Connect with us

DAKSHINA KANNADA

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ; ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ನೋಟೀಸ್ ..!

Published

on

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ; ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ನೋಟೀಸ್ ..!

Adani embraces Mangalore International Airport; High Court notice to government decision.

ಮಂಗಳೂರು:ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ತೆಕ್ಕೆಗೆ ವಹಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕರ್ನಾಟಕ ಹೈ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್ಗೆ ವಹಿಸಿದ್ದನ್ನು ಪ್ರಶ್ನಿಸಿ, ಏರ್ಪೋರ್ಟ್ ಪ್ರಾಧಿಕಾರದ ನೌಕರರ ಸಂಘ ಕರ್ನಾಟಕ ಹೈ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಕೊಂಡ ಉಚ್ಛ ನ್ಯಾಯಾಲಯ, ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಯನ್ನು ಮುಂದೂಡಿದೆ.

ಸರ್ಕಾರದ ಏರ್ಪೋರ್ಟ್ಗಳ ಖಾಸಗೀಕರಣದ ಭಾಗವಾಗಿ ಅಹಮದಾಬಾದ್, ಲಖನೌ, ಮಂಗಳೂರು, ಜೈಪುರ, ಗುವಾಹಟಿ ಹಾಗೂ ತಿರುವನಂತಪುರಂ ಏರ್ಪೋರ್ಟ್ಗಳ ನಿರ್ವಹಣೆಯನ್ನು ಅದಾನಿ ಗ್ರೂಪ್ಗೆ ಕೇಂದ್ರ ಸರ್ಕಾರ ವಹಿಸಿತ್ತು.

ಐವತ್ತು ವರ್ಷಗಳ ಕಾಲ ಈ ಏರ್ಪೋರ್ಟ್ಗಳನ್ನು ನಿರ್ವಹಣೆ ಮಾಡುವ ಹೊಣೆ ಅದಾನಿ ಗ್ರೂಪ್ನ ಮೇಲಿರಲಿದೆ. ಈ ಹಿಂದೆ ಅದಾನಿಗೆ ಏರ್ಪೋರ್ಟ್ ವಹಿಸಿದ್ದಕ್ಕೆ ಖುದ್ದು ಸರ್ಕಾರವೇ, ಆಕ್ಷೇಪ ವ್ಯಕ್ತ ಪಡಿಸಿತ್ತು.

ಬಿಡ್ ನಿಯಮಾವಳಿಗಳನ್ನು ಪಾಲಿಸಿಲ್ಲ ಎಂದು ಹೇಳಿತ್ತು. ಬಿಡ್ ಮುಖಾಂತರ ಈ ವಿಮಾನ ನಿಲ್ದಾಣಗಳನ್ನು ಸರ್ಕಾರ ಅದಾನಿ ಗ್ರೂಪ್‌ಗೆ ವಹಿಸಿತ್ತು. ಸುಮಾರು ಕಂಪನಿಗಳು ಬಿಡ್ ಸಲ್ಲಿಸಿದ್ದರೂ, ಕಡಿಮೆ ಮೊತ್ತದ ಬಿಡ್ ಸಲ್ಲಿಕೆ ಮಾಡಿದ್ದ ಗುಜರಾತ್ ಮೂಲದ ಅದಾನಿ ಗ್ರೂಪ್ಗೆ ಬಿಡ್ ಒಲಿದಿತ್ತು.

ಇದಕ್ಕೆ ಆಕ್ಷೇಪಣೆ ವ್ಯಕ್ತ ಪಡಿಸಿದ್ದ ಕೇಂದ್ರ ಹಣಕಾಸು ಇಲಾಖೆ, ಒಂದು ಬಿಡ್ಡಿಂಗ್ ಕಂಪನಿಗೆ ಎರಡಕ್ಕಿಂತ ಹೆಚ್ಚು ವಿಮಾನ ನಿಲ್ದಾಣಗಳನ್ನು ನೀಡಬಾರದು ಎಂದು ನಿಯಮವಿದೆ.

ಆದರೆ ಇದನ್ನು ಪಾಲಿಸಲಾಗಿಲ್ಲ ಎಂದು ಹೇಳಿತ್ತು. ಇದೇ ವೇಳೆ ನೀತಿ ಆಯೋಗ ಬೇರೆ ರೀತಿಯ ಆಕ್ಷೇಪಣೆ ವ್ಯಕ್ತ ಪಡಿಸಿ, ಬಿಡ್ ಪಡೆದುಕೊಂಡ ಸಂಸ್ಥೆಯ ಜತೆ ಯೋಜನೆಯನ್ನು ಪೂರೈಸಲು ಬೇಕಾದ ತಂತ್ರಜ್ಞಾನಗಳಿಲ್ಲ.

ಅಲ್ಲದೇ ಗುಣಮಟ್ಟದ ಸೇವೆಯನ್ನು ನೀಡಲು ಕಂಪನಿಗೆ ಸಾಧ್ಯವಿಲ್ಲ ಎಂದು ಹೇಳಿತ್ತು. ಏತನ್ಮಧ್ಯೆ ವಿಮಾನ ನಿಲ್ದಾಣಗಳನ್ನು ಖಾಸಗಿ ಸುಪರ್ದಿಗೆ ನೀಡುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.

ಮಂಗಳೂರಿನಲ್ಲಿ ಭಾರೀ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಅಲ್ಲದೇ ವಿಮಾನ ನಿಲ್ದಾಣಕ್ಕೆ ತುಳು ನಾಡಿನ ಪುಣ್ಯ ಪುರುಷರಾದ ಕೋಟಿ-ಚೆನ್ನಯರ ಹೆಸರು ಇಡಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

LATEST NEWS

Trending