DAKSHINA KANNADA
‘ಮಣಿಪಾಲ ಆರೋಗ್ಯ ಕಾರ್ಡ್’ ದಾಖಲಾತಿ ಪ್ರಾರಂಭ
ಮಂಗಳೂರು: 2021ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ದಾಖಲಾತಿ ಆರಂಭಗೊಂಡಿದ್ದು, ಮಂಗಳೂರು ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಡು ವಿತರಿಸುವ ಮೂಲಕ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಜಾನ್ ರಾಮಪುರಮ್ ಚಾಲನೆ ನೀಡಿದರು.
ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದೆ.
ಮಣಿಪಾಲ್ ಆರೋಗ್ಯ ಕಾರ್ಡ್ ದಾಖಲಾತಿ ಪ್ರಕ್ರಿಯೆಯನ್ನು ಡಿಜಿಟಲ್ ಮಾಧ್ಯಮವನ್ನು ಅನುಸರಿಸಿಕೊಂಡು ಆಪ್ ಮೂಲಕ ನೋಂದಾವಣೆ ಮಾಡಲಾಗುತ್ತಿದೆ.
ಶುಲ್ಕವನ್ನು ಆನ್ಲೈನ್ನಲ್ಲೇ ಪಾವತಿಸಿ ಸಂಪರ್ಕ ರಹಿತ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆ ಮಾಡಿಸಿಕೊಳ್ಳಿ, ಕಾರ್ಡ್ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಾಗುವುದು ಎಂದರು.
ಇದೇ ಸಂದರ್ಭ ಕೆಎಂಸಿ ಆಸ್ಪತ್ರೆಯ ಮಂಗಳೂರಿನ ರೀಜನಲ್ ಚೀಫ್ ಆಫರೇಟಿಂಗ್ ಆಫೀಸರ್ ಸಘೀರ್ ಸಿದ್ಧಿಕಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.
ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸುರೇಂದ್ರ ಪ್ರಸಾದ್, ಮಾರುಕಟ್ಟೆ ವಿಭಾಗದ ಡೆಪ್ಯೂಟಿ ಮ್ಯಾನೇಜರ್ ರಾಕೇಶ್ ಮೊದಲಾದವರು ಹೆಲ್ತ್ ಕಾರ್ಡ್ ಕುರಿತ ಮಾಹಿತಿ ನೀಡಿದರು.
ಕಾರ್ಡನ್ನು ಪಡೆದುಕೊಂಡವರಿಗೆ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಹತ್ತು ಹಲವು ಸೌಲಭ್ಯಗಳು ಸಿಗಲಿವೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!