Connect with us

LATEST NEWS

‘ಹಿಜಾಬ್ ಪರ ಹೋರಾಟಕ್ಕಿಳಿದ ಮೇಲೆ ಕಿರುಕುಳ ಹೆಚ್ಚಾಗಿದೆ’

Published

on

ಉಡುಪಿ: ‘ಹಿಜಾಬ್ ಪರ ಹೋರಾಟಕ್ಕಿಳಿದ ಮೇಲೆ ನಮಗೆ ಕಿರುಕುಳ ಹೆಚ್ಚಾಗಿದೆ. ನಮಗೆ ಅನೇಕ ಅಪರಿಚಿತ ಕರೆಗಳು ಬರುತ್ತಿದ್ದು ಮಾನಸಿಕವಾಗಿ ನಾವು ತುಂಬಾ ಕುಗ್ಗಿ ಹೋಗಿದ್ದೇವೆ. ಅಷ್ಟೇ ಅಲ್ಲದೆ ಖಾಸಗಿ ಮಾಧ್ಯಮದವರು ನಮ್ಮ ಮನೆಗೆ ಹಿಡ್ಡನ್ ಕ್ಯಾಮೆರಾದೊಂದಿಗೆ ಬಂದು ನಮಗೆ ಗೊತ್ತಿಲ್ಲದಂತೆ ವೀಡಿಯೋ ಮಾಡಿಕೊಂಡು ಹೋಗಿದ್ದಾರೆ.

ವೀಡೀಯೋ ಮಾಡಿರುವುದು ಮಾತ್ರವಲ್ಲದೆ ಅದನ್ನು ನಮ್ಮ ಅನುಮತಿಯಿಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದಾರೆ. ಆ ಮೂಲಕ ಗೌಪ್ಯತೆಯ ಭಂಗ ಮಾಡಿದ್ದಾರೆ. ನಮ್ಮ ಕುಟುಂಬದವರ ಬಗ್ಗೆ ಮಾಹಿತಿ ಕಲೆ ಹಾಕುವ ಹಕ್ಕು ಯಾರಿಗೂ ಇಲ್ಲ’ ಎಂದು ಹಿಜಾಬ್ ಧಾರಿಣಿಯರು ಹೇಳಿದ್ದಾರೆ.


ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಐದು ಮಂದಿ ಹಿಜಾಬ್‌ಧಾರಿ ವಿದ್ಯಾರ್ಥಿನಿಯರು ಆ ಮೂಲಕ ಗೌಪ್ಯತೆಯ ಭಂಗ ಮಾಡಿದ್ದಾರೆ. ನಮ್ಮ ಕುಟುಂಬದವರ ಬಗ್ಗೆ ಮಾಹಿತಿ ಕಲೆ ಹಾಕುವ ಹಕ್ಕು ಯಾರಿಗೂ ಇಲ್ಲ.
ನಾವು ಸರ್ಕಾರದ ಜೊತೆ ನಾವು ಈ ಮೂಲಕ ವಿನಂತಿಸಿಕೊಳ್ಳುವುದು ಏನೆಂದರೆ ಆದಷ್ಟು ಬೇಗ ಇಂತಹ ಕೆಲಸ ಮಾಡಿದ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಅದರ ಜೊತೆಗೆ ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ಹೀಗಾಗಿ ಹೈಕೋರ್ಟ್ ತೀರ್ಪು ಬರೋವರೆಗೂ ಸರಕಾರ ಹಾಗೂ ಶಿಕ್ಷಣ ಇಲಾಖೆ ಪರೀಕ್ಷೆಗಳನ್ನು ಮುಂದೂಡಬೇಕು.

ಪರೀಕ್ಷೆ ಮುಂದೂಡಿದರೆ ನಮಗೆ ಅಧ್ಯಯನ ಮಾಡುವುದಕ್ಕೆ ಅವಕಾಶ ಸಿಗುತ್ತದೆ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ, ಶಿಕ್ಷಣ ಇಲಾಖೆಯ ಜೊತೆ ಮಾತಾಡುತ್ತೇವೆ ಅಂದಿದ್ದಾರೆ.

ಇದಕ್ಕಾಗಿ ನಾವುಗಳು ಹೋರಾಟ ಮಾಡುತ್ತಿದ್ದೇವೆ. ಕೋರ್ಟ್ ತೀರ್ಪು ಹಿಜಾಬ್ ಪರವಾಗಿ ಬರುವಂತಹ ನಿರೀಕ್ಷೆ ಇದ್ದು ಸದ್ಯ ರಾಜಕೀಯ ಕುತಂತ್ರಗಳು ನಡೆಯುತ್ತಿದೆ’ ಎಂದರು.

ಹಿಜಾಬ್ ವಿವಾದದ ಕುರಿತ ವಿಚಾರಣೆಯು ಹೈಕೋರ್ಟ್‌ನ ತ್ರಿದಸ್ಯ ಪೀಠದ ಅಂಗಳದಲ್ಲಿ ಇದ್ದು ಹೈಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಬೇಕು ಎಂದು ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ಹಕ್ಕಿಗಾಗಿ ಹೋರಾಟ ಮುಂದುವರೆಸಿರುವ ವಿದ್ಯಾರ್ಥಿನಿಯರು ಹೇಳಿದ್ದಾರೆ.

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending