Monday, October 18, 2021

ಸುದ್ದಿ ನಿರೂಪಕನ ಹಿಂದೆ ಗನ್‌ ಹಿಡಿದ ತಾಲಿಬಾನಿಗಳು-ವೀಡಿಯೋ ವೈರಲ್‌

ಕಾಬೂಲ್‌: ಇದೀಗ ತಾಲಿಬಾನಿಗಳು, ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್​ ಹಿಡಿದು ನಿಂತು ಹೆದರಿಸುತ್ತಿರುವ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ.


ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತ ಬಂದಿದ್ದೇ ಬಂದಿದ್ದು, ಅಲ್ಲಿಂದ ಪರಾರಿಯಾಗಲು ಅನೇಕರು ಪ್ರಯತ್ನ ಮಾಡುತ್ತಿದ್ದಾರೆ.

ಮತ್ತೊಂದೆಡೆ ತಾಲಿಬಾನ್​ ಉಗ್ರರು ಜನರಿಗೆ ಭರವಸೆ ನೀಡುತ್ತಿದ್ದಾರೆ.ಯಾರೂ ದೇಶಬಿಟ್ಟು ಹೋಗಬೇಡಿ.

ಇಸ್ಲಾಮಿಕ್​ ಆಡಳಿತಕ್ಕೆ ಹೆದರಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಮತ್ತೆಮತ್ತೆ ಭಯಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.
ಇದೀಗ ತಾಲಿಬಾನಿಗಳು, ಆ ನಿರೂಪಕನ ಸುತ್ತ 6-7 ಉಗ್ರರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ‘ತಾಲಿಬಾನಿಗಳಿಗೆ ಹೆದರಬೇಡಿ ಎಂದು ನಿಮ್ಮ ಸುದ್ದಿ ವಾಹಿನಿ ಮೂಲಕ ಹೇಳು.

ಇಸ್ಲಾಮಿಕ್ ಆಡಳಿತಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಹೇಳು, ತಾಲಿಬಾನಿಗಳನ್ನು ಹೊಗಳು ಎಂದು ನಿರೂಪಕನಿಗೆ ಗನ್​ ತೋರಿಸಿ, ಬಲವಂತವಾಗಿ ಹೇಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...