Thursday, September 29, 2022

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.


ಬೆಂಗಳೂರು ವಕೀಲರ ಸಂಘ, ಸಮಾಜ ಪರಿವರ್ತನ ಸಮುದಾಯ ಮತ್ತು ವಕೀಲ ಚಿದಾನಂದ ಅರಸ್‌ ಬಿ.ಜಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಬಿ ವೀರಪ್ಪ ಮತ್ತು ಎಚ್‌ ಎಸ್‌ ಹೇಮಲೇಖಾ ಅವರ ನೇತೃತ್ವದ ವಿಭಾಗೀಯ ಪೀಠವು ಎತ್ತಿ ಹಿಡಿದಿದೆ. ಈ ಐತಿಹಾಸಿಕ ಆದೇಶದಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದೆ.

ಅವುಗಳಲ್ಲಿ ಪ್ರಮುಖವಾದವು:
ಎಸಿಬಿ ರಚನೆಯಾದಾಗಿನಿಂದ ಯಾವುದೇ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಲ್ಲ.
ಗಣಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನಡೆಸಿದ ತನಿಖೆ ಜನರಲ್ಲಿ ಸಂಸ್ಥೆಯ ಮೇಲೆ ಅಪಾರ ನಂಬಿಕೆ ಸೃಷ್ಟಿಸಿತ್ತು. ಎಸಿಬಿ ರಚನೆಯ ಮೂಲಕ ಪರೋಕ್ಷವಾಗಿ ಲೋಕಾಯುಕ್ತ ಕಾಯಿದೆಯ ಉದ್ದೇಶವನ್ನು ಸೋಲಿಸಲಾಗಿದೆ.


ಸಿಆರ್‌ಪಿಸಿ ಸೆಕ್ಷನ್‌ಗಳ ಪ್ರಕಾರ ದೂರುದಾರರು ತನಿಖಾಧಿಕಾರಿ ಯಾಗುವಂತಿಲ್ಲ. ಸರ್ಕಾರದ ಆಕ್ಷೇಪಾರ್ಹವಾದ ಆದೇಶದ ಪ್ರಕಾರ ಮುಖ್ಯಮಂತ್ರಿ ಅಥವಾ ಮಂತ್ರಿ ಮಂಡಲದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿದರೆ ಮುಖ್ಯಮಂತ್ರಿ ಅವರೇ ತನಿಖೆಯ ಮೇಲೆ ನಿಗಾ ಇಡಬೇಕು ಮತ್ತು ತನಿಖೆಗೆ ಅನುಮತಿಸಬೇಕು. ಹೀಗಾಗಿ, ಆಕ್ಷೇಪಾರ್ಹ ಆದೇಶವು ಕಾನೂನು ಮತ್ತು ಸುಪ್ರೀಂ ಕೋರ್ಟ್‌ ಆದೇಶಕ್ಕೆ ವಿರುದ್ಧವಾಗಿದೆ.
ಎಸಿಬಿಯು ಸ್ವತಂತ್ರ ಪೊಲೀಸ್‌ ಅಧಿಕಾರಿಗಳನ್ನು ಹೊಂದಲು ಸಾಧ್ಯವಿಲ್ಲ. ಅವರು ಗೃಹ ಇಲಾಖೆಯಡಿ ಕರ್ತವ್ಯ ನಿರ್ವಹಿಸುವುದರಿಂದ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಾರೆ ಎಂದು ನಿರೀಕ್ಷಿಸಲಾಗದು.
ಲೋಕಾಯುಕ್ತಕ್ಕಿಂತ ಎಸಿಬಿ ಪರಿಣಾಮಕಾರಿ ಎಂದು ಸಾಬೀತುಪಡಿಸಲು ಸರ್ಕಾರ ಅಥವಾ ಎಸಿಬಿ ಯಾವುದೇ ದಾಖಲೆಯನ್ನು ಸಲ್ಲಿಸಿಲ್ಲ ಹೀಗೆ ಹತ್ತು ಹಲವು ಅಂಶಗಳನ್ನೊಳಗೊಂಡ ಒಟ್ಟು 289 ಪುಟಗಳ ತೀರ್ಪನ್ನು ನೀಡಿದೆ.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...