FILM
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
Published
1 month agoon
By
NEWS DESK2ಸ್ಯಾಂಡಲ್‌ವುಡ್‌ನ ಹಲವು ಮಂದಿ ತಮ್ಮ ವೈವಾಹಿಕ ಜೀವನದ ಕುರಿತು ಕೋರ್ಟ್ ಮೆಟ್ಟಿಲೇರಿರುವ ಸಂಗತಿಗಳು ಹೆಚ್ಚಾಗಿದೆ. ಇದೀಗ ಸ್ಯಾಂಡಲ್‌ವುಡ್‌ನ ಮೋಸ್ಟ್ ಬ್ಯೂಟಿಫುಲ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಕೋರ್ಟ್ ಮೆಟ್ಟಿಲೇರಿದ್ದಾರೆ. ನಿನ್ನೆವರೆಗೂ ಎಲ್ಲಾ ಚೆನ್ನಾಗೇ ಇತ್ತಲ್ಲ.. ಇವತ್ತೇನಾಯ್ತು ಅನ್ನೋರಿಗೆ ಇಲ್ಲಿದೆ ಉತ್ತರ.
ಅಂದಹಾಗೆ, ಈ ಕೋರ್ಟ್ ಕೇಸ್ ನಿಜ ಜೀವನಕ್ಕೆ ಸಂಬಂಧಿಸಿದ್ದಲ್ಲ. ನಟಿ ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರು ಜೋರಾಗಿ ವಾದ ಮಾಡಿದ್ದಾರೆ. ಅಂದಹಾಗೆ, ಈ ಕೋರ್ಟ್ ಕೇಸ್ ನಿಜ ಜೀವನಕ್ಕೆ ಸಂಬಂಧಿಸಿದ್ದಲ್ಲ. ಇದು ಅವರಿಬ್ಬರೂ ಜೊತೆಯಾಗಿ ನಟಿಸಿರುವ ಜಾಹೀರಾತಿನ ದೃಶ್ಯ.
ಯಶ್ ಮತ್ತು ರಾಧಿಕಾ ಪಂಡಿತ್ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದು, ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಯಶ್ ವಕೀಲರ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು.
ಇದೀಗ ಆ ಜಾಹೀರಾತನ್ನು ಗಂಡ ಹೆಂಡತಿ ಇಬ್ಬರೂ ಹಂಚಿಕೊಂಡಿದ್ದಾರೆ. ಇದರಲ್ಲಿ ನಟಿ ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರು ಜೋರಾಗಿ ವಾದ ಮಾಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್ ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ.
ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್ ಫುಲ್ ಜೋಶ್‌ನಲ್ಲಿ ವಾದ ಮಾಡಿದ್ದಾರೆ. ಇದೀಗ ನಟ ಯಶ್ ಹಾಗೂ ರಾಧಿಕಾ ಅವರ ಈ ಜಾಹೀರಾತು ಸಖತ್ ವೈರಲ್ ಆಗಿದೆ.
FILM
ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್!
Published
12 hours agoon
06/12/2024By
NEWS DESK2ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಡಿಸೆಂಬರ್ 10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್ ಪರ ವಕೀಲರು ಹೈಕೋರ್ಟಿಗೆ ಈ ಒಂದು ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, ಹೀಗಾಗಿ ಸರ್ಜರಿ ಮಾಡಲು ಆಗುತ್ತಿಲ್ಲ ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದರು.
ಆದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್ ಪರ ವಕೀಲರು ಕೋರ್ಟ್ ಗೆ ಮೊರೆ ಹೋಗಿದ್ದಾರೆ. ಶಸ್ತ್ರಚಿಕಿತ್ಸೆ ಮಾಡುವವರೆಗೂ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಸಾಧ್ಯವಿಲ್ಲ. ಹೀಗಾಗಿ ಬೇಲ್ ಅವಧಿ ವಿಸ್ತರಿಸಲು ಮಧ್ಯಂತರ ಆದೇಶ ನೀಡಬೇಕೆಂದು ವಕೀಲರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಂಗಳೂರು/ಹೈದರಾಬಾದ್: ಪುಷ್ಪ-2 ಸಿನಿಮಾ ನಿನ್ನೆ ರಿಲೀಸ್ ಆಗಿದ್ದು, ಪುಷ್ಪರಾಜ್ ಮಾಸ್ ಜಾತ್ರೆ ಶುರುವಾಗಿದೆ. ಮೊದಲ ದಿನದಿಂದಲೇ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವಲ್ಲಿ ಯಶಸ್ವಿಯಾಗಿದೆ.
ಎಲ್ಲಾ ಭಾಷೆಗಳಲ್ಲಿ ಉತ್ತಮ ಯಶಸ್ಸನ್ನು ಗಳಿಸಿದೆ. ಪ್ರೀಮಿಯರ್ ಶೋಗಳಿಂದಲೇ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಪಡೆದುಕೊಂಡಿದೆ. ಪುಷ್ಪ-2 ಮುಂಗಡ ಬುಕ್ಕಿಂಗ್ ಮೂಲಕವೇ 100 ಕೋಟಿ ಕಲೆಕ್ಷನ್ ಮಾಡಿದ್ದು, ಬಿಡುಗಡೆಯಾದ ಫಸ್ಟ್ ಡೇ ಭರ್ಜರಿ ಓಪನಿಂಗ್ ಪಡೆದಿದೆ.
ಪ್ರೀಮಿಯರ್ ಶೋ ಮೂಲಕ ಚಿತ್ರ 10 ಕೋಟಿ ರೂಪಾಯಿ ಗಳಿಸಿತ್ತು. ನಿನ್ನೆ ಬಿಡುಗಡೆಯಾದ ಈ ಚಿತ್ರವು ಭಾರತದಲ್ಲಿ 165 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಸಿನಿಮಾದ ಒಟ್ಟು ಕಲೆಕ್ಷನ್ 175 ಕೋಟಿ ರೂಪಾಯಿ ಆಗಿದೆ. ಒಟ್ಟಾರೆ ವಿಶ್ವದಾದ್ಯಂತ ಒಟ್ಟು 250 ಕೋಟಿ ರೂಪಾಯಿ ಗಳಿಸಿರುವ ಸಾಧ್ಯತೆ ಇದೆ.
ಹಳೇ ದಾಖಲೆಗಳು ಪೀಸ್ ಪೀಸ್
ಭಾರತದಲ್ಲಿ RRR ಚಿತ್ರ ಮೊದಲ ದಿನ 133 ಕೋಟಿ ರೂಪಾಯಿ ಗಳಿಸಿತ್ತು. ಬಾಹುಬಲಿ 121 ಕೋಟಿ, ಕೆಜಿಎಫ್-2 116 ಕೋಟಿ ಗಳಿಸಿತ್ತು. ಈ ಎಲ್ಲಾ ದಾಖಲೆಗಳನ್ನು ಪುಷ್ಪ-2 ಅಳಿಸಿ ಹಾಕಿದೆ. ಪುಷ್ಪ-2 ಚಿತ್ರವು ಹೈದರಾಬಾದ್ ನಲ್ಲಿ 1549 ಶೋಗಳು ಪ್ರದರ್ಶನ ಕಂಡಿದೆ. ಕರ್ನಾಟಕದಲ್ಲಿ ಸುಮಾರು 1072 ಶೋಗಳು ಮತ್ತು ಚೆನ್ನೈನಲ್ಲಿ 244 ಶೋಗಳು ಆಗಿದೆ.
ಪುಷ್ಪ-2 ಮೊದಲ ದಿನದ ಕಲೆಕ್ಷನ್ 175 ಕೋಟಿಯಲ್ಲಿ ತೆಲುಗು ಅವತರಣಿಕೆಯಿಂದ 95.1 ಕೋಟಿ, ಹಿಂದಿಯಿಂದ 67 ಕೋಟಿ, ತಮಿಳಿನಿಂದ 7 ಕೋಟಿ, ಮಲಯಾಳಂನಿಂದ 5 ಕೋಟಿ, ಕನ್ನಡದಿಂದ 1 ಕೋಟಿ ರೂಪಾಯಿ ಗಳಿಸಿದೆ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಈ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.
ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.