Connect with us

DAKSHINA KANNADA

ಕಟೀಲು ಕ್ಷೇತ್ರಕ್ಕೆ ಪತಿ ಜೊತೆ ನಟಿ ಶುಭಾಪೂಂಜಾ ಭೇಟಿ- ‘ಅವಕಾಶ ಸಿಕ್ಕರೆ ತುಳು ಚಿತ್ರದಲ್ಲಿ ನಟಿಸುವೆ’

Published

on

ಕಟೀಲು: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಿಗ್ ಬಾಸ್ ಸ್ಪರ್ಧಿ, ನಟಿ ಶುಭಾಪೂಂಜಾ ಇಂದು ಭೇಟಿ ನೀಡಿದರು. ಮದುವೆ ಆದ ಬಳಿಕ ಪ್ರಥಮ ಬಾರಿಗೆ ದೇವಾಲಯಕ್ಕೆ ಇವರು ಪತಿಯ ಜೊತೆ ಆಗಮಿಸಿದರು.

ದೇವರ ದರ್ಶನ ಪಡೆದ ಅವರು ಪ್ರಸಾದ ಸ್ವೀಕರಿಸಿದರು. ಅತ್ಯಂತ ಸರಳ ರೀತಿಯಲ್ಲಿ ಮಾಮೂಲಿ ಭಕ್ತರಂತೆ ಭೇಟಿ ನೀಡಿದ ನಟಿ ಶುಭಾಪೂಂಜಾ ಭೋಜನ ಶಾಲೆಗೆ ಸರತಿಯಲ್ಲೇ ಸಾಗಿ ಎಲ್ಲಾ ಭಕ್ತರಂತೆ ನೆಲದ ಕೂತು ದೇವರ ಅನ್ನಪ್ರಸಾದ ಸ್ವೀಕರಿಸಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮದುವೆ ಆದ ನಂತರ ಮೊದಲ ಬಾರಿಗೆ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ.

ಕರಾವಳಿ ಅಂದರೆ ತುಂಬಾ ಇಷ್ಟ, ಅದಕ್ಕಾಗಿ ಕರಾವಳಿಯಲ್ಲೇ ಮದುವೆ ಆಗಿದ್ದೇನೆ, ತುಳು ಚಿತ್ರರಂಗ ಬೆಳೆಯುತ್ತಿದ್ದು,

ತುಳು ಭಾಷೆ , ತುಳು ಸಿನಿಮಾ ಅಂದರೆ ತುಂಬಾ ಇಷ್ಟ ಅವಕಾಶ ಸಿಕ್ಕಿದರೆ ತುಳು ಚಿತ್ರದಲ್ಲಿ ಅಭಿನಯಿಸುವೆ,

ಈ ಬಗ್ಗೆ ಬೆಂಗಳೂರಿನಲ್ಲಿ ಚರ್ಚೆ ಆಗುತ್ತಿದೆ.  ಕೋಸ್ಟಲ್‌ವುಡ್ ಇನ್ನಷ್ಟು ಬೆಳೆಯಲಿ, ಇನ್ನೂ ಹೆಚ್ಚಿನ ಥೀಯೇಟರ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿ ಎಂದರು.

ಶುಭಾ ಪೂಂಜಾ ಜೊತೆ ಅವರ ಪತಿ ಸುಮಂತ್, ಪ್ರವೀಣ್ ಜವರೇ ಗೌಡ, ಚೈತ್ರ ಪ್ರವೀಣ್ ದೇವಾಲಯಕ್ಕೆ ಆಗಮಿಸಿದ್ದರು.

DAKSHINA KANNADA

ಕಾರ್ಕಳ : ಕಲಿಯಲು ಕಷ್ಟ ಎಂದು ಪ್ರಾ*ಣ ಕಳೆದುಕೊಂಡ ವಿದ್ಯಾರ್ಥಿ

Published

on

ಕಾರ್ಕಳ: ಕಾಲೇಜಿನಲ್ಲಿ ಕಲಿಯಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಎಂಬಿಎ ವಿದ್ಯಾರ್ಥಿಯೋರ್ವ ಆ*ತ್ಮಹ*ತ್ಯೆ ಮಾಡಿಕೊಂಡ ಘಟನೆ ಜ.19ರಂದು ರಾತ್ರಿ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳದ ಕೆ.ಸುಧಾಕರ ಎಂಬವರ ಪುತ್ರ ಕೆ.ವೆಂಕಟೇಶ (22) ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮಂಗಳೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿರುವ ಬಗ್ಗೆ ತಂದೆಯನ್ನು ಹೇಳುತ್ತಿದ್ದನು.

ಸುಮಾರು 10 ದಿನಗಳಿಂದ ಮೌನವಾಗಿದ್ದು, ಇದೇ ಕಾರಣದಿಂದ ಅವರು ಮನೆಯ ಹಿಂದುಗಡೆ ಇರುವ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಉಳ್ಳಾಲ : ಕೋಟೆಕಾರು ಬ್ಯಾಂಕ್ ರಾಬರಿ ಪ್ರಕರಣ; ಖದೀಮರು ಸಿಕ್ಕಿ ಬಿದ್ದಿದ್ದು ಎಲ್ಲಿ?

Published

on

ಉಳ್ಳಾಲ : ಕೋಟೆಕಾರು ವ್ಯವಸಾಯ ಸಹಕಾರಿ ಸಂಘ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ಶುಕ್ರವಾರ(ಜ.17) ನಡೆದ ಕೋಟ್ಯಂತರ ರೂ. ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಅಮ್ಮನಕೋವಿಲ್‌ನ ಮುರುಗಂಡಿ ತೇವರ್ (36), ಮುಂಬೈ ಗೋಪಿನಾಥ್ ಚೌಕ ನಿವಾಸಿ ಯೋಸುವಾ ರಾಜೇಂದ್ರನ್ (35) , ಮುಂಬೈ ಚೆಂಬೂರ್‌ನ ತಿಲಕ್‌ನಗರದ ಕಣ್ಣನ್ ಮಣಿ (36) ಬಂಧಿತ ಆರೋಪಿಗಳು ಎಂದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಸಹಕಾರಿ ಸಂಘದಿಂದ ದರೋಡೆ ಮಾಡಿ ಕೇರಳ ಮೂಲಕ ತಮಿಳುನಾಡಿಗೆ ಆರೋಪಿಗಳು ಪರಾರಿಯಾಗಿದ್ದರು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ದರೋಡೆಗೆ ಬಳಸಿದ ಕಾರು, ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ :ಆರ್‌ಜಿಕರ್ ವೈದ್ಯೆ ಅ*ತ್ಯಾಚಾರ, ಕೊ*ಲೆ ಪ್ರಕರಣ : ಆರೋಪಿ ಸಂಜಯ್ ರಾಯ್‌ಗೆ ಶಿಕ್ಷೆ ಪ್ರಕಟ

ಸ್ಥಳೀಯರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸ್ಥಳೀಯರ ಬೆಂಬಲ ಇಲ್ಲದೆ ಈ ಕೃತ್ಯ ಮಾಡಲು ಸಾಧ್ಯ ಇಲ್ಲ. ತನಿಖೆ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

Continue Reading

DAKSHINA KANNADA

ಮಂಗಳೂರು : ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ : ಪ್ರಯಾಗ್ ರಾಜ್ ಕುಂಭಮೇಳ ಪ್ರಯಾಣ

Published

on

ಮಂಗಳೂರು : 144 ವರ್ಷಗಳ ಬಳಿಕ ನಡೆಯುವ ಮಹಾ ಕುಂಭಮೇಳದಲ್ಲಿ ಅಖಿಲ ಭಾರತೀಯ ಸಂತಸಮಿತಿ ಕರ್ನಾಟಕ ಘಟಕದಿಂದ ಕಾರ್ಯಕರ್ತರು 2025 ಜನವರಿ 25 ರಿಂದ 30 ರವರೆಗೆ ಭಾಗವಹಿಸುವುದಾಗಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.

ವಿಶ್ವದ ಅತೀ ದೊಡ್ಡ ಉತ್ಸವವೇ ಮಹಾ ಕುಂಭಮೇಳ, ನಾನಾ ಯತಿ ಶ್ರೇಷ್ಠರು ಭಾಗವಹಿಸುವ ಕುಂಭಮೇಳದಲ್ಲಿ ವ್ಯತ್ಯಾಸ್ತ ಹೈದವ ಸಂಘಟನೆಗಳಿಂದ ಚರ್ಚೆ ಬೈಠಕ್ ನಡೆಯುವುದು. ಜನವರಿ 21,22 ದಿನಾಂಕದಲ್ಲಿ ಅಖಿಲ ಭಾರತೀಯ ಸಂತ ಸಮಿತಿಯ ಬೈಠಕ್ ನಡೆಯಲಿದೆ. ಅಖಿಲ ಭಾರತ ಸಂತ ಸಮಿತಿ ಹಾಗೂ ಗಂಗಾ ಮಹಾಸಭೆಯ ಸಂಯುಕ್ತತೆಯಲ್ಲಿ ವಾಸ್ತವ್ಯ ಉಪಹಾರದ ವ್ಯವಸ್ಥೆಯು ಸಂಘಟನೆಯಿಂದ ಮಾಡಲಾಗಿದೆ.

ಇದನ್ನೂ ಓದಿ :  ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?

ರಾಜ್ಯಾಧ್ಯಕ್ಷರಾದ ಮಂಗಳೂರು ಓಂ ಶ್ರೀ ಮಠದ ಸ್ವಾಮಿ ಹಾಗೂ ಮಾತಾಶ್ರೀ ಓಂ ಶ್ರೀ ಶಿವ ಜ್ಞಾನಮಹಿ ಸರಸ್ವತಿ ಸಮೇತ ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ, ಸಮಿತಿ ಮುಖ್ಯ ಕಾರ್ಯದರ್ಶಿ ಕೊಡಗು ಅರಸೀಗುಪ್ಪೆ ಶ್ರೀ ಮಂಜುನಾಥ ಕ್ಷೇತ್ರದ ಸ್ವಾಮಿ ಶ್ರೀ ರಾಜೇಶ್ ನಾಥ್ ಗುರೂಜಿ, ಸಂಘಟನಾ ಕಾರ್ಯದರ್ಶಿ ಕೊಡಗು ಬೆಂಗಳೂರು ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶೀ ಕೇಂದ್ರ ಸ್ವಾಮೀಜಿ, ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಅರಸೀಕೆರೆ ರುದ್ರಾಕ್ಷ ಫೌಂಡೇಶನ್ ಶ್ರೀ ಜಯಪ್ರಕಾಶ್ ಗುರೂಜಿ, ಕಾರ್ಯದರ್ಶಿಗಳಾದ ಕಡೂರು ಅಯ್ಯಪ್ಪ ಸ್ವಾಮಿ ಕ್ಷೇತ್ರದ ಶ್ರೀ ಭದ್ರಾರಾಜ್ ಸ್ವಾಮೀಜಿ, ಫೌಂಡರ್ ಶ್ರೀ ಮಹಾ ತಪಸ್ವಿ ಸೇವಾ ಪ್ರತಿಷ್ಠಾನ ಹರಿಹರ ಪರಂಪೂಜ್ಯ ಅವಧೂತ ಕವಿ ಗುರುರಾಜ ಗುರೂಜಿ ಹಾಗೂ ಸಮಿತಿಯ ಸಂಯೋಜಕ ಸಮಿತಿ ಅಧ್ಯಕ್ಷ ಅಡ್ವಕೇಟ್ ವೀರೇಶ್ ಅಜ್ಜಣ್ಣನವ‌ರ್ ಹರಿಹರ ಜೊತೆಯಲ್ಲಿ ಸ್ವಾಮೀಜಿಯವರ ಶಿಷ್ಯರು ಭಾಗವಹಿಸಲಿದ್ದಾರೆ.

Continue Reading

LATEST NEWS

Trending

Exit mobile version