ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು,
ಮಂಗಳೂರು : ಮಂಗಳೂರು ನಗರದಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧಿಸಿ ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿದರು,
ಈ ಸಂದರ್ಭ ಸ್ಥಳದಲ್ಲಿದ್ದ ಎಫ್‌ಎಸ್‌ಎಲ್ ಅಧಿಕಾರಿಯಿಂದ ಮತ್ತು ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಸಮಗ್ರ ಮಾಹಿತಿ ಪಡೆದರು.
ಆಸ್ಪತ್ರೆಗೂ ಭೇಟಿ ನೀಡಿದ ಎಡಿಜಿಪಿ ಅವರು ಗಾಯಾಳುಗಳನ್ನು ವಿಚಾರಿಸಿ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಪಿಯ ಗುರುತು ಇನ್ನೂ ಸ್ಪಷ್ಟವಾಗಿಲ್ಲ. ಸುಟ್ಟಗಾಯಗಳಿಂದ ಆತನ ಮುಖ ಊದಿಕೊಂಡಿದೆ, ಗುರುತು ಸಿಗುತ್ತಿಲ್ಲ.
ಶಂಕಿತ ಆರೋಪಿಯ ಮನೆಯವರನ್ನು ಆಸ್ಪತ್ರೆಗೆ ಬರುವಂತೆ ಸೂಚನೆ ನೀಡಲಾಗಿದೆ. ಅವರು ಬಂದು ಗುರುತು ಪತ್ತೆ ಹಚ್ಚಿದ ಬಳಿಕ ಆರೋಪಿಯ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುವುದು ಎಂದಿದ್ದಾರೆ.
ಮಂಗಳೂರು ಬಾಂಬ್ ಸ್ಪೋಟ: ರಾಜ್ಯಾದ್ಯಾಂತ ಹೈ ಅಲರ್ಟ್ ಘೋಷಣೆ :
ಮಂಗಳೂರು ನಗರದ ಗರೋಡಿಯಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಪೋಟ ಸಂಭವಿಸಿದ ಬಳಿಕ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿನ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆಯು ಸೂಚನೆ ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಅದರಂತೆ ಮಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಕಟ್ಟುನಿಟ್ಟಿನ ತಪಾಸಣೆ ಪ್ರಕ್ರಿಯೆ ಆರಂಭಿಸಿದ್ದಾರೆ.
ಬೆಂಗಳೂರಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳು, ಪ್ರಮುಖ ಪ್ರವಾಸಿ ತಾಣಗಳು, ಅಣೆಕಟ್ಟುಗಳು ಪ್ರತಿಷ್ಠಿತ ದೇವಾಲಯಗಳು, ಧಾರ್ಮಿಕ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಂಡು ಕಟ್ಟೆಚ್ಚರ, ಮುನ್ನಚ್ಚರಿಕೆ ಕ್ರಮವಾಗಿ ನಿಗಾ ವಹಿಸಲಾಗಿದೆ.
ಜನ ಯಾವುದೇ ರಿತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಗ , ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮನವಿ ಮಾಡಲಾಗಿದೆ.