Wednesday, August 12, 2020

‘ಬಜಪೆ ವಿಮಾನ ನಿಲ್ದಾಣದಲ್ಲಿ ಇಟ್ಟಿದ್ದು ನಿಜವಾದ್ ಬಾಂಬ್’- ಜಾರ್ಜ್ ಶೀಟ್ ನಲ್ಲಿ ಸ್ಪೋಟಕ ರಹಸ್ಯ ಬಯಲು..!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಮಂಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಬಾಂಬರ್ ಆದಿತ್ಯರಾವ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ….

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದ ಕೇಸ್ ನಲ್ಲಿ ಮಹತ್ವದ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಬಾಂಬರ್ ಆದಿತ್ಯರಾವ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. 

ಆತ ಬಜಪೆ ವಿಮಾನ ನಿಲ್ದಾಣದಲ್ಲಿ ಇಟ್ಟಿದ್ದು ನಿಜವಾದ ಸ್ಪೋಟಕವಾಗಿದ್ದು ಜನರಲ್ಲಿ ಭಯ ಹುಟ್ಟಿಸುವ ಹಿನ್ನಲೆ ಈ ಬಾಂಬ್ ಇಟ್ಟಿದ್ದ ಎಂದು ತಿಳಿಸಲಾಗಿದೆ.

2020ರ ಜನವರಿ 20 ರಂದು ಮಂಗಳೂರು ಏರ್ ಪೋರ್ಟ್‍ನಲ್ಲಿ ಬಾಂಬ್ ಪತ್ತೆಯಾಗಿದ್ದು, ಈ ವಿಚಾರ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

ಈ ಬೆನ್ನಲ್ಲೇ ಎಲ್ಲಾ ವಿಮಾನ ನಿಲ್ಧಾನದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು.

ಈ ಬೆನ್ನಲ್ಲೇ ಆರೋಪಿ ಆದಿತ್ಯರಾವ್ ನೇರವಾಗಿ ಬೆಂಗಳೂರಿಗೆ ಬಂದು ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು ಅವರ ಕಚೇರಿಗೆ ತೆರಳಿ ಶರಣಾಗಿದ್ದನು.

ಅಲ್ಲದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಾನೇ ಬಾಂಬ್ ಇಟ್ಟಿರುವುದಾಗಿ ಬಾಯ್ಬಿಟ್ಟಿದ್ದನು.

ಪ್ರಕರಣದ ತನಿಖೆ ಪ್ರಕ್ರಿಯೆ ಏಪ್ರಿಲ್‌ನಲ್ಲಿ ಮುಕ್ತಾಯಗೊಂಡು ಆರೋಪ ಪಟ್ಟಿ ಸಿದ್ಧವಾಗಿತ್ತು. ನಂತರ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ರಾಜ್ಯ ಸರ್ಕಾರದ ಅನುಮತಿಗಾಗಿ ಕಳುಹಿಸಲಾಗಿತ್ತು.

ಈಗ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗಳಿಂದ ಪೂರ್ವಾನುಮತಿ ಪತ್ರ ಬಂದಿದೆ ಎಂದು ತನಿಖಾಧಿಕಾರಿಯಾಗಿರುವ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಕೆ.ಯು.ಬೆಳ್ಳಿಯಪ್ಪ ತಿಳಿಸಿದ್ದಾರೆ.

ಮಂಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಆರೋಪಿ ಆದಿತ್ಯರಾವ್ ವಿರುದ್ಧ ಸ್ಥಳೀಯ ಪೋಲಿಸರ ವಿಶೇಷ ತನಿಖಾ ತಂಡ 700 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.

ಚಾರ್ಜ್‍ಶೀಟ್‍ನಲ್ಲಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡಲಾಗಿದ್ದು, ಆರೋಪಿ ಇಟ್ಟಿದ್ದ ಬ್ಯಾಗ್ ನಲ್ಲಿ ಇದ್ದದ್ದು ನಿಜವಾದ ಸ್ಫೋಟಕವಾಗಿದೆ.

ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಆದಿತ್ಯರಾವ್ ಬಾಂಬ್ ಇಟ್ಟಿದ್ದ ಎಂದು ತಿಳಿಸಲಾಗಿದೆ. ಅಲ್ಲದೆ ಅಮೋನಿಯಂ ನೈಟ್ರೇಟ್, ಸ್ಫೋಟದ ತೀವ್ರತೆ ಹೆಚ್ಚಿಸಲು ಕಬ್ಬಿಣದ ಮೊಳೆ ಅಳವಡಿಸಲಾಗಿತ್ತು.

ಉದ್ದೇಶಪೂರ್ವಕವಾಗಿ ಒಂದು ವೈಯರ್ ಸಂಪರ್ಕಿಸದೆ ಆರೋಪಿ ಹಾಗೆಯೇ ಬಿಟ್ಟಿದ್ದ. ಇದು ನಿಜವಾದ ಸ್ಫೋಟಕ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲೂ ಸಾಬೀತಾಗಿದೆ.

ಆರೋಪಿ ವಿರುದ್ಧ ಯು.ಎ.ಪಿ.ಎ ಅಡಿ ಪ್ರಕರಣ ದಾಖಲಿಸಿ ಈ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.