Connect with us

FILM

Pune : ಖ್ಯಾತ ನಟ ರವೀಂದ್ರ ಮಹಾಜನಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

Published

on

ಚಿತ್ರ ರಂಗದ ಹೆಸರಾಂತ ಬಹುಭಾಷಾ ನಟ ರವೀಂದ್ರ ಮಹಾಜನಿ ಅವರ ಮೃತ ದೇಹ ಕೊಳೆತ  ಸ್ಥಿತಿಯಲ್ಲಿ  ಪತ್ತೆಯಾಗಿದ್ದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. 

ಪುಣೆ : ಚಿತ್ರ ರಂಗದ ಹೆಸರಾಂತ ಬಹುಭಾಷಾ ನಟ ರವೀಂದ್ರ ಮಹಾಜನಿ ಅವರ ಮೃತ ದೇಹ ಕೊಳೆತ  ಸ್ಥಿತಿಯಲ್ಲಿ  ಪತ್ತೆಯಾಗಿದ್ದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಪುಣೆಯ ಅವರ ಫ್ಲ್ಯಾಟ್ ನಲ್ಲಿ ಮೃತದೇಹ ಪತ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ.

ಪುಣೆಯ ತಾಳೇಗಾಂವ್ ದಭಾಡೆ ಸಮೀಪದ ಅಂಬಿ ಗ್ರಾಮದಲ್ಲಿ ರವೀಂದ್ರ ವಾಸವಾಗಿದ್ದರು.

ಅವರು ವಾಸುತ್ತಿದ್ದ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ಫ್ಲ್ಯಾಟ್ ಬಾಗಿಲು ತೆರೆದಾಗ ರವೀಂದ್ರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂರ್ನಾಲ್ಕು ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ನಂತರ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಶುಕ್ರವಾರ ಸಂಜೆಯಿಂದಲೇ ಅವರ ಫ್ಲ್ಯಾಟ್ ನಿಂದ ವಾಸನೆ ಬರುತ್ತಿತ್ತು ಎಂದು ನಿವಾಸಿಗಳು ಮಾಹಿತಿ ನೀಡಿದ್ದಾರೆ.

70-80ರ ದಶಕದಲ್ಲಿ ಪ್ರಮುಖ ನಟರಾಗಿ ರವೀಂದ್ರ ಗುರುತಿಸಿಕೊಂಡಿದ್ದರು. ಹಲವಾರು ಹಿಟ್ ಚಿತ್ರಗಳನ್ನೂ ಅವರು ನೀಡಿದ್ದಾರೆ.

ಮರಾಠಿ, ಗುಜರಾತಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ರವೀಂದ್ರ ನಟಿಸಿದ್ದಾರೆ. ಮರಾಠಿ ಚಿತ್ರರಂಗವಂತೂ ಅವರನ್ನು ವಿನೋದ್ ಖನ್ನಾ ಎಂದೇ ಅಭಿಮಾನದಿಂದ ಕರೆಯುತ್ತಿತ್ತು.

Click to comment

Leave a Reply

Your email address will not be published. Required fields are marked *

FILM

2ನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್-ಅನುಷ್ಕಾ

Published

on

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

 

Mumbai : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದೆ ಕೊಹ್ಲಿ ಮತ್ತು ಅನುಷ್ಕಾ ಮುಂಬೈಯ ಹೆರಿಗೆ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿರುವುದಾಗಿಯೂ ತಿಳಿದುಬಂದಿದೆ.

ಈ ಸಂದರ್ಭ ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ ಎನ್ನಲಾಗಿದೆ.

ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ತಕ್ಷಣ ವಿರಾಟ್​ ಅವರ ಅಭಿಮಾನಿಗಳು ಪ್ರಿನ್ಸ್​ ಕಿಂಗ್​ ಕೊಹ್ಲಿ ನೋಡಲು ಕಾತರವಾಗಿದ್ದೇವೆ ಎಂದು ಕಮೆಂಟ್​ ಮಾಡಲಾರಂಭಿಸಿದ್ದಾರೆ.

ಸದ್ಯ ವಿರಾಟ್​ ಅವರು ವಿಶ್ವಕಪ್​ ಟೂರ್ನಿಯಲ್ಲಿ ಪಾಲ್ಗೊಂಡಿದ್ದು ಇಂಗ್ಲೆಂಡ್​ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡುತ್ತಿದ್ದಾರೆ.

Continue Reading

DAKSHINA KANNADA

100 ದಿನಗಳ ಸಂಭ್ರಮದಲ್ಲಿ ‘ಸರ್ಕಸ್’-ಇಂದು ಉಚಿತ ಪ್ರದರ್ಶನ !

Published

on

ನೂರು ದಿನಗಳ ಸಂಭ್ರಮದಲ್ಲಿರುವ ಸರ್ಕಸ್ ಚಿತ್ರ ಇಂದು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಸಂಜೆ 7 ಗಂಟೆಗೆ ಫ್ರೀ ಉಚಿತ ಪ್ರದರ್ಶನವನ್ನು ಕಾಣಲಿದೆ. 

 

ಮಂಗಳೂರು : ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅವರು ದೊಡ್ಮನೆ ಆಟದಲ್ಲಿ ಗೆದ್ದ ಮೇಲೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತುಳು ಸಿನೆಮಾ ‘ಸರ್ಕಸ್’ ಮೂಲಕ ರೂಪೇಶ್ ಶೆಟ್ಟಿ ಕೆರಿಯರ್‌ಗೆ ಬಿಗ್ ಬ್ರೇಕ್ ಸಿಕ್ಕಿದೆ.

ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರೋ ಶೆಟ್ರ ಸರ್ಕಸ್‌ಗೆ ಇದೀಗ ನೂರು ದಿನಗಳ ಸಂಭ್ರಮ

ಈ ಸಂಭ್ರಮದ ಹಿನ್ನೆಲೆ ಇಂದು ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಸಂಜೆ 7 ಗಂಟೆಗೆ ಫ್ರೀ ಉಚಿತ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಉಚಿತ ಪ್ರದರ್ಶನದ ಜೊತೆ ಪಾಲ್ಗೊಳ್ಳಲು ಇಚ್ಚಿಸುವವರು 9606679152 ಈ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸೀಟ್ ಬುಕ್ ಮಾಡಿಕೊಳ್ಳಬಹುದು.

ಹಾಗಾದ್ರೆ ಬೇಗ ಬೇಗ ಕರೆ ಮಾಡಿ ಉಚಿತ ಶೋ ನೋಡಿ ಎಂಜಾಯ್ ಮಾಡಿ.

ಇನ್ನು ಈ ಚಿತ್ರದಲ್ಲಿ ಯುವ ಪ್ರತಿಭೆ ರಚನಾ ರೈ ನಾಯಕಿಯಾಗಿ ಮಿಂಚಿದ್ದಾರೆ. ಸಲಗ ಖ್ಯಾತಿಯ ಯಶ್ ಶೆಟ್ಟಿ ಸರ್ಕಸ್ ಮೂಲಕ ತುಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಚಿತ್ರದಲ್ಲಿ ನವೀನ್ ಡಿ. ಪಡೀಲ್, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಳ್ಳಾಲ್, ನಿತೇಶ್ ಶೆಟ್ಟಿ ಎಕ್ಕಾರ್, ರೂಪಾ ವರ್ಕಾಡಿ ಹಾಗು ಪಂಚಮಿ ಭೋಜರಾಜ್ ಇದ್ದಾರೆ.


ಶೂಲಿನ್ ಫಿಲಂಸ್, ಮುಗ್ರೋಡಿ ಫಿಲಂಸ್ ಲಾಂಛನದಡಿಯಲ್ಲಿ ಸರ್ಕಸ್ ತಯಾರಾಗಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮಂಜುನಾಥ ಅತ್ತಾವರ ನಿರ್ಮಿಸಿದ್ದಾರೆ.

ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ನಿರಂಜನ ದಾಸ್ ಕ್ಯಾಮರಾ ವರ್ಕ್​​, ರಾಹುಲ್ ವಶಿಷ್ಠ ಸಂಕಲನ, ಲೋಯ್ ಅವರ ಸಂಗೀತ ಚಿತ್ರಕ್ಕಿದೆ.

 

Continue Reading

FILM

‘ಅನಿಮಲ್’ ಚಿತ್ರಕ್ಕೆ 4 ಕೋಟಿ ಸಂಭಾವನೆ ಪಡೆದ ರಶ್ಮಿಕಾ ಮದಣ್ಣ…!

Published

on

ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿರುವ ರಶ್ಮಿಕ ಬರೋಬ್ಬರಿ ಆನಿಮಲ್ ಚಿತ್ರಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. 

 

Mumbai: ಕನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಮುಟ್ಟಿದ್ದೆಲ್ಲವೂ ಚಿನ್ನವೇ ಆಗ್ತಿದೆ. ಸಾಲು ಸಾಲು ಸಿನಿಮಾ ಆಫರ್‌ಗಳನ್ನ ನಟಿ ಬಾಚಿಕೊಳ್ತಿದ್ದಾರೆ.

ಈಗ ಬಾಲಿವುಡ್ ಅಂಗಳದಲ್ಲಿ ಆನಿಮಲ್ ಚಿತ್ರದಿಂದಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.

ಈ ಚಿತ್ರಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ಭಾರೀ ಮೊತ್ತದ ಸಂಭಾವನೆಯನ್ನೇ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿರುವ ರಶ್ಮಿಕ ಬರೋಬ್ಬರಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನುತ್ತಿದೆ ಬಾಲಿ ವುಡ್

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾದಲ್ಲಿ ನಟಿಸಲು ರಣ್‌ಬೀರ್ ಕಪೂರ್ 75 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

ಗುಡ್ ಬೈ, ಮಿಷನ್ ಮಜ್ನು ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅನಿಮಲ್ ಚಿತ್ರದ ಮೂಲಕ ರಶ್ಮಿಕಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳಲು ಸಹಾಯವಾಗುತ್ತ ಎಂಬುವುದನ್ನು ಕಾದು ನೋಡಬೇಕಿದೆ.

Continue Reading

LATEST NEWS

Trending