Wednesday, December 1, 2021

ಮದುವೆಯಾದ 3 ದಿನದಲ್ಲೇ ಭೀಕರ ಆಕ್ಸಿಡೆಂಟ್‌: ವರ ಸಾವು ವಧು ಚಿಂತಾಜನಕ

ಹೈದರಾಬಾದ್​: ಮದುವೆಯಾಗಿ ಮೂರು ದಿನಗಳ ಬಳಿಕ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ವರ ಸಾವನ್ನಪ್ಪಿದ್ದು, ವಧು ಸ್ಥಿತಿ ಚಿಂತಾಜನಕವಾಗಿದೆ.


ಹೈದರಾಬಾದ್​ನ ಶೇರಿಲಿಂಗಂಪಲ್ಲಿ ಪಾಪಿರೆಡ್ಡಿ ನಿವಾಸಿ ಶ್ರೀನಿವಾಸ್​ ಮತ್ತು ತಮಿಳುನಾಡಿನ ಚೆನ್ನೈ ಯುವತಿ ಜೊತೆ ಇದೇ ತಿಂಗಳು 21 ರಂದು ತಿರುಪತಿಯಲ್ಲಿ ಮದುವೆಯಾಗಿತ್ತು.

ಮದುವೆ ಮುಗಿಸಿಕೊಂಡು ವಧು – ವರ ಸೇರಿದಂತೆ ಕುಟುಂಬಸ್ಥರು, ಬಂಧು ಬಳಗದವರು ಹೈದರಾಬಾದ್​ಗೆ ಹಿಂದಿರುಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.


ಮದುವೆಯಾಗಿ ಮೂರು ದಿನಗಳು ನಂತರ ವರ ಶ್ರೀನಿವಾಸ್​ ತನ್ನ ಹೆಂಡ್ತಿಯನ್ನು ಕರೆದುಕೊಂಡು ಆಕೆಯ ಚೆನ್ನೈಗೆ ಕಾರಿನ ಮೂಲಕ ತೆರಳುತ್ತಿದ್ದಾಗ ಬೆಂಗಳೂರು ಸಮೀಪ ಕಾರು ಅಪಘಾತಕ್ಕಿಡಾಗಿದ್ದು, ವರ ಶ್ರೀನಿವಾಸ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ವಧುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಧುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಬದುಕುಳಿಯುವುದು ಕಷ್ಟ ಎಂದು ವೈದ್ಯರು ತಿಳಿಸಿದ್ದಾರೆ.

ಸುದ್ದಿ ತಿಳಿದಾಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...