Wednesday, May 18, 2022

ಆ್ಯಸಿಡ್‌ ಎರಚಿದ್ದ ಆರೋಪಿ ತಮಿಳುನಾಡಿನಲ್ಲಿ ಧ್ಯಾನದಲ್ಲಿದ್ದಾಗ ಬಂಧನ: ತಪ್ಪಿಕೊಳ್ಳುವಾಗ ಗುಂಡೇಟು

ಬೆಂಗಳೂರು: ಪ್ರೀತಿ ನಿರಾಕರಿಸಿದರ ಯುವತಿ ಮೇಲೆ ಆ್ಯಸಿಡ್‌ ಎರಚಿ ಪರಾರಿಯಾಗಿದ್ದ

ಆರೋಪಿ ನಾಗೇಶ್‌ ಬಾಬುವನ್ನು ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಶುಕ್ರವಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರಿಗೆ ಕರೆತರುವ ವೇಳೆ ಮೂತ್ರ ವಿಸರ್ಜನೆಗೆಂದು ಇಳಿದು ಪರಾರಿಯಾಗುವ ವೇಳೆ ತಪ್ಪಿಸಲು ಯತ್ನಿಸಿದಾಗ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ.


‘ಏಪ್ರಿಲ್ 28ರಂದು ಕೃತ್ಯ ಎಸಗಿದ್ದ ನಾಗೇಶ್, ತಮಿಳುನಾಡಿಗೆ ಹೋಗಿ ಸ್ವಾಮೀಜಿ ವೇಷ ಧರಿಸಿದ್ದ. ತಿರುವಣ್ಣಾಮಲೈನಲ್ಲಿರುವ ಶಿವ ದೇವಸ್ಥಾನದ ಕೊಠಡಿಯೊಂದರಲ್ಲಿ ಉಳಿದುಕೊಂಡಿದ್ದ.

ನಿತ್ಯವೂ ಧ್ಯಾನ ಹಾಗೂ ಪೂಜೆಯಲ್ಲಿ ತೊಡಗಿದ್ದ. ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರಿಗೂ ಉಪದೇಶ ಮಾಡುತ್ತಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಆರೋಪಿ ಪತ್ತೆಗೆ ಎಂಟು ತಂಡಗಳನ್ನು ರಚಿಸಲಾಗಿತ್ತು. ಒಂದು ತಂಡ,

ತಮಿಳುನಾಡಿನ ಎಲ್ಲ ದೇವಸ್ಥಾನಗಳಲ್ಲಿ ಶೋಧ ನಡೆಸುತ್ತಿತ್ತು. ಶಿವ ದೇವಸ್ಥಾನದಲ್ಲಿ ಹೊಸ ಸ್ವಾಮೀಜಿ ಬಂದಿರುವ ಮಾಹಿತಿ ಸ್ಥಳೀಯರಿಂದ ಗೊತ್ತಾಗಿತ್ತು.

ಪೊಲೀಸರ ತಂಡ, ಭಕ್ತರ ವೇಷದಲ್ಲಿ ದೇವಸ್ಥಾನದೊಳಗೆ ಹೋಗಿತ್ತು. ಸ್ವಾಮೀಜಿ ವೇಷದಲ್ಲಿದ್ದ ನಾಗೇಶ್‌ನನ್ನು ನೋಡಿ ಖಚಿತಪಡಿಸಿಕೊಂಡಿತ್ತು.

ನಂತರ, ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ ಎಂದು ತಿಳಿಸಿವೆ.

‘ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿರುವ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಏ. 28 ಬೆಳಿಗ್ಗೆ ಆರೋಪಿ ಆ್ಯಸಿಡ್ ಎರಚಿದ್ದ.

ಇದೀಗ ಆರೋಪಿ ಸಿಕ್ಕಿಬಿದ್ದಿದ್ದು, ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದು ಮೂಲಗಳು ಹೇಳಿವೆ.

‘ಏಳು ವರ್ಷದಿಂದ ಸ್ನೇಹ ಹೊಂದಿದ್ದ ಯುವತಿ, ತನ್ನನ್ನು ಪ್ರೀತಿಸಲು ನಿರಾಕರಿಸಿದರು’ ಎಂಬ ಕಾರಣಕ್ಕೆ ಆ್ಯಸಿಡ್ ಎರಚಿದ್ದ.

LEAVE A REPLY

Please enter your comment!
Please enter your name here

Hot Topics

ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್‌ ಪಲ್ಟಿ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ....

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...