ಬೆಂಗಳೂರು : ನಟ ಸಂಚಾರಿ ವಿಜಯ್ ಅವರು ನಿಧನರಾಗಿದ್ದಾರೆ. ನಾಳೆ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ನಾಳೆ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ನಟ ಸಂಚಾರಿ ವಿಜಯ್ ಅವರ ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದ್ದು, ಜೀವಸಾರ್ಥಕ ಪೌಂಢೇಶನ್ ಮೂಲಕ ಅವರ ಅಂಗಾಂಗ ದಾನ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಕಾನೂನಾತ್ಮಕ ಪ್ರಕ್ರಿಯೆ ಬೆಳಿಗ್ಗೆಯವರೆಗೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಅವರ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಅಂತ್ಯ ಸಂಸ್ಕಾರ ನಡೆಯಲಿದೆ.
ಇನ್ನೂ ಸಂಚಾರಿ ವಿಜಯ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೂ ನಾಳೆ ಬೆಳಿಗ್ಗೆ 8 ರಿಂದ 10 ಗಂಟೆಯವರೆಗೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಈ ಬಳಿಕ ಸಂಜೆಯ ಮಧ್ಯಾಹ್ನ ಇಲ್ಲವೇ ಸಂಜೆಯ ವೇಳೆಯಲ್ಲಿ ಅವರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಸೋದರ ಸಿದ್ದೇಶ್ ಕುಮಾರ್ ಅಪಘಾತ ಸಂಬಂಧ ಠಾಣೆಗೆ ದೂರು ನೀಡಿದ್ದಾರೆ.
ನಮ್ಮಣ್ಣನಿಗೆ ಅಪಘಾತವಾಗಲು ಬೈಕ್ ಚಲಾಯಿಸುತ್ತಿದ್ದ ಗೆಳೆಯ ನವೀನ್ ಕಾರಣ ಎಂದು ನಟ ಸಂಚಾರಿ ವಿಜಯ್ ಸಹೋದರ ಸಿದ್ದೇಶ್ ಕುಮಾರ್ ದೂರಿನಲ್ಲಿ ನೇರವಾಗಿ ಆರೋಪಿಸಿದ್ದಾರೆ. ಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಿದ್ದೇಶ್ ಕುಮಾರ್ ದೂರು ದಾಖಲಿಸಿದ್ದಾರೆ. ನನ್ನ ಸಹೋದರ ವಿಜಯ್ ನನ್ನು ಬೈಕ್ ನಲ್ಲಿ ಹಿಂದೆ ಕೂರಿಸಿಕೊಂಡು ಜೆಪಿ ನಗರ 7ನೇ ಹಂತದ ರಸ್ತೆಯಲ್ಲಿ ವೇಗವಾಗಿ, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದಾರೆ. ಹೀಗಾಗಿ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಇಬ್ಬರು ವಾಹನ ಸಮೇತ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸಂಚಾರಿ ವಿಜಯ್ ತಲೆಗೆ ಹಾಗೂ ತೊಡೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಶನಿವಾರ ರಾತ್ರಿ ಅಪಘಾತಕ್ಕೊಳಗಾದ ಸಂಚಾರಿ ವಿಜಯ್, ನವೀನ್ ಇಬ್ಬರನ್ನೂ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಚಾರಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ವೈದ್ಯರು ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾದ ಕಾರಣ ಬ್ರೈಡ್ ಡೆಡ್ ಆಗಿ ಸಾವನ್ನಪ್ಪಿದ್ದಾರೆ.
ಅಪಘಾತದಿಂದಲೇ ಅಣ್ಣನ ಸಾವು ಸಂಭವಿಸಿದೆ. ಹೀಗಾಗಿ ಅಪಘಾತಕ್ಕೆ ಕಾರಣನಾದ ನವೀನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಸಿದ್ದೇಶ್ ಕುಮಾರ್ ಮನವಿ ಮಾಡಿದ್ದಾರೆ. ನಟ ಸಂಚಾರಿ ವಿಜಯ್ ಸೋದರ ಸಿದ್ದೇಶ್ ದೂರಿನನ್ವಯ ನವೀನ್ ಮೇಲೆ ಜಯನಗರ ಸಂಚಾರಿ ಠಾಣೆಯಲ್ಲಿ FIR ದಾಖಲಾಗಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ನವೀನ್ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೈಕ್ ಸ್ಕಿಡ್ ಆಗಿ ಬಿದ್ದ ಬಳಿಕ ಸ್ಥಳದಲ್ಲೇ ನಟ ಸಂಚಾರಿ ವಿಜಯ್ ಪ್ರಜ್ಞಾಹೀನರಾಗಿದ್ದರು. ಬೈಕ್ ಚಲಾಯಿಸುತ್ತಿದ್ದ ನವೀನ್ಗೆ ಗಾಯಗಳಾಗಿತ್ತಾದರೂ ಪ್ರಜ್ಞೆ ಇತ್ತು. ಎದ್ದು ಬಂದು ವಿಜಯ್ರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವುದನ್ನು ಕಂಡೊಡನೆ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ನೇಹಿತರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು. ಕೇವಲ 37 ವರ್ಷಕ್ಕೆ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಸಾವಿನ ಮನೆ ಸೇರಿದ್ದಾರೆ. ನಾಳೆ ಕುಟುಂಬಸ್ಥರು ಅಂತ್ಯಕ್ತಿಯೆ ನೆರವೇರಿಸಲಿದ್ದಾರೆ.
ನೋವಿನಲ್ಲೂ ವಿಜಯ್ರ ಅಂಗಾಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
ರಂಗಪ್ಪ ಹೋಗ್ಬಿಟ್ನಾ’ ಸಿನಿಮಾ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಸಂಚಾರಿ ವಿಜಯ್, 24ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದರು. ಇದೇ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಕೂಡ ಒಲಿದಿತ್ತು. ನಟರಾದ ವಾಸುದೇವರಾವ್, ಚಾರುಹಾಸನ್ ಬಳಿಕ ರಾಷ್ಟ್ರಪ್ರಶಸ್ತಿ ಪಡೆದ ಹೆಮ್ಮೆ ಇವರದ್ದು.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚಮಹಳ್ಳಿಯಲ್ಲಿ 1983ರ ಜುಲೈ 18ರಂದು ಜನಿಸಿದ್ದ ಸಂಚಾರಿ ವಿಜಯ್, ಬಾಲ್ಯದಲ್ಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತೊಡಗಿಸಿಕೊಂಡಿದ್ದರು. ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಕೆಲಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ರಂಗಭೂಮಿಯತ್ತ ಕಾಲಿಟ್ಟರು. ‘ಸಂಚಾರಿ’ ನಾಟಕ ತಂಡದಲ್ಲಿ ನಟನಾ ತಾಲೀಮು ಆರಂಭಿಸಿದ್ದ ವಿಜಯ್, ಸಿನಿರಂಗಕ್ಕೆ ಬಂದ ನಂತರ ಸಂಚಾರಿ ವಿಜಯ್ ಅಂತಲೇ ಜನಪ್ರಿಯತೆ ಗಳಿಸಿದ್ದರು. ಕರ್ನಾಟಕ ಶಾಸ್ತ್ರೀಯ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನೂ ಕಲಿತಿದ್ದರು. ಇತ್ತೀಚಿಗೆ ‘ಆಟಕ್ಕುಂಟು ಲೆಕ್ಕಕ್ಕಿಲ್ಲ’ ಹಾಗೂ ‘ಮೇಲೊಬ್ಬ ಮಾಯಾವಿ’ ಚಿತ್ರಗಳಲ್ಲೂ ನಟಿಸಿದ್ದಾರೆ.
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 12ನೇ ವರ್ಷದ ಪಾದಯಾತ್ರೆ ನ.26ರಂದು ಜರುಗಿತು. ತಾಲೂಕಿನ 81 ಗ್ರಾಮಗಳಿಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು.
ಉಜಿರೆ ದೇವಸ್ಥಾನದ ವಠಾರದಲ್ಲಿ ಮಧ್ಯಾಹ್ನ ಶ್ರೀ ಭಗವಾನ್ ಶಿರಡಿಸಾಯಿ ಸತ್ಯಸಾಯಿ ಸೇವಾ ಕ್ಷೇತ್ರ ಹಳಕೋಟೆ ಬೆಳ್ತಂಗಡಿ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಉಜಿರೆ ದೇವಸ್ಥಾನದ ಧ್ವಜಸ್ತಂಭದ ಬಳಿ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಪುಜ್ವಲಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀ ಮಂಜುನಾಥ ಸ್ವಾಮಿಯ ಭಾವಚಿತ್ರವುಳ್ಳ ಟ್ಯಾಬ್, ವಿವಿಧ ಯಕ್ಷಗಾನ ವೇಷ ಭೂಷಣಗಳು, ಭಜನಾ ತಂಡಗಳು, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು, ವಿಪತ್ತು ನಿರ್ವಹಣಾ ತಂಡ, ವಿವಿಧ ಸಂಘ ಸಂಸ್ಥೆಯವರು ಪಾದಯಾತ್ರೆಯಲ್ಲಿ ಶಿಸ್ತಿನಿಂದ ಭಾಗವಹಿಸಿದರು. ಚೆಂಡೆ, ವಾದ್ಯ, ಸಮವಸ್ತ್ರಧಾರಿ ಭಕ್ತರು, ಯಕ್ಷಗಾನ ವೇಷಧಾರಿಗಳು, ಭಜನಾ ತಂಡಗಳ ಕುಣಿತ ಭಜನೆ ಪಾದಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜನಜಾಗೃತಿ ವೇದಿಕೆ ಸ್ಮಾಪಕಾಧ್ಯಕ್ಷ ವಸಂತ ಸಾಲ್ಯಾನ್, ಯು.ಸಿ ಪೌಲೋಸ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ನಿಕಟಪೂರ್ವ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉಜಿರ ಲಕ್ಷ್ಮೀ ಗ್ರೂಪ್ ಮಾಲಕ ಮೋಹನ್ ಕುಮಾರ್, ಲಯನ್ಸ್ ಕ್ಲಬ್ ಪೂರಣ್ ವರ್ಮ, ಮಾಜಿ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಸಿರಿಗ್ರಾಮೋದ್ಯೋಗ ಸಂಸ್ಥೆಯ ನಿರ್ದೇಶಕ ಕೆ.ಎನ್.ಜನಾರ್ದನ್, ನ್ಯಾಯವಾದಿ ಧನಂಜಯ್ ರಾವ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನ, ಮಾಜಿ ಅಧ್ಯಕ್ಷ, ತಿಮ್ಮಪ್ಪ ಗೌಡ ಬೆಳಾಲು, ಡಿ.ಎ ರಹಿಮಾನ್, ಉದ್ಯಮಿ ಮೋಹನ ಶೆಟ್ಟಿಗಾರ್, ರಾಘವೇಂದ್ರ ನಾಯಕ್, ಕೊರಗಪ್ಪ ಗೌಡ ಚಾರ್ಮಾಡಿ, ಸೀತಾರಾಮ ಬೆಳಾಲ್, ರವೀಂದ್ರ ಶೆಟ್ಟಿ, ಬಳಂಜ, ಡಾ. ಶ್ರೀಧರ ಭಟ್, ರವಿ ಚಕ್ಕಿತ್ತಾಯ, ವಡಿವೇಲು ಗುರುವಾಯನಕೆರೆ, ಮಮತಾ ಶೆಟ್ಟಿ, ಅಡೂರು ವೆಂಕಟ್ರಾವ್, ಜಯಂತಿ ಪಾಲೇದು, ಗಣೇಶ್ ಗೌಡ,, ಪುಭಾಕರ ಪೂಸಂದೋಡಿ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಬೂದಪ್ಪ ಗೌಡ, . ಉದ್ಯಮಿ ರಾಘವೇಂದ್ರ ಬೈಪಾಡಿತ್ತಾಯ, ವಿವೇಕ್ ವಿನ್ಸೆಂಟ್ ಪಾಯಿಸ್, ಮಮತಾ ಎಂ. ಶೆಟ್ಟಿ,, ಶ್ಯಾಮ್ ಸುಂದರ್ ನಡ, ಶಶಿಧರ ಕಲ್ಮಂಜ, ಅರುಣ್ ಕುಮಾರ್, ಡಾ. ಬಿ.ಎ ಕುಮಾರ ಹಗ್ಗ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ| ಶ್ರೀನಾಥ್, ನ್ಯಾಯವಾದಿ ಧನಂಜಯ್ ರಾವ್, ಅಡೂರು ವೆಂಕಟ್ರಾವ್,, ತಿಮ್ಮಪ್ಪ ಗೌಡ ಬೆಳಾಲು, ಪುಷ್ಪರಾಜ ಹೆಗ್ಡೆ ಮಡಂತ್ಯಾರು, ಉಜಿರ ಗ್ರಾ.ಪಂ ಅಧ್ಯಕ್ಷ ಮಾಜಿ ಅಧ್ಯಕ್ಷ ಪುಷ್ಪಾವತಿ ಆರ್ ಶೆಟ್ಟಿ, ವಿಠಲ ಶೆಟ್ಟಿ, ಲಾಯಿಲ, ಶಂಕರ ಹೇಡ, ಯೋಗೀಶ್ ಕುಮಾರ್ ನಡಕ್ಕರ, ಗಿರೀಶ್ ವೇಣೂರು, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರುಗಳಾದ ಡಿ.ಎ ರಹಿಮಾನ್, ತಿಮ್ಮಪ್ಪ ಗೌಡ, ಕಿಶೋರ್ ಹಗ್ಡೆ, ಪುಷ್ಪರಾಜ ಹಗ್ಡೆ ಮಡಂತ್ಯಾರು, ರತ್ನವರ್ಮ ಬುಣು, ಪ್ರಶಾಂತ ಪಾರಂಕಿ, ದುಗೇಗೌಡ, ತಾಲೂಕು ಯೋಜನಾಧಿಕಾರಿಗಳು, ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ೧೫ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು, ನಾಗರಿಕರು, ಹಗಡೆ ಅಭಿಮಾನಿಗಳು ಮರವಣಿಗೆಯ ಜೊತ ಸಾಗಿದರು.
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನವೆಂಬರ್ 9ರಂದು ನಡೆದಿದ್ದ ಲಾಕಪ್ ಡೆ*ತ್ ನಲ್ಲಿ ಮೃ*ತಪಟ್ಟ ಕೇರಳ ಮೂಲದ ಬಿಜು ಮೋನ್ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ.
ಬಿಜು ಮೋನ್ ಮೈಮೇಲೆ ಕೆಲ ಗಾಯಗಳ ಗುರುತು, ಮೊಣಕಾಲಿನ ಕೆಳಗೆ ಕೆಲ ಗಾಯದ ಗುರುತು ಕಂಡುಬಂದಿತ್ತು ಎಂದಿರುವ ಬಿಜು ಮೋನ್ ಕುಟುಂಬಸ್ಥರು ಹೇಳಿದ್ದಾರೆ. ಲಾಕಪ್ ಡೆತ್ ಪ್ರಕರಣದ ಬಗ್ಗೆ ಸಿಒಡಿ ತನಿಖೆ ನಡೆಯುತ್ತಿದ್ದು, ಆರೋಪಿ ಕುಸಿದು ಬಿದ್ದು ಸಾವನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಬಳಿಕ ಲಾಕಪ್ ಡೆತ್ ಎಂದು ಪ್ರಕರಣ ಬೆಳಕಿಗೆ ಬಂತು ಎಂದವರು ಹೇಳಿದ್ದಾರೆ.
ಇದೊಂದು ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿರುವ ಕುಟುಂಬಸ್ಥರು, ಸಿಐಡಿ ಮೂಲಕ ಕೂಲಂಕಷ ತನಿಖೆಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಐಡಿಗೂ ಪತ್ರ ಮೂಲಕ ಮನವಿ ಮಾಡಿದ್ದಾರೆ. ನಮಗೆ ನ್ಯಾಯ ಬೇಕು, ತಪ್ಪಿತಸ್ಥ ಪೊಲೀಸರಿಗೆ ಕಠಿಣ ಶಿಕ್ಷೆಯಾಗ ಬೇಕು ಎಂದು ಆಗ್ರಹಿಸಿರುವ ಬಿಜು ಮೋನ್ ಸಹೋದರ ಬಿನು ಯೋಹನ್ನಾನ್ ಹೇಳಿದ್ದಾರೆ. ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಲು ಕರೆದ ಹಿನ್ನೆಲೆಯಲ್ಲಿ ನಾವು ಉಡುಪಿಗೆ ಬಂದಿದ್ದೇವೆ ಎಂದವರು ತಿಳಿಸಿದರು.
ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ ಎಂದ ಅವರು ಮಹಿಳೆಯೋರ್ವಳ ದೂರಿನ ಹಿನ್ನೆಲೆಯಲ್ಲಿ ನನ್ನ ಸಹೋದರನನ್ನ ಬಂಧಿಸಲಾಗಿದೆ ಎಂದಿದ್ದರು. ಆದರೆ ದೂರು ಕೊಟ್ಟ ಮಹಿಳೆ, ಅವರ ಕೊಟ್ಟ ದೂರಿನ ಪ್ರತಿಯ ಬಗ್ಗೆ ಮಾಹಿತಿ ನೀಡಿಲ್ಲ.
ಇವೆಲ್ಲವನ್ನೂ ನಾವು ಕೇರಳ ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ ಎಂದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ಹೀಗಾಗಿ ಬ್ರಹ್ಮಾವರ ಪೊಲೀಸರ ಮೇಲೆ ತುಂಬಾ ಅನುಮಾನವಿದೆ ಎಂದು ಯೋಹಾನ್ನನ್ ಹೇಳಿದರು.
ಮಂಗಳೂರು/ಹೈದರಾಬಾದ್: 11 ವರ್ಷದ ಬಾಲಕನೊಬ್ಬ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಒಟ್ಟಾಗಿ ಬಾಯಿಗೆ ಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವ ಅಘಾತಕಾರಿ ಘಟನೆ ಹೈದರಾಬಾದ್ ನ ಶಾಲೆಯೊಂದರಲ್ಲಿ ನಡೆದಿದೆ.
6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮನೆಯಿಂದ ತಂದಿದ್ದ ಪೂರಿಯನ್ನು, ಮಧ್ಯಾಹ್ನದ ಊಟಕ್ಕೆ ಕೂತಿದ್ದ ಸಮಯದಲ್ಲಿ ಒಂದೇ ಬಾರಿಗೆ ಮೂರಕ್ಕಿಂತ ಹೆಚ್ಚು ಪೂರಿಗಳನ್ನು ಬಾಯಿಗೆ ಹಾಕಿಕೊಂಡಿದ್ದ. ಈ ವೇಳೆ ಉಸಿರಾಡಲು ಸಾಧ್ಯವಾಗದೆ ವಿದ್ಯಾರ್ಥಿ ಸಾವನ್ನಪಿದ್ದಾನೆ.