಲಿ ಯುವತಿಯರಿಗೆ ವಂಚನೆ; ಆರೋಪಿ ಬಂಧನ

Published

on

ಮಂಗಳೂರು/ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

 

ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ.ಮಧು (31) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ವಧು-ವರ ಶೋಧ ತಾಣಗಳಾದ ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ಬಳಿಕ, “ನಿಮಗೆ ಸರ್ಕಾರಿ ನೌಕರಿ ಕೊಡಿಸಿ, ನಂತರ ಮದುವೆ ಆಗುತ್ತೇನೆ” ಎಂದು ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ್ದಾನೆ.

ದಾವಣಗೆರೆ ಮೂಲದ ಯುವತಿಯೊಬ್ಬಳಿಗೆ ಮೈಸೂರು ರೇಲ್ವೆ ವರ್ಕಶಾಪ್​ನಲ್ಲಿ ಕೆಲಸ ಕೊಡಿಸುವುದಾಗಿ ಆರೋಪಿ ಮಧು 21 ಲಕ್ಷ ರೂಪಾಯಿ ತನ್ನ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾನೆ. ಹಣ ಖಾತೆಗೆ ಬಂದ ಬಳಿಕ ಸಂಪರ್ಕಕ್ಕೆ ಸಿಕ್ಕಿಲ್ಲ. ತಾನು ವಂಚನೆಗೆ ಒಳಗಾಗಿರವುದಾಗು ಯುವತಿ ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಆರೋಪಿ ಮಧು, ಚಿಕ್ಕಮಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಯುವತಿಯಿಂದ 3.80 ಲಕ್ಷ ರೂ., ಮಂಡ್ಯ ಸಿಇಎನ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿನ ಯುವತಿಯಿಂದ 26 ಲಕ್ಷ ರೂ., ಬೆಂಗಳೂರು ಕಾಟನ್ ಪೇಟ್​ ಠಾಣೆ ವ್ಯಾಪ್ತಿಯಲ್ಲಿನ ಯುವತಿಯಿಂದ 2.8 ಲಕ್ಷ ರೂ., ಮೈಸೂರು ಸಿಇಎನ್ ಠಾಣೆಯ ಸೇರಿದಂತೆ ಏಳು ‌ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಯುವತಿರಿಂದ ಒಟ್ಟು 62 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.

ಮ್ಯಾಟ್ರಿಮೋನಿಗಳ ಮೂಲಕ ವಂಚಕರು ಪರಿಚಯ ಮಾಡಿಕೊಂಡು ಹೆಣ್ಣು ಮಕ್ಕಳಿಗೆ ನಯವಾಗಿ ಮಾತನಾಡಿ ವಂಚಿಸುವವರ ಬಗ್ಗೆ ಹಾಗೂ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಹಾಕಿಸಿಕೊಂಡು ವಂಚಿಸುವವರ ಬಗ್ಗೆ ಜಾಗೃತರಾಗಿರಿ. ಇಂತಹ ಘಟನೆಗಳು ಕಂಡುಬಂದರೆ ಕೂಡಲೇ ಸ್ಥಳೀಯ ಠಾಣೆಗೆ ಹೋಗಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

LATEST NEWS

ದರ್ಶನ್‌ಗೆ ಮಧ್ಯಂತರ ಜಾಮೀನು; ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ಒಪ್ಪಿಗೆ

Published

on

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ಅವರಿಗೆ  ​ ಬೆನ್ನು ನೋ*ವಿನ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಈ ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಅದಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ.

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರಿಗೆ ಇದುವರೆಗೆ ಶಸ್ತ್ರಚಿಕಿತ್ಸೆ ನಡೆದಿಲ್ಲ. ಅವರು ಹೊರಗಿದ್ದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊ*ಲೆ ಕೇಸ್​ನಲ್ಲಿ ಎ2 ಆರೋಪಿ ಆಗಿದ್ದು,  ಬೆನ್ನು ನೋ*ವಿನ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದು, ಈಗ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ.

ಇದನ್ನೂ ಓದಿ : ಕಣ್ಣು ಮುಚ್ಚಿದ ಕೂಡಲೇ ನಿದ್ದೆ ಬಾರದೆ ಆಫೀಸ್ ಕೆಲಸ ನೆನಪಾಗುತ್ತಾ? ಹೀಗೆ ಮಾಡಿ

ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಹೀಗಾಗಿ ದರ್ಶನ್​ಗೆ ಮತ್ತೆ ಸಂ*ಕಷ್ಟ ಎದುರಾಗುವ ಸಾಧ್ಯತೆ ಇದೆ. ಸದ್ಯ  ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

Continue Reading

LATEST NEWS

ಕಷ್ಟ ಪಟ್ಟು ಓದಿ ಡಾಕ್ಟರ್ ಆಗಿದ್ದಾಳೆ; ಭಾವಿ ಪತ್ನಿ ಬಗ್ಗೆ ಭಾವುಕನಾದ ಡಾಲಿ ..!

Published

on

ಕರಿಯರ್‌ನ ಪೀಕ್‌ನಲ್ಲಿರುವ ಡಾಲಿ ಧನಂಜಯ್ ಇದೀಗ ಮದುವೆ ಅನೌನ್ಸ್ ಮಾಡಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿರುವ ಹುಡುಗಿ ಡಾ. ಧನ್ಯತಾರನ್ನು 2025, ಫೆಬ್ರವರಿ ತಿಂಗಳಲ್ಲಿ ಕೈ ಹಿಡಿಯಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಸಿಹಿ ಸುದ್ದಿಯನ್ನು ಜನರ ಜೊತೆ ಹಂಚಿಕೊಂಡಿರುವ ಡಾಲಿ ಮದುವೆ ತಯಾರಿ ಕೂಡ ಶುರು ಮಾಡಿಕೊಂಡಿದ್ದಾರೆ. ಡಾಲಿ ಸಿನಿಮಾ ನಟಿನ ಮದುವೆ ಆಗಬಹುದು ಎಂದು ಲೆಕ್ಕಾಚಾರ ಹಾಕುತ್ತಿದ್ದವರು ಈಗ ಹುಡುಗಿ ಡಾಕ್ಟರ್ ಎಂದು ಕೇಳಿ ಶಾಕ್ ಆಗಿದ್ದಾರೆ.

ಹುಡುಗಿ ಬಗ್ಗೆ ಡಾಲಿ ಅಭಿಪ್ರಾಯ : 

‘ಮದುವೆ ತಯಾರಿ ಶುರುವಾಗಿದೆ ಸಂಪೂರ್ಣವಾಗಿ ಮನೆಯವರು ನೋಡಿಕೊಳ್ಳುತ್ತಿದ್ದಾರೆ. ಮೈಸೂರಿನಲ್ಲಿ ಫೆಬ್ರವರಿ 16ರಂದು ಮದುವೆ ನಡೆಯುತ್ತಿದೆ. ಮದುವೆ ತಯಾರಿ ವಿಚಾರದಲ್ಲಿ ಸ್ವಲ್ಪ ಟೆನ್ಶನ್ ಇದ್ದೇ ಇರುತ್ತದೆ ಏಕೆಂದರೆ ಪ್ರತಿಯೊಬ್ಬರನ್ನು ಕರೆಯಬೇಕು ಹೀಗಾಗಿ ಶೂಟಿಂಗ್‌ನಿಂದ ಬ್ರೇಕ್ ತೆಗೆದುಕೊಂಡು ಇನ್‌ವೈಟ್ ಮಾಡಲು ಹೋಗಬೇಕು. ಇಲ್ಲಿ ಆಕ್ಟರ್ ಮತ್ತು ಡಾಕ್ಟರ್ ಲವ್ ಆಂಡ್ ಮದುವೆ ಅನ್ನೋದಕ್ಕಿಂತ ಹೆಚ್ಚಾಗಿ ನಮ್ಮ ಆಲೋಚನೆಗಳು ಮ್ಯಾಚ್ ಆಗುತ್ತದೆ ಹೀಗಾಗಿ ಒಟ್ಟಿಗೆ ಜರ್ನಿ ಶುರು ಮಾಡಿದರೆ ಚೆನ್ನಾಗಿರುತ್ತದೆ. ಆಕೆ ಮಿಡಲ್ ಕ್ಲಾಸ್ ಹುಡುಗಿ, ಕಷ್ಟ ಪಟ್ಟು ಡಾಕ್ಟರ್ ಆಗಿದ್ದಾರೆ ಅಲ್ಲದೆ ಅವರ ವರ್ಕ್, ಎಥಿಕ್ಸ್, ಯೋಚನೆಗಳು ನನಗೆ ಇಷ್ಟ ಆಯ್ತು’ ಎಂದು ಸಂದರ್ಶನವೊಂದರಲ್ಲಿ ಡಾಲಿ ಹೇಳಿದ್ದಾರೆ.

 

ಇದನ್ನೂ ಓದಿ : ‘ಇಷ್ಟರಲ್ಲೇ ಮದುವೆ ಆಗ್ತೀನಿ’ ; ಡಾಲಿ ಧನಂಜಯ್ ಕಡೆಯಿಂದ ಗುಡ್ ನ್ಯೂಸ್

 

‘ಆಪ್ತರನ್ನು ಮದುವೆಗೆ ಆಹ್ವಾನ ಮಾಡಲು ಶುರು ಮಾಡಬೇಕು ಆಗ ಭಾವಿ ಪತ್ನಿಯನ್ನು ಒಟ್ಟಿಗೆ ಕರೆದುಕೊಂಡು ಬರುತ್ತೀನಿ. ನಾವಿಬ್ಬರು ಒಂದೇ ರೀತಿಯಲ್ಲಿ ಯೋಚನೆ ಮಾಡುತ್ತೀವಿ. ಸಿನಿಮಾದವರ ಜೊತೆ ಜೀವನದ ಜರ್ನಿ ಹಾಗೆ ಶುರು ಮಾಡುವುದು ಬಹಳ ಕಷ್ಟ ಹಾಗಾಗಿ ಪ್ರೀತಿಸಿ ಹುಡುಗಿ ಆಯ್ಕೆ ಮಾಡಿಕೊಂಡು ಮದುವೆ ಆಗುತ್ತಿರುವುದು. ಇದು ಪಕ್ಕಾ ಲವ್ ಸ್ಟೋರಿ’ ಎಂದು ಡಾಲಿ ತಿಳಿಸಿದ್ದಾರೆ.

Continue Reading

LATEST NEWS

ಮನೆ ಮುಂದೆ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ ವೃದ್ಧನಿಗೆ ಚಾಕು ಇ*ರಿದ ಚಾಲಕ

Published

on

ಮಂಗಳೂರು/ಬೆಂಗಳೂರು : ಮನೆಯ ಮುಂದೆ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ ವೃದ್ಧನಿದೆ ಚಾ*ಕು ಇರಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ

ವಿನಾಯಕ ಲೇಔಟ್ ನಿವಾಸಿ ನಿವೃತ್ತ ವಕೀಲ ದಳಪತಿ (70) ಚಾ*ಕು ಇರಿತಕ್ಕೊಳಗಾದ ವೃದ್ಧ. ಸದ್ಯ ಅವರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾ*ಕು ಇರಿದು ಪರಾರಿಯಾಗಿದ್ದ ನಾಗರಬಾವಿ 2ನೇ ಹಂತದ ನಿವಾಸಿ ರಾಘವೇಂದ್ರ ಎಂಬಾತನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಏನಿದು ಘಟನೆ?

ಬುಧವಾರ(ನ.14) ಮಧ್ಯಾಹ್ನ 2 ಗಂಟೆಗೆ ತಮ್ಮ ಮನೆಯ ಮುಂದೆ ಕಾರು ನಿಲ್ಲಿಸಿದ್ದ ರಾಘವೇಂದ್ರನನ್ನು ದಳಪತಿ ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ರಾಘವೇಂದ್ರ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ : ರಾಜ್ಯದಲ್ಲಿ ಪೈಶಾಚಿಕ ಕೃ*ತ್ಯ; ವೃದ್ಧನಿಂದ ಬಾಲಕಿಯ ಅ*ತ್ಯಾಚಾರ !! 

ಬಳಿಕ ಗಾಯಗೊಂಡಿದ್ದ ದಳಪತಿಯನ್ನು ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

LATEST NEWS

Trending

Exit mobile version