Connect with us

DAKSHINA KANNADA

27.100 ಕೆಜಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ನೀರುಮಾರ್ಗದಲ್ಲಿ ಬಂಧನ..!

Published

on

ಮಂಗಳೂರು: ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಅಲ್ಟೋ 800 ಕಾರಿನಲ್ಲಿ ಸಾಗಿಸುತ್ತಿದ್ದ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಾಸರಗೋಡು ಬಂಬ್ರಾಣ ಮೊಗೇರು ನಿವಾಸಿ ಕಿರಣ್‌ ರಾಜ್‌ ಶೆಟ್ಟಿ(24) ಎಂಬಾತನನ್ನು ಬಂಧಿತ ಆರೋಪಿ.


ಈತನಿಂದ ಪೊಲೀಸರು 27.100 ಕೇಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರ ತಂಡ ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದೆ. ಆರೋಪಿಯಿಂದ ಆಲ್ಟೋ ಕಾರು, 27.100 ಕೆಜಿ ಗಾಂಜಾ, ಮೊಬೈಲ್ ಫೋನ್, ನಗದು 1500 ರೂಪಾಯಿ ವಶಪಡಿಸಿಕೊಳ್ಳಲಾಗಿದೆ.

ಇವೆಲ್ಲದರ ಒಟ್ಟು ಮೌಲ್ಯ 9,88,500 ರೂಪಾಯಿ ಎಂದು ಅಂದಾಜಿಸಲಾಗಿದೆ.
ಆರೋಪಿಯು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಆರೋಪಿ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

DAKSHINA KANNADA

Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!

Published

on

ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ  ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Continue Reading

LATEST NEWS

Trending