FILM
ಸೀರೆಯಲ್ಲಿ ಮಿರ-ಮಿರ ಮಿಂಚಿದ ರಶ್ಮಿಕಾ-ಬ್ಯೂಟಿಗೆ ಮುತ್ತಿಟ್ಟ ಸೂರ್ಯ
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ದುಬೈಗೆ ಹೋಗಿದ್ದು, ಸೀರೆ ಉಟ್ಟು ಮಿರ ಮಿರ ಮಿಂಚಿದ್ದಾರೆ.
ದುಬೈ: ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಗೆ ದುಬೈಗೆ ತೆರಳಿದ ರಶ್ಮಿಕಾ ಅಲ್ಲಿ ಗೋಲ್ಡನ್ ಬಣ್ಣದ ಸೀರೆ ತೊಟ್ಟು ಸಖತ್ ಪೋಸ್ ನೀಡಿದ್ದಾರೆ.
ಸೀರೆಯುಟ್ಟು ಫೋಸ್ ಕೊಟ್ಟಿರುವ ರಶ್ಮಿಕಾ ಮಂದಣ್ಣ, ನನಗೆ ಸೀರೆಯ ಮೇಲೆ ಪ್ರೀತಿ ಉಕ್ಕುವಂತೆ ಮಾಡಿದ್ದು ನೀವೇ ಎಂದಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬ್ಯೂಟಿಫುಲ್ ಫೋಟೋವನ್ನು ಪೋಸ್ಟ್ ಮಾಡುತ್ತಲೇ ಇರುತ್ತಾರೆ.
ಕ್ರೀಮ್ ಕಲರ್ ಸೀರೆ, ಮಿರರ್ ವರ್ಕ್ ಬ್ಲೌಸ್ ಧರಿಸಿರುವ ರಶ್ಮಿಕಾ ಕ್ಯಾಮೆರಾ ನಾಚುವಂತೆ ಪೋಸ್ ಕೊಟ್ಟಿದ್ದಾರೆ. ನಟಿಯ ಅಂದ ಕಂಡು ಸೂರ್ಯ ಕೂಡ ಕಣ್ಣು ಹೊಡೆದಿದ್ದಾನೆ.
ಬಾಲಿವುಡ್ ನಟ ರಣಬೀರ್ ಕಪೂರ್ ಜೊತೆಗಿನ ಅನಿಮಲ್ ಸಿನಿಮಾ ಶೀಘ್ರದಲ್ಲೇ ತೆರೆ ಮೇಲೆ ಬರಲಿದ್ದು, ರಶ್ಮಿಕಾ ಮಂದಣ್ಣರನ್ನು ಹೊಸ ಲುಕ್ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.
ಈಗೇನಿದ್ರು ರಶ್ಮಿಕಾ ಮಂದಣ್ಣ ಹವಾ ಅಂತಾನೇ ಹೇಳ್ಬೋದು .. ಏನಂತಿರಾ?
FILM
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
ಬೆಂಗಳೂರು : ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಧಾರಾವಾಹಿ ‘ಗೀತಾ’. ಈ ಧಾರಾವಾಹಿಯ ನಾಯಕ ‘ವಿಜಯ್’ ಅಂದ್ರೆ ಧನುಷ್ ಗೌಡ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ವಿವಾಹ ಶುಕ್ರವಾರ ಅದ್ದೂರಿಯಾಗಿ ನೆರವೇರಿತು.
ಧನುಷ್ ಗೌಡ ಅವರು ಸಂಜನಾ ಎಂಬವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಸಂಜನಾ ಧನುಷ್ ಅತ್ತೆಯ ಮಗಳಾಗಿದ್ದು, ಇದು ಅರೆಂಜ್ಡ್ ಮ್ಯಾರೇಜ್ ಆಗಿದೆ.
ಇನ್ನು ಮದುವೆಯಲ್ಲಿ ಕುಟುಂಬದವರು, ಆಪ್ತರು, ಸ್ನೇಹಿತರು ಉಪಸ್ಥಿತರಿದ್ದರು.
ಧನುಷ್ ಅವರು ಆರತಕ್ಷತೆ ಕಾರ್ಯಕ್ರಮವೂ ಅದ್ದೂರಿಯಾಗಿ ನಡೆದಿದೆ.
ಧನುಷ್ ಅವರ ಮದುವೆ, ಆರತಕ್ಷತೆ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!
ಭವ್ಯಾ ಗೌಡ, ಮೌನ ಗುಡ್ಡೇಮನೆ, ರಿತ್ವಿಕ್ ಕೃಪಾಕರ್, ಸೇರಿ ಅನೇಕ ಕಿರುತೆರೆ ಹಿರಿತೆರೆ ತಾರೆಯರು ಆಗಮಿಸಿದ್ದರು.
ಮದುವೆ ಸಂಭ್ರಮದ ನಡುವೆಯೂ ಧನುಷ್ ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಧನುಷ್ ನಡೆಗೆ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
FILM
WATCH VIDEO : ಕಾಸರಗೋಡಿನಲ್ಲಿ ಕಾಣಿಸಿಕೊಂಡ ಸನ್ನಿ ಲಿಯೋನ್
ಕಾಸರಗೋಡು : ಸನ್ನಿಲಿಯೋನ್ ಯಾರಿಗೆ ತಾನೆ ಗೊತ್ತಿಲ್ಲ. ತನ್ನ ಮಾದಕ ನೋಟದಿಂದ, ನಟನೆಯಿಂದ ಸಿಕ್ಕಾಪಟ್ಟೆ ಫೇಮಸ್ ಆಗಿರುವ ಮೋಹಕ ತಾರೆ. ಸದ್ಯ ಅವರು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಚಿತ್ರವೊಂದರ ಶೂಟಿಂಗ್ ಗಾಗಿ ಕಾಸರಗೋಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಸೀತಂಗೋಳಿ ಸಮೀಪದ ಶೇಣಿಯಲ್ಲಿ ಹಿಂದಿ ಚಿತ್ರವೊಂದರ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಹೇಳಿ ಕೇಳಿ ಕಾಸರಗೋಡಿನಲ್ಲಿ ಚಿತ್ರೀಕರಣಕ್ಕೆ ಹೆಸರುವಾಸಿಯಾದ ಸುಂದರ ಪ್ರದೇಶ ಶೇಣಿ. ಇಲ್ಲಿ ಹಲವಾರು ಪರಭಾಷಾ ಚಲನಚಿತ್ರಗಳ ಚಿತ್ರೀಕರಣ ನಡೆದಿದೆ. ಇದೀಗ ಸನ್ನಿ ಲಿಯೋನ್ ಚಿತ್ರದ ಚಿತ್ರೀಕರಣವೂ ನಡೆಯುತ್ತಿದೆ.
ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ಶೇಣಿಯ ಶಾಲೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಶೂಟಿಂಗ್ ನಡೆಯುತ್ತಿದೆ. ಸನ್ನಿಯ ಮಾದಕ ನೋಟವನ್ನ ನೋಡಲು ರಸ್ತೆ ಬದಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.
FILM
ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!
ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು, ಕಿರುತೆರೆ ಖ್ಯಾತ ನಟಿ ಕೃಷ್ಣಾ ಮುಖರ್ಜಿ ಈ ಬಗ್ಗೆ ನೋವು ಹಂಚಿಕೊಂಡಿದ್ದಾರೆ.
ಧಾರಾವಾಹಿಯಿಂದ ಹೊರಬರಲು ಕಾರಣ ತಿಳಿಸಿದ ನಟಿ:
ಕೃಷ್ಣಾ ‘ಯೇ ಹೇ ಮೊಹಾಬತೇ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದರು. ನಾಗಿನ್ 2 ಕೂಡ ಅವರಿಗೆ ಹೆಸರು ತಂದು ಕೊಟ್ಟಿದೆ. ಇದೀಗ ಅವರು ತಮಗಾದ ಕಿರುಕುಳದ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೃಷ್ಣಾ ‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ ಎಂದು ನಟಿ ಆರೋಪಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಬರೆದುಕೊಂಡಿದ್ದಾರೆ.
‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಬರೆದಿದ್ದಾರೆ. ಅಲ್ಲದೇ, ಕುಂದನ್ ಸಿಂಗ್ ಅವರನ್ನು ಟ್ಯಾಗ್ ಕೂಡಾ ಮಾಡಿದ್ದಾರೆ.
ಮೇಕಪ್ ರೂಂ ಲಾಕ್ ಮಾಡಿದ್ದರು :
ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದಿದ್ದಾರೆ ಕೃಷ್ಣಾ.
‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯವಾಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!
ಕೃಷ್ಣಾ ಪೋಸ್ಟ್ ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ನಿಮಗೆ ನ್ಯಾಯ ಸಿಗಲೇಬೇಕು ಎಂದು ಕೆಲವರು ಹೇಳಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಇದು ಮನಸ್ಸು ಮುರಿಯುವ ವಿಚಾರ ಎಂದು ಕಮೆಂಟ್ ಮಾಡಲಾಗಿದೆ. ಅವರ ಅಭಿಮಾನಿಗಳು ಮಾತ್ರವಲ್ಲದೇ, ಕಲಾವಿದರೂ ಕಮೆಂಟ್ ಗಳನ್ನು ಮಾಡಿ ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!