ಹಲ್ಲೆ ಮತ್ತು ದೌರ್ಜನ್ಯ ಮಾಡುವ ಅಧಿಕಾರ ಯಾರಿಗೂ ಇಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿ: ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ. ಸದಾನಂದ ಗೌಡ ಅವರ ಬಗ್ಗೆ ಆಕ್ಷೇಪಾರ್ಹ ಬ್ಯಾನರ್ ಅನ್ನು ಪುತ್ತೂರು ಬಸ್ ನಿಲ್ದಾಣದ ಬಳಿ ಪ್ರದರ್ಶಿಸಿ ಅದಕ್ಕೆ ಚಪ್ಪಲಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 9 ಜನರನ್ನು ಬಂಧಿಸಿ, ಹಲ್ಲೆ ಮಾಡಿ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ.
ಈ ಸುದ್ದಿ ಇಡೀ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.
ಈ ವಿಷಯ ತಿಳಿದ ಕೋಟ ಶ್ರೀನಿವಾಸ್ ಪೂಜಾರಿ ಇದಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕು. ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ ಎಂದಿದ್ದಾರೆ.
ಹಲ್ಲೆ ಮತ್ತು ದೌರ್ಜನ್ಯ ಮಾಡುವ ಅಧಿಕಾರ ಯಾರಿಗೂ ಇಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂಬ ಅಗ್ರಹವನ್ನು ಬಿಜೆಪಿ ಮಾಡಿದೆ.
ಜಿಲ್ಲಾ ಮಟ್ಟದಲ್ಲಿ ತನಿಖೆ ಮಾಡುವುದಾಗಿ ಎಸ್ ಪಿ ಹೇಳಿದ್ದಾರೆ. ನಳಿನ್ ಕುಮಾರ್ ಕಟೀಲು ಇದನ್ನು ಖಂಡಿಸಿದ್ದಾರೆ. ತನಿಖೆ ನಡೆಸುವುದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.
ಕಾಂಗ್ರೇಸ್ ಸರ್ಕಾರ ಬಂದ ಕೂಡಲೇ ರಾಜ್ಯದಲ್ಲಿ ಅನಾಹುತಗಳು ಹೆಚ್ಚಾಗುತ್ತಿದೆ. ಇನ್ನು ಆತಂಕದ ವಾತವರಣ ಸೃಷ್ಟಿಯಾಗಲಿದೆ.
ರಾಷ್ಟ್ರ ವಿರೋಧಿ ಕೃತ್ಯ ಮಾಡುವವರಿಗೆ ಸಿಗುವ ಪ್ರೋತ್ಸಾಹ ಆತಂಕಕಾರಿಯಾಗಿದೆ.
ವಿಪಕ್ಷ ಸ್ಥಾನದಲ್ಲಿ ನಿಂತು ಬಿಜೆಪಿ ಇದನ್ನು ಗಂಭೀರವಾಗಿ ನೋಡುತ್ತಿದೆ, ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡಿದರೆ ನಾವು ಸಹಿಸಲ್ಲ.
ಬಿಜೆಪಿ ಇದಕ್ಕೆ ಪ್ರತಿರೋಧ ಮಾಡುವ ಜನಪರ ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜಾರಿಗೆ ತರಬೇಕು ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು.
ಹೊಸ ಮುಖ್ಯಮಂತ್ರಿ ಕಾಂಗ್ರೆಸ್ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೋಟ ಅವರು ಒತ್ತಾಯಿಸಿದರು.