Wednesday, December 1, 2021

ಡೆತ್ ನೋಟ್ ಬರೆದಿಟ್ಟು ಕಿರುತೆರೆ ನಟಿ ಆತ್ಮಹತ್ಯೆ

ಬೆಂಗಳೂರು: ಕನ್ನಡ ಕಿರುತೆರೆಯ ಉದಯೋನ್ಮುಖ ನಟಿಯೊಬ್ಬರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟಿ ಸೌಜನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ತ್ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಕುಂಬಳಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸೌಜನ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರದ ಮೂಲದವರಾಗಿದ್ದು,ಹಲವಾರು ಧಾರಾವಾಹಿ ಹಾಗೂ ಫನ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಾವಿಗೂ ಮುನ್ನ ಡೆತ್​ನೋಟ್ ಬರೆದಿರುವ ಸೌಜನ್ಯ.

ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ.

ನನ್ನನ್ನು ಕ್ಷಮಿಸಿ ಅಪ್ಪ-ಅಮ್ಮ ಅಂತ ಡೆತ್ ನೋಟ್​ನಲ್ಲಿ ಕ್ಷಮೆ ಕೇಳಿದ್ದಾರೆ.

ಅಲ್ಲದೆ ತಮ್ಮ ಮಾನಸಿಕ ಆರೋಗ್ಯ ಅಷ್ಟಾಗಿ ಸರಿಯಾಗಿಲ್ಲ ಎಂದೂ ಮರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪದೇ ಪದೇ ಪೋಷಕರು ಹಾಗೂ ಅಣ್ಣನ ಬಳಿ ಕ್ಷಮೆ ಕೇಳಿದ್ದು, ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಅಪ್ಪನಿಗೆ ಮನವಿ ಮಾಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...