Saturday, May 15, 2021

ಹಲವು ಪ್ರಕರಣಗಳ ಆರೋಪಿ ಹಿದಾಯತ್ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ..!

ಮಂಗಳೂರು: ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಐದಕ್ಕಿಂತಲೂ ಅಧಿಕ ಪ್ರಕರಣ ಹೊಂದಿದ್ದ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.ಕಾಸರಗೋಡು ಸಮೀಪದ ಮೇಲ್ಪರಂಬ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ಟಂಚಾಲು ಪ್ರದೇಶದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಉಳ್ಳಾಲ ಚೆಂಬುಗುಡ್ಡೆ ನಿವಾಸಿ 28 ವರ್ಷದ ಹಿದಾಯತ್ ಮೃತ ಆರೋಪಿಯಾಗಿದ್ದಾನೆ. ಮೃತದೇಹವನ್ನು ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು,


ಬುಧವಾರ ಶವ ಮಹಜರು ಪರೀಕ್ಷೆ ನಡೆಯಲಿದೆ. ಬಳಿಕವಷ್ಟೇ ಸಾವಿನ ಕಾರಣ ತಿಳಿದು ಬರಬಹುದು.ಹಿದಾಯತ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ, ಕಳವು, ಜಾನುವಾರು ಕಳವು ಕುರಿತು 5ಕ್ಕಿಂತಲೂ ಅಧಿಕ ಪ್ರಕರಣಗಳಿವೆ.

ಉಪ್ಪಳದಲ್ಲಿ ಕೆಲಸಕ್ಕಿದ್ದ ಹಿದಾಯತ್ ಮೇ.1 ರಿಂದ ನಾಪತ್ತೆಯಾಗಿದ್ದರೆಂದು ತಿಳಿದು ಬಂದಿದೆ.ಎ.3 ರಂದು ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಚಟ್ಟಂಚಾಲು ಎಂಬಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಹಿದಾಯತ್ ಮೊಬೈಲ್ ಮಾತ್ರ ಪತ್ತೆಯಾಗಿದ್ದು, ಅದರಲ್ಲಿ ಸಿಮ್ ಕಾರ್ಡ್ ಪತ್ತೆಯಾಗಿಲ್ಲ. ಮೇಲ್ಪರಂಬ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

https://studio.youtube.com/video/jHYxOLdg1sc/edit

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...