Thursday, April 22, 2021

   ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು..!

ಉಳ್ಳಾಲ; ಮತ್ತೊಮ್ಮೆ ದೈವಸ್ಥಾನದಲ್ಲಿ ಚಪ್ಪಲಿ ಹಾಕಿ ವಿಕೃತಿ ಮೆರೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ  ಕಂಬ್ಲಪದವಿನ ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ನಡೆದಿದೆ.ಸೋಮವಾರ ತಡರಾತ್ರಿ ಘಟನೆ ಸಂಭವಿಸಿರುವ ಶಂಕೆಯಿದೆ. ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಕಾರಣೀಕ ಕ್ಷೇತ್ರವಾಗಿದ್ದು, ಸರ್ವ ಧರ್ಮೀಯರು ಭಕ್ತಿಯಿಂದ ನಂಬಿಕೊಂಡು ಬಂದಿರುವ ಸನ್ನಿಧಾನವಿದು.

ಕೆಲ ವರ್ಷಗಳ ಹಿಂದೆ ಅನ್ಯಕೋಮಿನ  ಯುವಕನೋರ್ವ ವಿಕೃತಿ ಮೆರೆದಿದ್ದ ಇದಾದ ಕೆಲವೇ ದಿನಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿತ್ತು.

ನಂತರ ಇಲ್ಲಿನ ಕ್ಷೇತ್ರದಲ್ಲಿ  ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿದೆ. ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿ ಮುಖಂಡರು ಈ ದುಷ್ಕೃತ್ಯದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರಿತ್ತಿದ್ದು,

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿ ಕ್ಯಾಮರಾವಿಲ್ಲದಿರವುದು ದುಷ್ಕರ್ಮಿಗಳ ಕೃತ್ಯಕ್ಕೆ ಪೂರಕವಾಗಿತ್ತೇನೋ ಎನ್ನುವಂತಿದೆ ನಡೆದ ಘಟನೆ..

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...