Connect with us

    DAKSHINA KANNADA

    ‘ಕರಿ ಹೈದ ಕರಿಯಜ್ಜ’ ಚಿತ್ರ ಯಶಸ್ಸಿಗೆ ಕೊರಗಜ್ಜ- ಗುಳಿಗಜ್ಜ ಕ್ಷೇತ್ರಕ್ಕೆ ಹುಂಜ ಹರಕೆ ನೀಡಿದ ನಟಿ ಶೃತಿ, ಭವ್ಯ..!

    Published

    on

    ಉಳ್ಳಾಲ :  ಕೊರಗಜ್ಜನ ಕುರಿತಾದ ಬಹು ಬಾಷಾ ಚಿತ್ರ “ಕರಿ ಹೈದ ಕರಿಯಜ್ಜ” ದ ಯಶಸ್ಸಿಗೆ ಕಲ್ಲಾಪು ಬುರ್ದುಗೋಳಿಯ ಕೊರಗಜ್ಜ-ಗುಳಿಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದ ನಟಿಯರಾದ ಭವ್ಯ ,ಶೃತಿ ಮತ್ತು ಚಿತ್ರ ತಂಡವು ಗುಳಿಗನಿಗೆ ಹರಕೆಯ ಹುಂಜವನ್ನ ಸಮರ್ಪಿಸಿದ್ದಾರೆ.  

    ತ್ರಿವಿಕ್ರಮ ಸಪಲ್ಯ ಅವರು 5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ” ಕರಿ ಹೈದ ಕರಿಯಜ್ಜ” ಚಿತ್ರದ ಚಿತ್ರೀಕರಣದ ಆರಂಭದಲ್ಲೇ ನಿರ್ದೇಶಕರಾದ ಸುಧೀರ್ ರಾಜ್ ಉರ್ವ ಅವರ ಸಲಹೆಯಂತೆ ಬುರ್ದುಗೋಳಿ ಕ್ಷೇತ್ರದ ಗುಳಿಗಜ್ಜನಿಗೆ ಹುಂಜ ಮತ್ತು ಮಂಗಳೂರಿನ‌ ನಂದಿಗುಡ್ಡೆಯ ಕೊರಗಜ್ಜನ ಕ್ಷೇತ್ರದಲ್ಲಿ ಕೋಲ ಸೇವೆ ನೀಡುತ್ತೇನೆಂದು ಹರಕೆ ಹೊತ್ತಿದ್ದರಂತೆ.

    ಅದರಂತೆ ಬುರ್ದುಗೋಳಿ ಕ್ಷೇತ್ರಕ್ಕೆ ಹುಂಜವನ್ನ ಹರಕೆ ನೀಡಿದ್ದು ಗುಳಿಗ-ಕೊರಗಜ್ಜನ ಉದ್ಭವ ಶಿಲೆ ಸಮ್ಮುಖದಲ್ಲಿ ಚಿತ್ರತಂಡದವರು ಪ್ರಾರ್ಥನೆ ಸಲ್ಲಿಸಿದ್ದಾರೆ.

    ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ತೊಂಭತ್ತರ ದಶಕದ ಜನಪ್ರಿಯ ನಾಯಕಿ ನಟಿಯರಾದ ಭವ್ಯ ಮತ್ತು ಶೃತಿ ಅವರು ಕೊರಗಜ್ಜ-ಗುಳಿಗಜ್ಜನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

    ನಟಿ ಭವ್ಯ ಅವರ ಜನುಮ ದಿನ ಸಂದರ್ಭದಲ್ಲೆ ಕೊರಗಜ್ಜನ ಕ್ಚೇತ್ರಕ್ಕೆ ಮೊದಲ ಬಾರಿ ಭೇಟಿ ನೀಡಿದ್ದು ನಿಜಕ್ಕೂ ನನಗೆ ಸಿಕ್ಕಿದ ಭಾಗ್ಯ ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ಕರಿ ಹೈದ ಕರಿಯಜ್ಜ ಚಿತ್ರದ 99 ಶೇಖಡ ಚಿತ್ರೀಕರಣ ಸಂಪೂರ್ಣಗೊಂಡಿದ್ದು ಎಪ್ರಿಲ್ ,ಮೇ ತಿಂಗಳಲ್ಲಿ ಬಿಡುಗಡೆಗೊಳಿಸಲಾಗುವುದು.

    ತುಳು,ಕನ್ನಡ,ಮಳಯಾಳಂ ಬಾಷೆಗಳಲ್ಲಿ ಚಿತ್ರ ಮೂಡಿ ಬರಲಿದೆ.ದಕ್ಷಿಣ ಕನ್ನಡದ ,ಮಡಂತ್ಯಾರ್,ಸೋಮೇಶ್ವರ,ಉಳ್ಳಾಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು ಕೊರಗಜ್ಜನ 800 ವರ್ಷಗಳ ಐತಿಹ್ಯದ ಕಥೆಯನ್ನೇ ಚಿತ್ರದಲ್ಲಿ ಅಳವಡಿಸಲಾಗಿದೆ ಎಂದು ನಿರ್ಮಾಪಕರಾದ ತ್ರಿವಿಕ್ರಮ ಸಫಲ್ಯ ಹೇಳಿದ್ದಾರೆ.

    ನಟಿ ಶೃತಿಯವರ ಸುಪುತ್ರಿ ಗೌರಿ ಚಿತ್ರತಂಡದ ಜತೆಯಲ್ಲಿದ್ದರು.

    ಬಳಿಕ ಚಿತ್ರತಂಡವು ನಂದಿಗುಡ್ಡೆ ಕೊರಗಜ್ಜನ ಕ್ಷೇತ್ರಕ್ಕೆ ಹರಕೆಯ ಕೋಲ ನೀಡಲು ತೆರಳಿತು.

    ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಕಲ್ಲಾಪು, ಭಂಡಾರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್,ಪ್ರಮುಖರಾದ ಪ್ರಶಾಂತ್ ಗಟ್ಟಿ ಕಾಯಂಗಳ, ಪುರುಷೋತ್ತಮ ಕಲ್ಲಾಪು,ಪ್ರವೀಣ್ ಎಸ್.ಕುಂಪಲ ಮೊದಲಾದವರು ಉಪಸ್ಥಿತರಿದ್ದರು.

    DAKSHINA KANNADA

    ಮಂಗಳೂರು – ಕಟೀಲಮ್ಮನ ಮಡಿಲಲ್ಲಿ ಹಲವಾರು ಬಣ್ಣದ ವೇಷಗಳ ವೈಭವ

    Published

    on

    ಮಂಗಳೂರು: ನಂದಿನಿ ನದಿಯ ಮಧ್ಯದಲ್ಲಿ ರಾರಾಜಿಸುತ್ತಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಅದ್ದೂರಿಯಾಗಿ ನಡೆಯುವ ಶರನ್ನವರಾತ್ರಿ ಉತ್ಸವದ ವೈಭವ ಒಂದು ಕಡೆಯಾದರೆ ಹುಲಿ, ಸಿಂಹ ಸೇರಿದಂತೆ ಸಾವಿರಾರು ಬಣ್ಣದ ವೇಷಗಳು ಸೇವೆ ಸಲ್ಲಿಸುವ ಸೊಬಗು ಇನ್ನೊಂದು ಕಡೆ.


    ಹಲವಾರು ತಂಡಗಳು ಹುಲಿ ವೇಷ ಹಾಕಿ ತಿರುಗಾಟ ನಡೆಸಿ ಅಂತಿಮವಾಗಿ ಕಟೀಲಿಗೆ ಬಂದು ದೇವಾಲಯದ ಆವರಣದಲ್ಲಿ ನರ್ತಿಸಿ ವೇಷ ಕಳಚಿ ನಂದಿನಿ ನೀರಿನಲ್ಲಿ ಮಿಂದು ಹೋಗುವುದು ರೂಢಿ. ವೇಷ ಹಾಕುವಾಗಲೇ ಕಟೀಲಿನಲ್ಲಿ ವೇಷ ಬಿಚ್ಚುತ್ತೇವೆ ಎಂದು ಹರಕೆ ಹೊತ್ತವರು ಒಂದೆಡೆಯಾದರೆ, ಕಟೀಲು ಕ್ಷೇತ್ರದಲ್ಲೇ ಸೇವೆ ಸಲ್ಲಿಸಿ ಮರಳಿ ಅಲ್ಲೇ ವೇಷ ಬಿಚ್ಚುತ್ತೇವೆ ಎನ್ನುವವರು ಇನ್ನೊಂದೆಡೆ ಇದ್ದಾರೆ. ಇದು ತಲತಲಾಂತರಗಳಿಂದ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.


    ಶರನ್ನವರಾತ್ರಿ ಸಮಯದಲ್ಲಿ ಕಟೀಲು ದೇವಾಲಯದ ಆವರಣದಲ್ಲಿ ನಿತ್ಯವೂ ಹತ್ತಾರು ತಂಡಗಳ ಹುಲಿ ವೇಷ ನರ್ತನ ಇರುತ್ತದೆ. ಒಟ್ಟಾರೆಯಾಗಿ 2000 ಕ್ಕೂ ಅಧಿಕ ವೇಷಗಳು , 70 ರಿಂದ 80 ತಂಡಗಳು ಕಟೀಲು ಸನ್ನಿಧಿಗೆ ಬಂದು ಸೇವೆ ಸಲ್ಲಿಸುತ್ತವೆ ಎಂದು ಹೇಳಬಹುದು.

    Continue Reading

    DAKSHINA KANNADA

    ಮುಂದಿನ ಐದು ದಿನ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

    Published

    on

    ಬೆಂಗಳೂರು: ಈ ಬಾರಿಯ ದಸರಾ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳಲ್ಲಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

    ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಯಲ್ಲಿ ನೀರು ರಭಸದಿಂದ ಹರಿದು ಹೋಗುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

    Continue Reading

    DAKSHINA KANNADA

    ಮಂಗಳೂರು – ರೌಡಿಗಳಂತೆ ಫೈಟ್ ಮಾಡಿಕೊಂಡ ಬಸ್ ಸಿಬ್ಬಂದಿ; ವಿಡಿಯೋ ವೈರಲ್

    Published

    on

    ಮಂಗಳೂರು: ವಿಟ್ಲ-ಮಂಗಳೂರು ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸಿನ ಸಿಬ್ಬಂದಿ ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ ಘಟನೆ ಬೆಳಕಿಗೆ ಬಂದಿದೆ.

    ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪ್ರಯಾಣಿಕರು ತಿಳಿಸಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಖಾಸಗಿ ಬಸ್‌ಗಳ ಸಿಬ್ಬಂದಿಯ ಅಟ್ಟಹಾಸ ಮಿತಿಮೀರಿದ್ದು ಸಭ್ಯ ಪ್ರಯಾಣಿಕರು ಓಡಾಡಲು ಹಿಂಜರಿಯುತ್ತಿದ್ದಾರೆ. ಪೊಲೀಸರು, ಆರ್‌ಟಿಒ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಖಾಸಗಿ ಬನ್ ಸಿಬ್ಬಂದಿಗಳು ಅನಾಗರಿಕರಾಗಿದ್ದಾರೆಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
    ಬಸ್ ವ್ಯವಸ್ಥೆ ಸಾರ್ವಜನಿಕ ಸೇವೆಯೆಂಬುದು ಇಂದಿನವರಿಗೆ ತಿಳಿದಿಲ್ಲವಾಗಿದೆ. ತಮ್ಮದೇ ಸಾಮ್ರಾಜ್ಯ, ತಾವು ಮಾಡಿದ್ದೇ ಆಟ, ನಾವು ನಡೆದಿದ್ದೇ ದಾರಿ ಎಂಬುದನ್ನು ತಿಳಿದಿರುವ ಇಂತಹ ಸಿಬ್ಬಂದಿಯ ಸಮಾಜ ಕಂಟಕ ವರ್ತನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.


    ‘ಇಂತಹ ಅನಾಗರಿಕ ವರ್ತನೆಯಿಂದ ಮಹಿಳೆಯರು , ಪುಟ್ಟ ಮಕ್ಕಳು ಬಸ್ಸಿನಲ್ಲಿ ಹೋಗಲು ಹಿಂದೇಟು ಹಾಕುವಂತಾಗಿದೆ. ಅಲ್ಲದೆ ಬಸ್ಸಿನ ಸಿಬ್ಬಂದಿಗಳನ್ನು ಅರ್ಧದಾರಿಯಲ್ಲೇ ಇಳಿಸಿ ಅವರನ್ನು ಅತಂತ್ರರನ್ನಾಗಿಸುವ ಕ್ರಮ ಸರಿಯಲ್ಲ. ಬೇರೆ ಬಸ್ಸು ಇಲ್ಲದೇ ಅವರು ಕಂಗೆಡುವ ಪರಿಸ್ಥಿತಿ ಕೂಡಾ ಇರುವ ಕಾರಣ ಇಂತಹ ಬಸ್ಸು ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
    ಈ ಕುರಿತ ವಿಡಿಯೋ ಫುಲ್ ವೈರಲ್ ಆಗುತ್ತಿದ್ದು, ಸಾರ್ವಜನಿಕರು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶಿಸುತ್ತಿದ್ದಾರೆ.

     

    ವಿಡಿಯೋ ನೋಡಿ :

     

     

    Continue Reading

    LATEST NEWS

    Trending