Connect with us

LATEST NEWS

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ರಾಜ್ಯದಲ್ಲೇ ಮೊದಲ ಬಾರಿಗೆ ಎಡಿಜಿಪಿ ಬಂಧನ

Published

on

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಿರುವ ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.


ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರನ್ನು ನಾಲ್ಕನೇ ಬಾರಿ ವಿಚಾರಣೆಗೆ ಕರೆದಿದ್ದ ಸಿಐಡಿ ಅಧಿಕಾರಿಗಳು, ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ವಿಚಾರಣೆ ನಡೆಸಿ ಬಂಧಿಸಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಡಿಜಿಪಿ ದರ್ಜೆ ಅಧಿಕಾರಿ ಬಂಧನವಾದಂತಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ವರ್ಗಾಯಿಸಲಾಗಿತ್ತು.

ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ಹಲವು ನೌಕರರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಅವರೆಲ್ಲರ ವಿಚಾರಣೆಯಿಂದ ಅಮೃತ್ ಪೌಲ್ ಸಹ ಅಕ್ರಮದಲ್ಲಿ ಭಾಗಿಯಾಗಿದ್ದು ಮೇಲ್ನೋಟಕ್ಕೆ ಕಂಡುಬಂದಿತ್ತು.

bangalore

ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ…!

Published

on

ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ(judicial court) ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು(police) ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ(robbery) ಮತ್ತು ಕೊ*ಲೆಯತ್ನ ಪ್ರಕರಣದ ಆರೋಪಿಯಾಗಿದ್ದ.  ಉಳ್ಳಾಲದ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ.

ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ(auto) ಬಂದಿದ್ದ ಅಶ್ರಫ್ ಮತ್ತು ಮೂವರು ಸೇರಿಕೊಂಡು ರಾತ್ರಿ 10ಕ್ಕೆ ಅಂಗಡಿಯೊಳಕ್ಕೆ ನುಗ್ಗಿ ತಲವಾರು ತೋರಿಸಿ ಅವ್ಯಾಚ ಪದಗಳಿಂದ ನಿಂಧಿಸಿದ್ದರು. ಪೊಲೀಸರಿಗೆ ತಮ್ಮ ವಿರುದ್ಧ ಮಾಹಿತಿ ನೀಡಿರುವುದು ಯಾಕೆ ಎಂದು  ಬೈದು, ತಲವಾರಿನಿಂದ ದಾಳಿ ನಡೆಸಿ ಕೊ*ಲೆಗೆ ಯತ್ನಿಸಿದ್ದರು. ಅಲ್ಲದೆ ಕ್ಯಾಷಿನಲ್ಲಿದ್ದ ರೂ.50,000 ವ್ಯಾಪಾರದ ಹಣವನ್ನು(cash) ದರೋಡೆ ನಡೆಸಿದ್ದರು. ಈ ಸಂಬಂಧ
ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.  ಪ್ರಮುಖ ಆರೋಪಿ ಅಶ್ರಫ್ ಸೇರಿದಂತೆ ರಾಜೇಶ್ ಹಾಗೂ ಇನ್ನೋರ್ವನ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಶ್ರಫ್ ಹಾಗೂ ಇನ್ನೋರ್ವನನ್ನು ಪೊಲೀಸರು ಅಂದೇ ಬಂಧಿಸಿದ್ದರು. ರಾಜೇಶ ತಲೆಮರೆಸಿಕೊಂಡಿದ್ದು(absconding) ,  ಇದೀಗ ಏಳು ವರ್ಷಗಳ ನಂತರ  ಬಂಧನವಾಗಿದೆ. ಆರೋಪಿಗಳ ವಿರುದ್ಧ 120(ಬಿ), 448,307,394,504 ಜೊತೆಗೆ 34 ಐಪಿಸಿ ಮತ್ತು 25(ಬಿ) ಆರ್ಮ್ಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

Continue Reading

FILM

ಮುಗಿದ ‘ಹಿಟ್ಲರ್ ಕಲ್ಯಾಣ’; ಹೊಸ ಧಾರಾವಾಹಿನಾ? ಹೊಸ ಸಿನಿಮಾನಾ? ಏನಂದ್ರು ಲೀಲಾ ಅಲಿಯಾಸ್ ಮಲೈಕಾ

Published

on

‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಎಲ್ಲರ ಮನಸೂರೆಗೊಂಡ ನಟಿ ಮಲೈಕಾ ಟಿ ವಸುಪಾಲ್. ಈ ಧಾರಾವಾಹಿಯಲ್ಲಿ ನಾಯಕಿಯಾಗಿ ಅವರು ಗಮನ ಸೆಳೆದಿದ್ದರು. ಲೀಲಾ ಆಲಿಯಾಸ್ ಎಡವಟ್ಟು ಲೀಲಾ ಆಗಿ ಮಲೈಕಾ ಟಿ ವಸುಪಾಲ್ ಎಲ್ಲರಿಗೂ ಅಚ್ಚು ಮೆಚ್ಚಾಗಿದ್ದರು.

ಪಟ ಪಟ ಮಾತು, ಪಿಲಿ ಪಿಲಿ ಕಣ್ಣು, ಚೆಂದದ ನಗು, ಚೆಲುವಿನಿಂದ ಕಂಗೊಳಿಸುತ್ತಿದ್ದರು. ಮೊದಲ ಧಾರಾವಾಹಿಯಲ್ಲಿಯೇ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡಿದ್ದರು.


‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿ ಜನಮನಗೆದ್ದಿದ್ದ ಮಲೈಕಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ. ಹಾಸ್ಯನಟ ಚಿಕ್ಕಣ್ಣಗೆ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಹಿರಿತೆರೆಗೆ ಲಗ್ಗೆ ಇಟ್ಟಿದ್ದರು.

ಹೊಸ ಚಿತ್ರದಲ್ಲಿ ಉಪಾಧ್ಯಕ್ಷನ ಬೆಡಗಿ :

‘ಉಪಾಧ್ಯಕ್ಷ’ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದಿದೆ. ಅಲ್ಲೂ ಮಲೈಕಾ ಅವರ ನಟನೆಗೆ ಪ್ರೇಕ್ಷಕ ಮಹಾಶಯ ಬೆರಗಾಗಿದ್ದಾನೆ. ಸಿನಿಮಾದಲ್ಲಿನ ಅವರ ನಟನೆ ಇನ್ನೂ ಕೂಡಾ ಪ್ರೇಕ್ಷಕರ ಮನದಲ್ಲಿ ಹಸಿರಾಗಿರುವಾಗಲೇ ಮಗದೊಂದು ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿಯನ್ನು ಮಲೈಕಾ ಹೊರಹಾಕಿದ್ದಾರೆ. ಮಲೈಕಾ ಟಿ ವಸುಪಾಲ್ ‘ವಿದ್ಯಾಪತಿ’ ಅನ್ನುವ ಹೊಸ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.


ಮಲೈಕಾ ವಸುಪಾಲ್ ನಟಿಸುತ್ತಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಈ ಧಾರಾವಾಹಿಯಲ್ಲಿ ನಟಿಸುತ್ತಿರುವಾಗಲೇ ಮಲೈಕಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಈಗ ‘ವಿದ್ಯಾಪತಿ’ಯಲ್ಲೂ ನಟಿಸುತ್ತಿರುವ ಬಗ್ಗೆ ಘೋಷಿಸಿದ್ದಾರೆ. ಹಾಗಾಗಿ ಮಲೈಕಾ ಮತ್ತೆ ಕಿರುತೆರೆಗೆ ಲಗ್ಗೆ ಇಡೋದು ಡೌಟ್.

ಅಸಲಿ ಸಂಗತಿಯೆಂದರೆ ‘ಉಪಾಧ್ಯಕ್ಷ’ ಸಿನಿಮಾದಲ್ಲಿನ ಮಲೈಕಾ ಅವರ ನಟನೆ ನೋಡಿ ಆಕೆಯನ್ನು ‘ವಿದ್ಯಾಪತಿ’ ಸಿನಿಮಾಗೂ ಆಯ್ಕೆ ಮಾಡಲಾಯಿತಂತೆ. ಅಂದ ಹಾಗೆ ‘ವಿದ್ಯಾಪತಿ’ ಸಿನಿಮಾದಲ್ಲಿ ನಟ ನಾಗಭೂಷಣ್ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ನಾಯಕಿಯಾಗಿ ಮಲೈಕಾ ವಸುಪಾಲ್ ಜೊತೆಯಾಗಲಿದ್ದಾರೆ.

ಡಾಲಿ ಧನಂಜಯ್ ನಿರ್ಮಾಣ :

ನಟ ಡಾಲಿ ಧನಂಜಯ್ ಅವರ ನಿರ್ಮಾಣದ ಈ ಚಿತ್ರವನ್ನು ಒಪ್ಪಿಕೊಂಡಿರುವ ಮಲೈಕಾ, “ನಾನು ಹಿಟ್ಲರ್ ಕಲ್ಯಾಣ ಧಾರಾವಾಹಿ ಮಾಡುತ್ತಿರುವಾಗಲೇ ಹಲವಾರು ಕಥೆಗಳನ್ನು ಕೇಳಿದೆ. ಆದರೆ ಯಾವುದು ಹಿಡಿಸಲಿಲ್ಲ. ‘ವಿದ್ಯಾಪತಿ’ ಸಿನಿಮಾದ ಕಥೆ ಮಾತ್ರ ಬಹಳ ವಿಭಿನ್ನವಾಗಿದೆ ಎಂದು ಅನಿಸಿತು. ಹಾಗಾಗಿ ಒಪ್ಪಿಕೊಂಡಿದ್ದೇನೆ. ಡಾಲಿ ಧನಂಜಯ್ ಅವರ ನಿರ್ಮಾಣದಲ್ಲಿ ಆಗುತ್ತಿರುವ ಈ ಸಿನಿಮಾದ ಬಗ್ಗೆ ನನಗೆ ಹೆಚ್ಚಿನ ವಿಶ್ವಾಸವಿದೆ” ಎಂದು ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಲೈಕಾ ಹೇಳಿಕೊಂಡಿದ್ದರು.

ಇದರ ಜೊತೆಗೆ ‘ವಿದ್ಯಾಪತಿ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ ನಟಿ ಮಲೈಕಾ ವಸುಪಾಲ್ . ‘ವಿದ್ಯಾಪತಿ’ ಸಿನಿಮಾದಲ್ಲಿ ನನ್ನದು ಒಂದು ಹೋಮ್ಲಿ ಪಾತ್ರ. ಇದರಲ್ಲಿ ನಾನು ಬಹಳ ಸಿಂಪಲ್ ಆಗಿ ಕಾಣಿಸಿಕೊಳ್ಳಲಿದ್ದೇನೆ. ಇನ್ನು ನಾಗಭೂಷಣ್ ಅವರು ಒಳ್ಳೆಯ ನಟ. ಮಾರ್ಚ್ ಕೊನೆಯ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ” ಎಂದು ಹೇಳಿದ್ದಾರೆ.

Continue Reading

LATEST NEWS

Bengaluru : ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟದ ಬಳಿಕ ಮತ್ತೆ ಆತಂಕ; ಬೆಳ್ಳಂದೂರಿನ ಶಾಲಾ ಆವರಣದಲ್ಲಿ ಸ್ಫೋಟಕ ಪತ್ತೆ

Published

on

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆ ಮರೆತು ಹೋಗುವ ಮುನ್ನವೇ ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಮುಂಭಾಗದ ಖಾಲಿ ಜಮೀನಿನಲ್ಲಿ ಬಾಂಬ್‌ ತಯಾರಿಸಲು ಬಳಸುವ ಜಿಲೆಟಿನ್‌ ಕಡ್ಡಿ, ಡಿಟೋನೇಟರ್‌ ಹಾಗೂ ಇತರ ಸೊತ್ತುಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿದೆ.
ಸ್ಫೋಟಕಗಳನ್ನು ಟ್ರಾಕ್ಟರ್ ನಲ್ಲಿ ತಂದಿಟ್ಟಿರುವುದು ಕಂಡು ಬಂದಿದ್ದು ಮೇಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೆಫೆ ಬಾಂಬ್‌ ಸ್ಪೋಟದ ಮುನ್ನ ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು. ಇದರ ನಡುವಲ್ಲೇ ಬೆಂಗಳೂರಿನ ಶಾಲೆಯ ಆವರಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಐದು ಮಂದಿ ಗಾಯಗೊಂಡಿದ್ದು, ಈಗ ಸಿಸಿಬಿ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಡುಗಡೆ ಮಾಡಲಾಗಿದೆ.
ಕೆಫೆಯಲ್ಲಿ ಬಾಂಬ್ ಇಟ್ಟು ಹೋಗಿದ್ದ ಉಗ್ರನನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ. ಈ ಎಲ್ಲಾ ಹಿನ್ನೆಲೆಯಲ್ಲಿ ಪೊಲೀಸರು ಸ್ಫೋಟಕ ಪತ್ತೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

Continue Reading

LATEST NEWS

Trending