Connect with us

bangalore

SHOCKING! ಗುರುತೇ ಸಿಗದಷ್ಟು ಬದಲಾದ ‘ಹುಚ್ಚ’ ಖ್ಯಾತಿಯ ನಟಿ ರೇಖಾ …!

Published

on

ಶಾಕಿಂಗ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್.

 

ಬೆಂಗಳೂರು : ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.

ಅಷ್ಟೊಂದು ಮುದ್ದು ಮುದ್ದು ಮುಖ, ಹೊಳೆಯುತ್ತಿದ್ದ ಕಣ್ಣು, ಮಿನುಗುತ್ತಿದ್ದ ಕೆನ್ನೆಯನ್ನು ಇಂದಿಗೂ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.ಆದ್ರೆ ಈಗ ಅದೇ ರೇಖಾ ಗುರುತೆ ಸಿಗದಷ್ಟರ ಮಟ್ಟಿಗೆ ಬದಲಾಗಿ ಹೋಗಿದ್ದಾರೆ.

ಸಣಕಲು ದೇಹ, ಬತ್ತಿದ ಕಣ್ಣುಗಳು, ಬಾಡಿದ ಕೆನ್ನೆಗಳು ರೇಖಾ ಅವರ ನಿಜ ಸ್ವರೂಪವನ್ನೇ ಬದಲಾಯಿಸಿ ಬಿಟ್ಟಿದೆ.

ಒಂದು ಕಾಲದಲ್ಲಿ ಬೆಳ್ಳಿ ತೆರೆಯಲ್ಲಿ ಮಿರ ಮಿರ ಮಿಂಚಿ ಮರೆಯಾಗಿರುವ ನಟಿ ರೇಖಾ ದಿಢೀರನೆ ತೆಲುಗು ಕಿರುತೆರೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆಗಿದ್ದಾರೆ.

ತೆಲುಗಿನ ‘ಶ್ರೀದೇವಿ ಡ್ರಾಮಾ ಕಂಪನಿ’ ಕಾಮಿಡಿ ಶೋಗೆ ಅತಿಥಿಯಾಗಿ ಬಂದಿದ್ದ ರೇಖಾ ಎಲ್ಲರಿಗೂ ಶಾಕ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಹುಟ್ಟಿಬೆಳೆದ ರೇಖಾ ಕನ್ನಡದ ‘ಹುಚ್ಚ’ ಚಿತ್ರದಲ್ಲಿ ಮೊದಲಿಗೆ ಆಕೆ ಬಣ್ಣ ಹಚ್ಚಿದ್ದರು.

ಅಲ್ಲಿಂದ ಮುಂದೆ ಕನ್ನಡ ಸಿನಿರಸಿಕರಿಗೆ ‘ಹುಚ್ಚ’ ನಟಿ ರೇಖಾ ಅಂತ್ಲೇ ಪರಿಚಿತರಾದರು.

ಕನ್ನಡ ಜೊತೆ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲಿ ರೇಖಾ ಮಿಂಚಿದರು. ತೆಲುಗಿನಲ್ಲೂ ಆಕೆ ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದಾರೆ.

ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ ಚೆಲುವೆಗೆ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ.

‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಿಟ್ ಸಿನಿಮಾಗಳಲ್ಲಿ ಮಿಂಚಿದರು.

ಬಳಿಕ ತೆಲುಗು, ತಮಿಳು ಸಿನಿಮಾಗಳತ್ತ ಮುಖ ಮಾಡಿದ್ದರು. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದ ರೇಖಾ ಮತ್ತೊಮ್ಮೆ ಕಮಾಲ್ ಮಾಡಿದರು.

ನಟಿ ರೇಖಾ 2014ರ ನಂತರ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಅವಕಾಶಗಳು ಸಿಕ್ಕಿಲ್ವೋ ಅಥವಾ ಸಿನಿಮಾ ಮೇಲಿನ ಆಸಕ್ತಿ ಕಮ್ಮಿ ಆಯ್ತೋ ಗೊತ್ತಿಲ್ಲ.

ಆದರೆ ಇದ್ದಕ್ಕಿಂದ್ದಂತೆ ಬಿಗ್ ಸ್ಕ್ರೀನ್​ನಿಂದ ಮಾಯವಾಗಿದ್ದ ರೇಖಾ ಸಿನಿಪ್ರೇಮಿಗಳಿಗೆ ಅಪರೂಪದ ತಾರೆಯಾಗಿ ಉಳಿದುಕೊಂಡು ಬಿಟ್ರು.

ಆದಷ್ಟು ಬೇಗ ಕನ್ನಡ ಮುದ್ದು ಮುಖದ ನಟಿ ರೇಖಾ ವೇದವ್ಯಾಸ್ ಗುಣ ಮುಖರಾಗಿ ಮೊದಲಿನ ಮಂದಹಾಸ ಬರಲಿ ಅನ್ನೋದೆ ಅವರ ಅಭಿಮಾನಿಗಳ ಆಸೆ.

 

bangalore

ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…

Published

on

ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.


ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್‌ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.


2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ

Continue Reading

bangalore

‘ಕಾಂತಾರ-1’ ಫಸ್ಟ್ ಲುಕ್ ಟೀಸರ್ 7 ಭಾಷೆಗಳಲ್ಲಿ ಬಿಡುಗಡೆ..!

Published

on

ಕುಂದಾಪುರ: ತುಳುನಾಡ ಮಣ್ಣಿನ ಶಕ್ತಿ ದೈವಾರಾಧನೆ ಮಹತ್ವವನ್ನು ಇಡೀ ಜಗತ್ತಿಗೆ ತೋರಿಸಿದ ಚಿತ್ರ ಕಾಂತಾರ ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸೂಪರ್ ಹಿಟ್ ಸಿನಿಮಾದ ಪ್ರೀಕ್ವೆಲ್‌ ಅಂದರೆ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.

ಇಂದು ಬೆಳಿಗ್ಗೆ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸಿನಿಮಾದ ಮೂಹೂರ್ತ ಕಾರ್ಯಕ್ರಮ ನೆರವೇರಿದೆ. ಮುಹೂರ್ತದ ಜೊತೆಗೆ ಫಸ್ಟ್‌ ಲುಕ್‌ ಹಾಗೂ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಟೀಸರ್ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಟೀಸರ್ ನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‌ನಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಕಾಂತಾರ ಪ್ರೀಕ್ವೆಲ್‌ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂಬುದು ಬಹಿರಂಗವಾಗಿದೆ.

ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್‌ ಅನ್ನು ಹೊಂಬಾಳೆ ಬಣ್ಣಿಸಿದೆ. ಟೀಸರ್ ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇಂದು ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನಲ್ಲಿ ರಿಷಬ್ ಶೆಟ್ಟಿಯವರು ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಅವತಾರ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚುವಂತೆ ಮಾಡಿದೆ. ಚಿತ್ರದಲ್ಲಿ ರಿಷಬ್‌ ಶೆಟ್ಟಿ ಅವರು ರೌದ್ರವತಾರದಲ್ಲಿ ಅಚ್ಚರಿ ಮೂಡುವಂತೆ ಕಂಡು ಬಂದಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವುದು ಕಂಡು ಬಂದಿದ್ದು, ಈ ಪೋಸ್ಟರ್ ಹಲವು ಕುತೂಹಲವನ್ನು ಸೃಷ್ಟಿಸಿದೆ. ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದರು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ, ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

 

Continue Reading

bangalore

ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?

Published

on

ಬಿಗ್ ಬಾಸ್: ಬಿಗ್ ಬಾಸ್ ಸ್ಪರ್ಧಿಗಳು ಹೊರ ಹೋದ ಬೆನ್ನಲೆ ವೈಲ್ಡ್ ಕಾರ್ಡ್ ಮೂಲಕ ಇದೀಗ ಇಬ್ಬರು ಸ್ಪರ್ಧಾಳುಗಳು ಎಂಟ್ರಿಯಾಗಿದ್ದಾರೆ.


ಕನ್ನಡ ಬಿಗ್ ಬಾಸ್ ​’10’ ಈಗಾಗಲೇ 50 ದಿನಗಳನ್ನು ಪೂರ್ಣಗೊಳಿಸಿದ್ದು, ಇನ್ನು 50 ದಿನ ಪೂರ್ಣಗೊಂಡರೆ ಫಿನಾಲೆಯೆ ಬಂದು ಬಿಡುತ್ತದೆ. ಇದೀಗ ಇವುಗಳ ನಡುವೆ ಬಿಗ್ ಬಾಸ್ ಮನೆಯಿಂದ 6 ಜನ ಔಟ್ ಆಗಿ ಸ್ಪರ್ಧಿಗಳ ಸಂಖ್ಯೆ 11ಕ್ಕೆ ಇಳಿಕೆಯಾಗಿದೆ. ಬಿಗ್ ಬಾಸ್ ನ ಪ್ರತಿ ಸೀಸನ್ ನಲ್ಲಿ ವೈಲ್ಡ್ ಕಾರ್ಡ್ ಮೂಲಕ ಸ್ಪರ್ಧಿಗಳು ಎಂಟ್ರಿಯಾಗುತ್ತಾರೆ. ಹಾಗಾಗಿ ಈ ಬಾರಿ ಯಾರು ಎಂಟ್ರಿಯಾಗುತ್ತರೆ ಅನ್ನೋ ಕೂತುಹಲವಿತ್ತು. ಆ ಕೂತಹಲದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೆಚ್ಚು ಜನಪ್ರಿಯತೆ ಪಡೆದಿರುವ ಹಾಗೂ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಪವಿ ಪೂವಪ್ಪ ಇದೀಗ ಬಿಗ್ ಬಾಸ್ ಗೆ ಎಂಟ್ರಿಯಾಗಿದ್ದಾರೆ. ಜೊತೆಗೆ ಮತ್ತೋಬ್ಬ ಸ್ಪರ್ಧಿ ನಟ ಮಾಡೆಲ್ ಆಗಿರುವ ಕ್ರಿಕೆಟರ್ ಅವಿನಾಶ್ ಶೆಟ್ಟಿ ಕೂಡ ಎಂಟ್ರಿಯಾಗಿದ್ದಾರೆ.

 

Continue Reading

LATEST NEWS

Trending