ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಮತ್ತೊಂದು ನಟಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ನಟಿ ಸಂಜನಾ ಗುಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂದರ್ಭ ಸಂಜನಾ ಸಿಸಿಬಿ ಪೊಲೀಸರ ಜೊತೆ ಕೂಗಾಡಿ ರಂಪಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ಸಿಸಿಬಿ ದಾಳಿ ವೇಳೆ ನಟಿ ಸಂಜನಾ ಮನೆಯಲ್ಲಿ ಮಲಗಿದ್ದು, ನಿದ್ರೆಯಿಂದ ಎದ್ದಿರಲಿಲ್ಲ. ಸಿಸಿಬಿ ಪೊಲೀಸರು ಮನೆಯ ಬಳಿ ಬಂದ ಸಂದರ್ಭದಲ್ಲಿ ಸಂಜನಾ ತಾಯಿ ಬಾಗಿಲು ತೆಗೆದಿದ್ದಾರೆ. ನಂತರ ನೋಟಿಸ್ ತೋರಿಸಿದ ಅಧಿಕಾರಿಗಳು ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಮಲಗಿದ್ದ ಸಂಜನಾ ಅವರಿಗೆ ವಿಚಾರವನ್ನು ತಿಳಿಸಿ, ತನಿಖೆಗೆ ಸಹಕಾರ ನೀಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಸಂಜನಾ ಅವರನ್ನು ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ.
ಈ ವೇಳೆ ಕೂಗಾಡಿರುವ ಸಂಜನಾ ಅವರು, ಮನೆಯಲ್ಲಿ ಏನೂ ಸಿಗದೇ ಇದ್ದರೂ ನನ್ನನ್ನು ವಶಕ್ಕೆ ಪಡೆಯುತ್ತಿದ್ದೀರಿ. ನಾನೇಕೆ ನಿಮ್ಮೊಂದಿಗೆ ಬರಬೇಕು. ನನಗೆ ನೀವು ನೋಟಿಸ್ ಕೊಟ್ಟಿಲ್ಲ. ಏಕಾಏಕಿ ದಾಳಿ ನಡೆಸಿದ್ದೀರಿ. ನಾನೇನು ಆರೋಪಿನಾ? ನಾನು ಬರುವುದಿಲ್ಲ ಎಂದು ರಂಪಾಟ ಮಾಡಿದ್ದಾರೆಂದು ತಿಳಿದುಬಂದಿದೆ.
ಸಂಜಾನ ಅವರು ತೀವ್ರವಾಗಿ ಕೂಗಾಡುತ್ತಿದ್ದಂತೆಯೇ ಅಧಿಕಾರಿಗಳು, ನೀವೀಗ ನಮ್ಮ ವಶದಲ್ಲಿದ್ದೀರಿ. ಹೀಗಾಗಿ ನಾವು ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ನಾವು ಹೇಳಿದ್ದನ್ನು ನೀವು ಕೇಳಬೇಕು. ಸರ್ಜ್ ವಾರೆಂಟ್ ಸಂದರ್ಭದಲ್ಲಿ ವಿರೋಧ ಮಾಡಿದರೆ ನಿಮಗೇ ಕಷ್ಟವಾಗುತ್ತದೆ ಎಂದು ಹೇಳಿ, ಸಂಜನಾ ಅವರನ್ನು ತಣ್ಣಗಾಗುವಂತೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. ಇನ್ನು ಸಂಜನಾ ಅವರನ್ನು ಇದೀಗ ವಶಕ್ಕೆ ಪಡೆದಿರುವ ಪೊಲೀಸರು, ಸಂಜನಾ ಅವರ ಮೊಬೈಲ್, ಪರ್ಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ ಅವರು ಚೊಚ್ಚಲ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಹರ್ಷಿಕಾ ಮತ್ತು ಭುವನ್ ಜೋಡಿ ಭೇಟಿ ನೀಡಿದ್ದಾರೆ.
ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇನೆ ಎಂದು ಹರ್ಷಿಕಾ ದಂಪತಿ ಹರಿಸಿಕೊಂಡಿದ್ದರು. ಅದರಂತೆ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ದೇಗುಲಕ್ಕೆ ಭೇಟಿ ಮೂಕಾಂಬಿಕೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನೂ 2023ರ ಆಗಸ್ಟ್ 24ರಂದು ಕೊಡಗಿನಲ್ಲಿ ಹರ್ಷಿಕಾ ಮತ್ತು ಭುವನ್ ಹೊಸ ಬಾಳಿಗೆ ಕಾಲಿಟ್ಟರು. ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದರು. ಈ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಪೂಜಾ ಗಾಂಧಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಕಳೆದ ವರ್ಷ ಅಕ್ಟೋಬರ್ 3ರಂದು ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದರು. ಮಗಳ ಪಾಲನೆಯಲ್ಲಿ ಬ್ಯುಸಿಯಿರುವ ಹರ್ಷಿಕಾ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.
ಮಂಗಳೂರು/ಮುಂಬೈ : ಇತ್ತೀಚೆಗೆ ಬಾಲಿವುಡ್ ನಟ ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಆರ್ಯನ್ ಖಾನ್ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಅದರಲ್ಲಿ ಜ. 1ರಂದು ಹೊಸ ವರ್ಷಕ್ಕೆ ಶಾರುಖ್, ಪತ್ನಿ ಗೌರಿ ಖಾನ್, ಮಗ ಆರ್ಯನ್ ಖಾನ್ ಇಸ್ಲಾಂನ ಪವಿತ್ರ ಧಾರ್ಮಿಕ ಸ್ಥಳ ಮೆಕ್ಕಾಗೆ ತೆರಳಿದ್ದಾರೆ. ಗೌರಿ ಅವರು ಇಸ್ಲಾಂಗೆ ಮತಾಂತರ ಆಗಿದ್ದಾರೆ ಎನ್ನುವಂತೆ ಫೋಟೋ ವೈರಲ್ ಆಗಿತ್ತು.
ಆದರೆ ಬಳಿಕ ಇದು ಫೇಕ್ ಎಂದು ತಿಳಿದು ಬಂದಿದೆ. ಈ ಫೋಟೋವನ್ನು ಡೀಪ್ ಫೇಕ್ ಬಳಸಿ ಎಡಿಟ್ ಮಾಡಲಾಗಿದೆ.
“ಡೀಪ್ ಫೇಕ್” ಜಾಲಕ್ಕೆ ಖ್ಯಾತ ಸಿನಿ ತಾರೆಯರೆ ಸಿಲುಕುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಕಾಜಾಲ್, ಕತ್ರಿನಾ ಕೈಫ್, ಆಲಿಯಾ ಭಟ್ ಈಗಾಗಲೇ ಇದರ ಜಾಲಕ್ಕೆ ಸಿಲುಕಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಡೀಪ್ ಫೇಕ್ ಗಳನ್ನು ಸೃಷ್ಟಿಸಿ ವೈರಲ್ ಮಾಡಿದರೆ 1 ಲಕ್ಷ ರೂ. ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗುತ್ತವೆ. ರಾತ್ರಿ ಕಳೆದು ಬೆಳಕಾಗುವಷ್ಟರಲ್ಲಿ ಒಬ್ಬರ ಜೀವನವನ್ನೇ ಅಳಿಸುವಂತ ಶಕ್ತಿ ಈ ಇಂಟರ್ ನೆಟ್ ಗಿದೆ.
ನ್ಯಾಷನಲ್ ಸ್ಟಾರ್ ಯಶ್‌ಗೆ ಇಂದು (ಜ.8) 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಪತ್ನಿ ರಾಧಿಕಾ ಹಾಗೂ ಆಪ್ತರೊಂದಿಗೆ ಗೋವಾದಲ್ಲಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ.
ಗೋವಾದಲ್ಲಿ ಮಧ್ಯರಾತ್ರಿ ಯಶ್ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಬರ್ತ್‌ಡೇ ಆಚರಿಸಿ ಯಶ್ ಖುಷಿಪಟ್ಟಿದ್ದಾರೆ. ನಟನ ಆಪ್ತ ಪಾನಿ ಪುರಿ ಕಿಟ್ಟಿ, KVN ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭಕೋರಿದ್ದಾರೆ.
ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ತಿಳಿಸಿದ್ದರು. ಆದರೆ ಇದೀಗ ‘ಟಾಕ್ಸಿಕ್’ ಲುಕ್‌ನಿಂದ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಫ್ಯಾನ್ಸ್ ನಿರೀಕ್ಷೆಗೆ ಅವರು ನಿರಾಸೆ ಮಾಡಿಲ್ಲ. ರಾಕಿ ಭಾಯ್ ಬರ್ತ್‌ಡೇ ಪ್ರಯುಕ್ತ 59 ಸೆಕೆಂಡ್ ಗ್ಲಿಂಪ್ಸ್ ರಿವೀಲ್ ಆಗಿದ್ದು, ಡ್ರಗ್ಸ್ ಮಾಫಿಯಾ ಕುರಿತ ಚಿತ್ರವಾಗಿದೆ. ರಿಲೀಸ್ ಆದ ಗ್ಲಿಂಪ್ಸ್‌ನಲ್ಲಿ ಕಲರ್‌ಫುಲ್ ಸೆಟ್‌ನಲ್ಲಿ ನಟನ ಸ್ಟೈಲೀಶ್ ವಾಕ್, ಹಾಟ್ ಮ್ಯಾನರಿಸಮ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.