Thursday, August 11, 2022

‘ಸ್ವಾತಿಮುತ್ತು’ ಖ್ಯಾತಿಯ ನಟಿ ಮೀನಾ ಪತಿ ನಿಧನ

ಬೆಂಗಳೂರು: ಬಹುಭಾಷಾ ತಾರೆ , ಸ್ವಾತಿಮುತ್ತು ಖ್ಯಾತಿಯ ನಟಿ ಮೀನಾ ಅವರ ಗಂಡ ವಿದ್ಯಾಸಾಗರ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ.

ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಿದ್ಯಾಸಾಗರ್ ಅವರು ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.


ನಟಿ ಮೀನಾ ಬೆಂಗಳೂರಿನ ವಿದ್ಯಾಸಾಗರ್ ಅವರನ್ನು 2009ರಲ್ಲಿ ವಿವಾಹವಾಗಿದ್ದರು. ಅವರಿಗೆ ನೈನಿಕಾ ಎಂಬ ಮಗಳಿದ್ದಾಳೆ.

ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು ಎಂದು ತಿಳಿದು ಬಂದಿದೆ.


ಬಾಲ ಕಲಾವಿದೆಯಾಗಿ ಚಲನಚಿತ್ರಗಳಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ್ದ ಮೀನಾ, ನಂತರ 90ರ ದಶಕದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು.

ದಕ್ಷಿಣ ಭಾರತ ಚಿತ್ರರಂಗದ ಅನೇಕ ನಟರೊಂದಿಗೆ ನಟಿಸಿದ್ದಾರೆ. ನಟಿ ಮೀನಾ ಅವರು ತೆಲುಗು, ತಮಿಳು, ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ.

ವಿದ್ಯಾಸಾಗರ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ನಡೆಯಲಿದೆ

LEAVE A REPLY

Please enter your comment!
Please enter your name here

Hot Topics

‘ಪ್ರವೀಣ್‌’ ಬೇಟೆಗೆ 6 ವೆಹಿಕಲ್‌ 10 ಹತ್ಯೆಕೋರರು..!: ಪಿನ್‌ ಟು ಪಿನ್‌ ಡಿಟೇಲ್ಸ್‌

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ನಡೆದ 16 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಒಟ್ಟು...

ಬೆಳ್ತಂಗಡಿ: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್  ಬಳಂಜದಲ್ಲಿ ...

ಟಿ.ವಿ ನೋಡಲು ಬರುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ-ವ್ಯಕ್ತಿ ಬಂಧನ

ತೀರ್ಥಹಳ್ಳಿ: ಟಿ.ವಿ ನೋಡಲು ಬರುತ್ತಿದ್ದ ಪಕ್ಕದ ಮನೆಯ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗದ ತೀರ್ಥ ಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಮುರುಳೀಧರ್ ಭಟ್ ಬಂಧನಕ್ಕೊಳಗಾದ ವ್ಯಕ್ತಿ.ತೀರ್ಥಹಳ್ಳಿಯ ನಾಲೂರಿನಲ್ಲಿ...