Saturday, November 26, 2022

ನಟಿ ರಂಭಾ ಕಾರು ಅಪಘಾತ: ರಂಭಾ ಪುತ್ರಿಯ ಸ್ಥಿತಿ ಗಂಭೀರ…! ಪ್ರಾರ್ಥಿಸಲು ಅಭಿಮಾನಿಗಳಿಗೆ ಕರೆ

ಟೊರೆಂಟೊ : ದಕ್ಷಿಣ ಭಾರತದ ಜನಪ್ರಿಯ ನಟಿ ರಂಭಾ ಅವರ ಕಾರು ಅಪಘಾತಕ್ಕೀಡಾಗಿದ್ದು ಪುತ್ರಿಯ ಸ್ಥಿತಿ ಗಂಭೀರವಾಗಿದೆ. ಕೆನಾಡದಲ್ಲಿ  ಸೆಟಲ್ ಆಗಿರುವ ನಟಿ ರಂಭಾ ಮಕ್ಕಳನ್ನು ಶಾಲೆಯಿಂದ ಕರೆತರುವಾಗ ಈ ಅಪಘಾತ ಸಂಭವಿಸಿದೆ. 

ಕಾರಿನ ಏರ್​ಬ್ಯಾಗ್ ತೆರೆದುಕೊಂಡಿದ್ದರಿಂದ ನಟಿ ಮತ್ತು ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ ಮಗಳು ಸಶಾಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಕಾರಿನ ಫೊಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರಂಭಾ ಹಂಚಿಕೊಂಡಿದ್ದಾರೆ. ‘ನಮ್ಮ ಕಾರಿಗೆ ಮತ್ತೊಂದು ಕಾರು ಬಂದು ಗುದ್ದಿದೆ.

ಎಲ್ಲರೂ ಸೇಫ್ ಆಗಿದ್ದೇವೆ. ಸಶಾ ಆಸ್ಪತ್ರೆಯಲ್ಲೇ ಇದ್ದಾರೆ. ಬ್ಯಾಡ್ ಟೈಮ್​. ದಯವಿಟ್ಟು ಪ್ರಾರ್ಥಿಸಿ’ ಎಂದು ಅವರು ಅಭಿಮಾನಿಗಳಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಹೆಜಮಾಡಿ ಟೋಲ್ ಶುಲ್ಕ ಹೆಚ್ಚಳಕ್ಕೆ ಉಡುಪಿ ಶಾಸಕ ರಘುಪತಿ ಭಟ್ ತೀವ್ರ ವಿರೋಧ..!

ಸುರತ್ಕಲ್‌ನಲ್ಲಿ ಕಾರ್ಯಾಚರಿಸುತಿದ್ದ ಟೋಲ್‌ಗೇಟ್‌ನ್ನು ಮುಚ್ಚಿ ಅದನ್ನು ಹೆಜಮಾಡಿ ಟೋಲ್‌ಗೆ ವಿಲೀನಗೊಳಿಸಿ ಟೋಲ್ ಶುಲ್ಕ ಹೆಚ್ಚಳ ಮಾಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ತೀವ್ರವಾಗಿ ವಿರೋಧಿಸಿದ್ದಾರೆ.ಉಡುಪಿ : ಸುರತ್ಕಲ್‌ನಲ್ಲಿ...

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...