Connect with us

LATEST NEWS

ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಆರೋಪಿ 14 ದಿನ ಪೊಲೀಸ್ ಕಸ್ಟಡಿ..!

Published

on

ಉಡುಪಿ: ಉಡುಪಿಯ ಕೆಮ್ಮಣ್ಣು ನೇಜಾರಿನ ಹಂಪನಕಟ್ಟೆ ಸಮೀಪದ ತೃಪ್ತಿ ಲೇ ಔಟ್‌ನ ಮನೆಯ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಆರೋಪಿ ಪ್ರವೀಣ್ ಅರುಣ್‌ ಚೌಗಲೆಗೆ 14 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

ಚೌಗಲೆ ಯನ್ನು ಉಡುಪಿ ಪೊಲೀಸರು ಬೆಳಗಾವಿ ಪೊಲೀಸರಿಂದ ವಶಕ್ಕೆ ಪಡೆದು ನಿನ್ನೆ ಉಡುಪಿಗೆ ಕರೆತಂದಿದ್ದು, ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇದೇ ವೇಳೆ ಹೆಚ್ಚುವರಿ ತನಿಖೆಗಾಗಿ ತಮ್ಮ ಕಸ್ಟಡಿಗೆ ಒಪ್ಪಿಸ ಬೇಕೆಂದು ಪೊಲೀಸರು ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ನ. 28 ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.

ನ್ಯಾಯಾಲಯಕ್ಕೆ ಹಾಜರು ಪಡಿಸುವ ವೇಳೆ ಕೋರ್ಟಿನ ಆವರಣದಲ್ಲಿ ಭಾರೀ ಸಂಖ್ಯೆಯ ಜನರು ಸೇರಿದ್ದರಿಂದ ಉಡುಪಿ ನ್ಯಾಯಾಲಯ ಸೇರಿ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ನವೆಂಬರ್‌ 12 ರಂದು ರವಿವಾರ ಬೆಳಗ್ಗೆ 8.45 ರ ವೇಳೆಗೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ನೇಜಾರಿನ ಹಂಪನಕಟ್ಟೆ ಸಮೀಪದ ತೃಪ್ತಿ ಲೇ ಔಟ್‌ನ ಮನೆಯ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್‌ ಮೊಹಮ್ಮದ್‌ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್‌ (23), ಅಯ್ನಾಝ್ (21), ಪುತ್ರ ಅಸೀಮ್‌ (14) ಹತ್ಯೆಗೀಡಾಗಿದ್ದರು. ನೂರ್‌ ಮೊಹಮ್ಮದ್‌ ಅವರ ತಾಯಿ ಹಾಜಿರಾಬಿ (70) ಮೇಲೆಯೂ ದಾಳಿ ನಡೆಸಲಾಗಿತ್ತು. ಪ್ರಕರಣದ ಆರೋಪಿ ಪ್ರವೀಣ್ ಅರುಣ್‌ ಚೌಗಲೆಯನ್ನು ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಬಂಧಿಸಲಾಗಿತ್ತು.

ಆರೋಪಿ ಚೌಗಲೆ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಇದು ಪೂರ್ವ ಯೋಜಿತ ಕೃತ್ಯವಾಗಿದ್ದು ಆರೋಪಿ ತನ್ನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ಹತ್ಯೆಗೀಡಾಗಿರುವ ಅಯ್ನಾಝ್ ಳನ್ನು ಹತ್ಯೆ ಮಾಡುವುದು ತನ್ನ ಉದ್ದೇಶವಾಗಿತ್ತು ಎಂದು ಹೇಳಿದ್ದಾನೆ. ಕೃತ್ಯ ಎಸಗುವ ವೇಳೆ ಇತರರು ತಡೆಯಲು ಪ್ರಯತ್ನಿಸಿದ್ದರಿಂದ ಹತ್ಯೆ ಮಾಡಲಾಗಿದೆ, ಸಾಕ್ಷ್ಯ ನಾಶ ಮಾಡುವ ಉದ್ದೇಶವೂ ಹತ್ಯೆಗಳ ಹಿಂದಿದೆ. ಆತನ ಹೇಳಿಕೆಗಳ ಸತ್ಯಾಸತ್ಯತೆಯ ಬಗ್ಗೆ ನಾವು ಇನ್ನಷ್ಟು ತನಿಖೆ ನಡೆಸುತ್ತಿದ್ದೇವೆ. ಹತ್ಯೆಗೆ ಎರಡು ಮೂರು ಕಾರಣಗಳಿರ ಬಹುದು. ವಿವಿಧ ಕೋನಗಳಿಂದ ತನಿಖೆ ನಡೆಸಲಾಗುತ್ತಿದ್ದು, ಸಮಗ್ರ ವಿಚಾರಣೆಯ ನಂತರವೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಉಡುಪಿ ಎಸ್‌ಪಿ ಕೆ.ಅರುಣ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಕ್ರೇಟ್‌ ಗೆ ಪಿಕಪ್ ಢಿಕ್ಕಿ-ಸಾವಿರಾರು ರೂ. ಮೌಲ್ಯದ ನಂದಿನಿ ಹಾಲು ರಸ್ತೆ ಪಾಲು

Published

on

ಉಡುಪಿ: ಮಿಲ್ಕ್ ಬೂತ್ ಎದುರು ಕ್ರೇಟ್‌ನಲ್ಲಿ ಇರಿಸಿದ್ದ ನಂದಿನಿ ಹಾಲಿನ ಶೇಖರಣೆಗೆ ಪಿಕಪ್‌ ವಾಹನವೊಂದು ಢಿಕ್ಕಿ ಹೊಡೆದು ಸಾವಿರಾರು ರೂಪಾಯಿ ಮೌಲ್ಯದ ನಂದಿನಿ ಹಾಲು ರಸ್ತೆ ಪಾಲಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಡೆದಿದೆ.

ಈ ಅಪಘಾತದಲ್ಲಿ ಬೈಕ್ ಹಾಗೂ ಸೈಕಲ್ ಸವಾರರಿಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಚಾಲಕನು ದ್ವಿಚಕ್ರ ವಾಹನವೊಂದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರಿಸಿದ್ದ ಹಾಲಿನ ಕ್ರೇಟ್‌ಗಳಿಗೆ ಪಿಕಪ್‌ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಹಾಲಿನ ಪ್ಯಾಕೆಟ್‌ ಶೇಖರಿಸಿಟ್ಟಿದ್ದ ಕ್ರೇಟ್‌ಗಳೆಲ್ಲ ಚೆಲ್ಲಾ ಪಿಲ್ಲಿಯಾಗಿದ್ದು, ಅಪಾರ ಪ್ರಮಾಣದ ಹಾಲು ರಸ್ತೆ ಪಾಲಾಗಿದೆ. ಪಿಕಪ್ ವಾಹನ ಚಾಲಕನ ಅತೀ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಪಿಕಪ್‌ ಚಾಲಕ ಪರಾರಿಯಾಗಿದ್ದಾನೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Kundapura: ಲಂಚ ಪ್ರಕರಣ- ಸಬ್‌ ಇನ್‌ಸ್ಪೆಕ್ಟ್ರರ್ ಶಂಭುಲಿಂಗಯ್ಯ ಅಮಾನತು

Published

on

ಕುಂದಾಪುರ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕ‌ರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ ಪಿ ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ನಿಯೋಜಿಸಲಾಗಿತ್ತು.

Continue Reading

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending