ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ಅನಂತ್ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಕೊನೇ ಕ್ಷಣದಲ್ಲಿ ಗೈರಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಪಕ್ಷ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿದರು.
ಇದೇ ವೇಳೆ ಅನಂತ್ ನಾಗ್ ಸಹ ಸೇರ್ಪಡೆಯಾಗುವವರಿದ್ದರು. ಆದರೆ ಕೊನೇ ಕ್ಷಣದಲ್ಲಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿ ತೀವ್ರ ಕುತೂಹಲ ಮೂಡಿಸಿದರು.
ಮುಂದಿನ ವಾರ ಸೇರ್ಪಡೆ
ಬಲ್ಲಮೂಲಗಳ ಪ್ರಕಾರ ಮುಂದಿನ ವಾರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಅನಂತ್ ನಾಗ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಗಳು ನಡೆದಿದ್ದವು.