ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್ ಬಂಧಿತ ಆರೋಪಿಯಾಗಿದ್ದಾನೆ.ಈತ ಪತ್ನಿಯನ್ನು ಕೊಲೆ ಮಾಡಿ ಚೀಲದಲ್ಲಿ ತುಂಬಿಸಿ ಬಳಿಕ ಪರಾರಿಯಾಗಿದ್ದ.
ಈ ಕುರಿತು ಪ್ರಕರಣದ ದಾಖಲಿಸಿಕೊಂಡು ತನಿಖೆಯ ಜಾಡು ಹಿಡಿದು ಹೊರಟ ಸುಳ್ಯ ಠಾಣಾ ಪೊಲೀಸರು ಪಶ್ಚಿಮ ಬಂಗಾಲದ ಪೊಲೀಸರ ಸಹಕಾರದಿಂದ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ನಡೆದು ಎರಡು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಕೊಲೆ ಆರೋಪಿ ಇಬ್ರಾನ್ ನ ವಿಚಾರಣೆಯನ್ನು ಮುಂದುವರೆಸಿದ್ದಾರೆ.