Connect with us

LATEST NEWS

ನ.12ರಿಂದ ಕೇರಳದಿಂದ ಜಿಲ್ಲೆಗೆ ಬಂದ ವಿದ್ಯಾರ್ಥಿಗಳ ಕಡ್ಡಾಯ ಆರೋಗ್ಯ ತಪಾಸಣೆ: ಜಿಲ್ಲಾ ಆರೋಗ್ಯ ಅಧಿಕಾರಿ

Published

on

ಮಂಗಳೂರು: ನ.12ರಿಂದ ಕೇರಳದಿಂದ ಜಿಲ್ಲೆಗೆ ಬಂದ ವಿದ್ಯಾರ್ಥಿಗಳನ್ನು ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಕೇರಳದಿಂದ ಜಿಲ್ಲೆಗೆ ಬರುವವರಿಗೆ ಗಡಿಯಲ್ಲಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಇಲ್ಲದವರಿಗೆ ಅಲ್ಲೇ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್‌ ಹೇಳಿದ್ದಾರೆ.


ತಲಪಾಡಿ ಗಡಿಯಲ್ಲಿ ಮೂರು ಪಾಳಿಯಲ್ಲಿ ಟೆಸ್ಟಿಂಗ್‌ ಮಾಡುತ್ತಿದ್ದೇವೆ. ನ.12ರಿಂದ ಜಿಲ್ಲೆಗೆ ಬಂದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಲಾಗುತ್ತದೆ.

ಅವರಿಗೆ ಯಾವುದೇ ರೋಗದ ಲಕ್ಷಣ ಇಲ್ಲದೇ ಇದ್ದರೂ, ಈ ಹಿಂದೆ ಆರೋಗ್ಯ ಪರೀಕ್ಷೆ ಇದ್ದರೂ ಈ ಬಾರಿ ಕಡ್ಡಾಯ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಕಾಲೇಜಿಗೊಂದು ನೋಡಲ್‌ ಆಫೀಸರ್‌ ನೇಮಕ ಮಾಡಿದ್ದೇವೆ ಎಂದರು.
ಪ್ರತಿನಿತ್ಯ ಹೋಗಿ ಬರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು 14 ದಿನದ ಆರ್‌ಟಿಪಿಆರ್‌ ವರದಿ ತೋರಿಸುವುದು ಕಡ್ಡಾಯ.ಇದರಂತೆ ರೈಲು ನಿಲ್ದಾಣಗಳಲ್ಲಿ ಸಹ ಆರ್‌ಟಿಪಿಆರ್‌ ಚೆಕ್‌ ನಡೆಯುತ್ತದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಇಂದು ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಓಮಿಕ್ರೋನ್‌ ವೈರಸ್‌ ಬಗ್ಗೆ ಮಾತನಾಡಿ, ಇದರ ಹರಡುವಿಕೆ ಶೀಘ್ರವಾಗಿದೆ ಆದರೆ ಅದರ ತೀವ್ರತೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಯಾರೇ ಆದರೂ ಭಯಪಡುವ ಅಗತ್ಯ ಇಲ್ಲ. ಆದರೆ ಕಾಳಜಿ ಬೇಕು ಎಂದರು.

ಇದೇ ವೇಳೆ ಡಿ.1ರಂದು ವಿಶ್ವ ಏಡ್ಸ್‌ ದಿನಾಚರಣೆ ಬಗ್ಗೆ ಮಾಹಿತಿ ನೀಡಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮ ನಡೆಸಲಾಗುವುದು. ಬಂಟ್ವಾಳದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಉದ್ಘಾಟಿಸಲಿದ್ದಾರೆ ಎಂದರು.

ಡಾ.ಮಹೇಶ್‌, ಡಾ.ಬದ್ರುದ್ದೀನ್‌ ಇದ್ದರು.

Click to comment

Leave a Reply

Your email address will not be published. Required fields are marked *

LATEST NEWS

ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

Published

on

ಕಿನ್ನಿಗೋಳಿ: ಮುಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ-ಬೂದಬಾರೆ ಜನ್ಮ ಕ್ಷೇತ್ರದ ತಾಕೊಡೆ ಮರ ಶುಕ್ರವಾರ(ಎ.3) ಮದ್ಯಾಹ್ನ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡಂತಾಗಿದೆ.

ಸುಮಾರು 800 ರಿಂದ 1000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢವಾಗಿದೆ. ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿದ್ದ ಅವಳಿ ವೀರರಾದ  ಕಾಂತಬಾರೆ-ಬೂದಬಾರೆಯರು. ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ಬಟ್ಟೆಯ ತೊಟ್ಟಿಲು ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ ಕೊಂಬೆ ಅನ್ನುವುದು ಉಲ್ಲೇಖನೀಯ. ಬೃಹದಾಕಾರದ ಈ ಮರದ ಪಡ್ದಾಯಿ ಗೆಲ್ಲು ಕೆಲ ವರ್ಷಗಳ ಹಿಂದೆ ಭಾರೀ ಗಾಳಿಮಳೆಯ ಸಂದರ್ಭ ಬಿದ್ದಿತ್ತು.

kanthabare

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

ಸುಮಾರು 2ರಿಂದ 3 ಮೀಟರ್‌ಗಳಷ್ಟು ವ್ಯಾಸವಿದ್ದ ಈ ಮರದ ಉತ್ತರ ದಿಕ್ಕಿನ ಗೆಲ್ಲು ಕೆಲ ದಿನಗಳ ಹಿಂದೆ ಬಿದ್ದಿತ್ತು. ಸುದೀರ್ಘ ಕಾಲಮಾನದಲ್ಲಿ ಅದರಷ್ಟೇ ಆದ ಯಾವುದೇ ಗಿಡ ಚಿಗುರಿದರೂ ಜೀವಂತ ಉಳಿದಿರಲಿಲ್ಲ. ಆದರೆ ಇದೀಗ ಪರ್ಯಾಯವಾಗಿ ಪಕ್ಕದಲ್ಲಿ ತಾಕೊಡೆಯ ಗಿಡವೊಂದು ಭವಿಷ್ಯದ ಸಾಕ್ಷಿಯಾಗಿ ಗೋಚರವಾಗಿದೆ. ಧಾರ್ಮಿಕ ಮಹತ್ವದ ಧರೆಗುರುಳಿದ ಮರದ ತೆರವಿಗೆ ಪೂರ್ವಭಾವಿಯಾಗಿ ಧಾರ್ಮಿಕ ಪ್ರಕ್ರಿಯೆ ಸಹಿತ ಪ್ರಶ್ನಾಚಿಂತನೆ ನಡೆಸಿ ಆ ಪ್ರಕಾರ ಮುಂದುವರಿಯಲು ಕ್ಷೇತ್ರದ ಆಡಳಿತ ಸಮಿತಿ ಹಾಗೂ ಟ್ರಸ್ಟ್ ತೀರ್ಮಾನಿಸಿದೆ.

Continue Reading

FILM

ಅಭಿಮಾನಿಗಳಿಗೆ ಹೊಸ ಸಿನಿಮಾದ ಗುಡ್ ನ್ಯೂಸ್ ಕೊಟ್ಟ ಶಾರುಖ್

Published

on

ಮುಂಬೈ : ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾದ ನಂತರ ಹೊಸ ಸಿನಿಮಾ ಘೋಷಣೆ ಮಾಡದೇ ಉಳಿದಿದ್ದ ಅವರು, ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ ಡೇಟ್ ನೀಡಿದ್ದಾರೆ. ತಮ್ಮ ಹೊಸ ಸಿನಿಮಾ ಜುಲೈ ಅಥವಾ ಆಗಸ್ಟ್ ನಿಂದ ಶುರುವಾಗಲಿದೆ ಎಂದಿದ್ದಾರೆ. ಉಳಿದಂತೆ ಅವರು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

 

ಈ ನಡುವೆ ಶಾರುಖ್ ಖಾನ್ ಕುರಿತಾಗಿ ದಕ್ಷಿಣದ ಹೆಸರಾಂತ ನಟ ಕಮಲ್ ಹಾಸನ್ ಅಚ್ಚರಿಯ ಮಾತುಗಳನ್ನು ಆಡಿದ್ದಾರೆ.  ಪುತ್ರಿ ಶ್ರುತಿ ಹಾಸನ್ ಜೊತೆಗಿನ ಮಾತುಕತೆಯಲ್ಲಿ ಶಾರುಕ್ ಆಸೆಗಳನ್ನು ಅವರು ರಿವೀಲ್ ಮಾಡಿದ್ದಾರೆ.

ತಂದೆಗೆ ಇನ್ನೂ ಏನಾದರೂ ಆಸೆಗಳು ಉಳಿದಿದ್ದವಾ? ಎಂದು ಶ್ರುತಿ ಕೇಳ್ತಾರೆ. ಆಗ ಯಾವುದೇ ಆಸೆಗಳು ಇಲ್ಲ ಎಂದು ಹೇಳುವ ಕಮಲ್ ಹಾಸನ್, ಈ ಸಮಯದಲ್ಲಿ ಶಾರುಖ್ ಆಸೆಯನ್ನು ಹೊರ ಹಾಕುತ್ತಾರೆ. ಮಣಿರತ್ನಂ ಜೊತೆ ಸಿನಿಮಾ ಮಾಡಬೇಕು ಎನ್ನುವುದು ಶಾರುಖ್ ಆಸೆ. ಅದಕ್ಕಾಗಿ ಅವರು ಪ್ರೈವೆಟ್ ಜೆಟ್ ತಗೆದುಕೊಳ್ಳೊ ಕನಸು ಕಂಡಿದ್ದಾರೆ ಎಂದಿದ್ದಾರೆ ಕಮಲ್.

ಶಾರುಖ್ ಅವರಿಗೆ ವಿಮಾನ ಖರೀದಿಸುವ ಮತ್ತು ಮಣಿರತ್ನಂ ಸಿನಿಮಾದಲ್ಲಿ ನಟಿಸುವ ಆಸೆಯನ್ನು ವ್ಯಕ್ತ ಪಡಿಸಿರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಹಜವಾಗಿಯೇ ಅಚ್ಚರಿ ತರಿಸಿದೆ. ವಿಮಾನ ಏನೋ ಖರೀದಿಸಬಹುದು. ಆದರೆ, ಮಣಿರತ್ನಂ ಅವರನ್ನು ಖರೀದಿಸೋಕೆ ಆಗಲ್ಲ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

Continue Reading

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

LATEST NEWS

Trending