Home ಕರ್ನಾಟಕ ವಾರ್ತೆ ಬಾರದ ಲೋಕಕ್ಕೆ ತೆರಳಿದ ಚಿರಂಜೀವಿ ಸರ್ಜಾ: ಮಧ್ಯಾಹ್ನ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರೀಯೆ…

ಬಾರದ ಲೋಕಕ್ಕೆ ತೆರಳಿದ ಚಿರಂಜೀವಿ ಸರ್ಜಾ: ಮಧ್ಯಾಹ್ನ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರೀಯೆ…

ಮಧ್ಯಾಹ್ನ 1 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ: ಅಂತ್ಯಕ್ರಿಯೆಗೆ ಕುಟುಂಬಸ್ಥರು, ಸಿನಿಮಾ ಗಣ್ಯರು ಮಾತ್ರ ಭಾಗಿ..

ಬೆಂಗಳೂರು: ಸ್ಯಾಂಡಲ್‌ ವುಡ್‌ ನಟ, ಸರ್ಜಾ ಕುಟುಂಬದ ಕುಡಿ ಚಿರಂಜೀವಿ ಸರ್ಜಾ ಅವರು ನಿನ್ನೆ (ಜೂನ್ 7) ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಇಂದು ಸಂಜೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದ ನೆಲಗುಳಿ ಗ್ರಾಮದಲ್ಲಿರುವ ಸಹೋದರ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.

ಬಸವನಗುಡಿಯಲ್ಲಿ ಇರುವ ಚಿರು ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 6.30ರಿಂದಲೇ ಅಭಿಮಾನಿಗಳು, ಸ್ನೇಹಿತರು ಮತ್ತು ಚಿತ್ರರಂಗದ ಅನೇಕರು ಆಗಮಿಸುತ್ತಿದ್ದಾರೆ.

ಮಧ್ಯಾಹ್ನ 12ರ ವರೆಗೆ ಅಂತಿಮ ದರ್ಶನಕ್ಕೆ ಸಮಯ ನೀಡಲಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ 1 ಗಂಟೆಯವರೆಗೂ ಅಂತಿಮ ದರ್ಶನ ಮುಂದುವರಿಯಲಿದೆ.

ನಂತರ ಮೃತದೇಹವನ್ನು ತೆರೆದ ವಾಹನದಲ್ಲಿ ಧ್ರುವ ಸರ್ಜಾ ಫಾರ್ಮ್‌ ಹೌಸ್‌ಗೆ ಪಾರ್ಥಿವ ಶರೀರ ರವಾನೆ ಆಗಲಿದೆ.

ಅಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರಿನ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಸಲು ಮೊದಲು ಕುಟುಂಬಸ್ಥರು ನಿರ್ಧರಿಸಿದ್ದರು.

ತಾತ ಶಕ್ತಿ ಪ್ರಸಾದ್ ಅವರ ಸಮಾಧಿ ಪಕ್ಕದಲ್ಲೇ ಚಿರು ಸರ್ಜಾ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎನ್ನಲಾಗಿತ್ತು.

ಆದ್ರೆ ತಮ್ಮ ಫಾರ್ಮ್‌ ಹೌಸ್‌ನಲ್ಲಿಯೇ ಸಹೋದರನ ಅಂತ್ಯಕ್ರಿಯೆ ಮಾಡಬೇಕು ಎಂದು ಧ್ರುವ ಸರ್ಜಾ ಹಂಬಲಿಸಿದ್ದಾರೆ.

ಅದಕ್ಕೆ ಕುಟುಂಬದ ಎಲ್ಲ ಸದಸ್ಯರೂ ಸಮ್ಮತಿ ಸೂಚಿಸಿದ್ದಾರೆ. ಇನ್ನು ಚಿರಂಜೀವಿ ಸರ್ಜಾ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಈಗಾಗಲೇ ಚಿತ್ರರಂಗದ ಅನೇಕರು ಆಗಮಿಸಿ, ಚಿರು ಅಂತಿಮ ದರ್ಶನವನ್ನು ಪಡೆದುಕೊಂಡಿದ್ದಾರೆ.

ದರ್ಶನ್‌, ಸುದೀಪ್‌, ಜಗ್ಗೇಶ್‌, ಯಶ್‌, ಗಣೇಶ್‌, ಸೃಜನ್‌ಲೋಕೇಶ್‌, ಸುಮಲತಾ ಅಂಬರೀಶ್‌, ಉಪೇಂದ್ರ, ತಾರಾ, ಸುಧಾರಾಣಿ ಮಂತಾದವರು ಆಗಮಿಸಿ, ಚಿರು ಪತ್ನಿ ಮೇಘನಾ ರಾಜ್‌ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದು, ಪೊಲೀಸರು ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದ್ದಾರೆ.

ಹಿರಿಯ ಕಲಾವಿದ ಶಕ್ತಿಪ್ರಸಾದ್ ಅವರ ಮೊಮ್ಮಗನಾಗಿರುವ ಚಿರಂಜೀವಿ ಸರ್ಜಾ ಅವರು, ಪತ್ನಿ ಮೇಘನಾ ರಾಜ್, ಸಹೋದರ ಧ್ರುವ ಸರ್ಜಾ, ತಂದೆ, ತಾಯಿ ಸೇರಿದಂತೆ ಬಂಧು- ಬಳಗ ಹಾಗೂ ಅಪಾರ ಗೆಳೆಯರು, ಅಭಿಮಾನಿ ವರ್ಗದವರನ್ನು ಅಗಲಿದ್ದಾರೆ.

ಕನಕಪುರ ಸಮೀಪದ ನೆಲಗುಳಿಯಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ವಿಶಾಲವಾದ ಜಾಗದ ಮಧ್ಯೆ ಗುಂಡಿಯನ್ನು ತೆಗೆಯಲಾಗುತ್ತಿದೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪೆಂಡಾಲ್, ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಅಂತ್ಯಕ್ರಿಯೆ ಸ್ಥಳಕ್ಕೆ ಎಲ್ಲರಿಗೂ ಅವಕಾಶ ನೀಡದೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುವುದು.

ಸಿನಿಮಾ ರಂಗದ ಗಣ್ಯರು, ಕುಟುಂಬದವರು ಹೊರತುಪಡಿಸಿ ಉಳಿದವರಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.

ಬೆಂಗಳೂರಿನ ನಿವಾಸದಲ್ಲಿ ಅಂತಿಮ ದರ್ಶನದ ನಂತರ ಮಧ್ಯಾಹ್ನ ಧ್ರುವ ಸರ್ಜಾ ಫಾರ್ಮ್ ಗೆ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುವುದು.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!