LATEST NEWS
ರಾತ್ರಿ ರಿಸೆಪ್ಷನ್ ಮಾಡಿ ಕೈಕೊಟ್ಟ ವರ; ಬೆಳಗ್ಗೆ ಕೈಹಿಡಿದ ಮತ್ತೊಂದು ಯುವಕ..!
ರಾತ್ರಿ ರಿಸೆಪ್ಷನ್ ಮಾಡಿ ಕೈಕೊಟ್ಟ ವರ; ಬೆಳಗ್ಗೆ ಕೈಹಿಡಿದ ಮತ್ತೊಂದು ಯುವಕ..!
ಚಿಕ್ಕಮಗಳೂರು: ಮದುವೆಯೆನ್ನುವುದು ಸ್ವರ್ಗದಲ್ಲಿ ಆಗುತ್ತದೆ ಎನ್ನುತ್ತಾರೆ. ಯಾರ ಯಾರ ವಿಧಿಯಲ್ಲಿ ಏನು ಬರೆದಿರುತ್ತೋ ಆ ಬೃಹ್ಮ ಮಾತ್ರ ಬಲ್ಲ.
ಕೆಲವೊಮ್ಮೆ ಭೂಮಿಯ ಮೇಲೆ ತಪ್ಪಾಗಿ ಜೋಡಿಯನ್ನು ಆಯ್ಕೆ ಮಾಡಿಕೊಂಡರೆ ವಿಧಿಯೇ ಅದನ್ನು ಸರಿಪಡಿಸುತ್ತದೆಯೇನೋ ಎನ್ನುವ ಸಂದೇಹಗಳು ಕಾಡುವುದು ಸಹಜ. ಅಂಥ ಒಂದು ಅಪರೂಪದ ವಿವಾಹಕ್ಕೆ ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ಸಾಕ್ಷಿಯಾಗಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸರಪನಹಳ್ಳಿಯ ಯುವತಿ ಸಿಂಧು ಹಾಗೂ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ನವೀನ್ ಎನ್ನುವವರ ವಿವಾಹ ನಿಶ್ಚಯವಾಗಿತ್ತು. ಇದರ ಜತೆಯೇ ನವೀನ್ ಅವರ ಸಹೋದರ ಅಶೋಕ್ ಅವರ ವಿವಾಹವೂ ಇತ್ತು.
ಅಶೋಕ್ ಅವರ ವಿವಾಹ ಸುಗಮವಾಗಿ ನಡೆದಿದೆ. ಆದರೆ ಸಮಸ್ಯೆಯಾಗಿರುವುದು ಸಿಂಧು ಮತ್ತು ನವೀನ್ ವಿವಾಹದಲ್ಲಿ. ಇವರು ಹಿಂದಿನ ದಿನ ರಿಸೆಪ್ಷನ್ ಮಾಡಿಕೊಂಡಿದ್ದಾರೆ. ಆದರೆ ಈ ಮದುವೆಯ ವಿಷಯ ನವೀನ್ ಪ್ರೀತಿಸುತ್ತಿದ್ದ ಯುವತಿಗೆ ತಿಳಿದಿದೆ.
ಆಕೆ ಛತ್ರಕ್ಕೇ ಬಂದು ನಾನು ಛತ್ರದಲ್ಲೇ ವಿಷ ಕುಡಿಯುತ್ತೇನೆ, ಮದುವೆ ನಿಲ್ಲಿಸುತ್ತೇನೆ ಎಂದು ಹೆದರಿಸಿದ್ದಾಳೆ. ಇದಕ್ಕೆ ಹೆದರಿದ ನವೀನ್ ಛತ್ರ ಬಿಟ್ಟು ಆಕೆಯ ಜತೆ ತೆರಳಿದ್ದಾನೆ. ಇಲ್ಲಿ ಮದುವೆ ನಿಂತಿದೆ. ವಧು ಮತ್ತು ಆಕೆಯ ಕುಟುಂಬದವರ ಕಂಗಾಲಾಗಿ ಹೋಗಿದ್ದಾರೆ.
ಆಗ ಹೀರೋ ಆಗಿ ಬಂದವರೇ ದೋರನಾಳು ಗ್ರಾಮದ ಪಕ್ಕದ ನಂದಿ ಗ್ರಾಮದ ಯುವಕ ಚಂದ್ರು. ಸಿಂಧುವನ್ನು ತಾವು ಮದುವೆಯಾಗುವುದಾಗಿ ಹೇಳಿದ ಅವರ ಮದುಮಗಳ ಕೈಹಿಡಿದ್ದಾರೆ. ಇವರು ಬೆಂಗಳೂರಿನ ಬಿಎಂಟಿಸಿ ಬಸ್‍ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ.
ಅತ್ತ ನಾಪತ್ತೆಯಾಗಿರುವ ವರನಿಗಾಗಿ ಹುಡುಕಾಟ ನಡೆದಿದೆ.ರಾತ್ರಿ ರಿಸೆಪ್ಷನ್ ಮಾಡಿ ಕೈಕೊಟ್ಟ ವರ; ಬೆಳಗ್ಗೆ ಕೈಹಿಡಿದ ಮತ್ತೊಂದು ಯುವಕ..!
bangalore
ಸ್ನೇಹಿತ್ ಔಟ್- ನಮ್ರತಾ- ಸ್ನೇಹಿತ್ ಲವ್ ಸ್ಟೋರಿಗೆ ಬ್ರೇಕ್..!
ಬಿಗ್ ಬಾಸ್: ಬಿಗ್ ಬಾಸ್ ಮನೆ ಆಟ ಇದೀಗ 60 ದಿನಗಳ ಪೂರೈಸಿದೆ. ಪ್ರತಿ ವಾರವು ಸ್ಪರ್ಧೆಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲಿಮಿನೆಟ್ ಆಗುತ್ತಿದ್ದಾರೆ. ಈ ವಾರವು ಸ್ನೇಹಿತ್ ಔಟ್ ಆಗಿದ್ದಾರೆ.
ಹಿಂದಿನ ವಾರದಲ್ಲಿ ಸ್ನೇಹಿತ್ ನಮ್ರತಾ ಜೊತೆ ಲವ್ವಿ-ಡವ್ವಿ ವಿಷಯಗಳನ್ನು ಮಾತನಾಡುತ್ತಿದ್ದರು. ನಮ್ರತಾ ಜೊತೆ ಬೆಸ್ಟ್ ಫ್ರೇಂಡ್ ಆಗಿದ್ದ ಸ್ನೇಹಿತ್ ಟಾಸ್ಕ್ ಗಳಲ್ಲಿ ಗೆಲ್ಲುತ್ತಿದ್ದರೂ, ಕೊನೆ ಕೊನೆಗೆ ಆಟದ ವಿಚಾರದಲ್ಲಿ ಬಹಳಷ್ಟು ಕಡೆ ಎಡವಿದ್ದರು. ಸ್ನೇಹಿತ್ ಕ್ಯಾಪ್ಟನ್ಸಿ ಆಗಿದ್ದಾಗ ಎರಡು ತಂಡಗಳ ಜೊತೆ ಪಕ್ಷಪಾತ ಮಾಡುತ್ತಿದ್ದರು. ಒಂದು ಟೀಮ್ ಗೆ ಮಾತ್ರ ಸಪೋರ್ಟ್ ಮಾಡುತ್ತಿದ್ದರು.
ಸ್ನೇಹಿತ್ ನಿರ್ಧಾರದಿಂದ ಕ್ಯಾಪ್ಟನ್ ಆಗಿ ಮುಂದೆ ಬರಬೇಕಿದ್ದ ಕಡೆಯಲ್ಲಾ ಎಡವಿದ್ದೇ ಜಾಸ್ತಿ. ಹಾಗಾಗಿ ಗಂಧರ್ವರು- ರಾಕ್ಷಸರು ಎಂಬ ತಂಡಗಳ ನಡುವೆ ಜಗಳಗಳು ಹೆಚ್ಚಾಗಿತ್ತು. ಇದೇ ಟಾಸ್ಕ್ ನಲ್ಲಿ ಡ್ರೋನ್ ಪ್ರತಾಪ್ ಸಂಗೀತಾ ಕಣ್ಣಿಗೆ ಪೆಟ್ಟಾಗಿದ್ದು, ಇದಕ್ಕೆ ಪರೋಕ್ಷವಾಗಿ ಸ್ನೇಹಿತೇ ಕಾರಣರಾದರು. ಟಾಸ್ಕ್ ನಿಲ್ಲಿಸುವ ಅಧಿಕಾರ ಕೈಯಲ್ಲಿತ್ತು. ಆದರೆ ಏನೂ ಮಾತನಾಡಲೂ ಮುಂದೆ ಹೋಗಿಲ್ಲ. ಸ್ನೇಹಿತ್ ನಿರ್ಧಾರಕ್ಕೆ ಪ್ರೇಕ್ಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಸ್ನೇಹಿತ್ ನ ನಡೆತೆಯಿಂದ ಇದೀಗ ಅವರ ಬಿಗ್ ಬಾಸ್ ನಿಂದ ಹೊರ ಹೋಗಿದ್ದಾರೆ.
ವಿನಯ್ ಗೌಡ ಮತ್ತು ನಮೃತಾ ಗೌಡ ಜೊತೆಯಷ್ಟೇ ಕಂಫರ್ಟ್ ಝೋನ್ ಕ್ರಿಯೇಟ್ ಮಾಡಿಕೊಂಡು, ಕ್ಯಾಪ್ಟನ್ ಆಗಿದ್ರೂ ಅವರ ಪರವಾಗೇ ಆಡುತ್ತಿದ್ದ ಸ್ನೇಹಿತ್ ಎಲಿಮಿನೇಟ್ ಆಗಿದ್ದಾರೆ. ಸದ್ಯ ಸ್ನೇಹಿತ್ ಎಲಿಮಿನೇಷನ್ ನಿಂದ ವಿನಯ್ & ಟೀಮ್ ಶಾಕ್ ಆಗಿದೆ. ನಮ್ರತಾ ಗೌಡ ಜೊತೆ ಲವ್ವಿ ಡವ್ವಿ ಅಂತ ಹಿಂದೆ ಬೀಳತ್ತಿದ್ದ ಸ್ನೇಹಿತ್ ಮುಂದಿನ ನಡೆಯೇನು? ಬಿಗ್ ಬಾಸ್ ಆಟದ ನಂತರ ಮುಂದಿನ ದಿನಗಳಲ್ಲಿ ನಮ್ರತಾ ಮೆಚ್ಚಿ ಸ್ನೇಹಿತ್ ಒಪ್ಪಿಕೊಳ್ತಾರಾ ಕಾಯಬೇಕಿದೆ.
ಅಂತೂ ಬಿಗ್ ಬಾಸ್ ನಿಂದ ಸ್ನೇಹಿತ್ ಔಟ್ ಆದಾಗ ನಮ್ರತಾ ಬಿಕ್ಕಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇವರ ಲವ್ ಸ್ಟೋರಿ ಬ್ರೇಕ್ ಆಗುತ್ತಾ ಅಲ್ಲ ಬಿಗ್ ಮನೆಯಿಂದ ಹೊರ ಹೋದ ಬಳಿಕ ಮುಂದುವರಿಯುತ್ತಾ ಅನ್ನೋದು ಕಾದು ನೋಡಬೇಕಷ್ಟೇ.
LATEST NEWS
ಕ್ರೇಟ್ ಗೆ ಪಿಕಪ್ ಢಿಕ್ಕಿ-ಸಾವಿರಾರು ರೂ. ಮೌಲ್ಯದ ನಂದಿನಿ ಹಾಲು ರಸ್ತೆ ಪಾಲು
ಉಡುಪಿ: ಮಿಲ್ಕ್ ಬೂತ್ ಎದುರು ಕ್ರೇಟ್‌ನಲ್ಲಿ ಇರಿಸಿದ್ದ ನಂದಿನಿ ಹಾಲಿನ ಶೇಖರಣೆಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದು ಸಾವಿರಾರು ರೂಪಾಯಿ ಮೌಲ್ಯದ ನಂದಿನಿ ಹಾಲು ರಸ್ತೆ ಪಾಲಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಡೆದಿದೆ.
ಈ ಅಪಘಾತದಲ್ಲಿ ಬೈಕ್ ಹಾಗೂ ಸೈಕಲ್ ಸವಾರರಿಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ಚಾಲಕನು ದ್ವಿಚಕ್ರ ವಾಹನವೊಂದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರಿಸಿದ್ದ ಹಾಲಿನ ಕ್ರೇಟ್‌ಗಳಿಗೆ ಪಿಕಪ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಹಾಲಿನ ಪ್ಯಾಕೆಟ್ ಶೇಖರಿಸಿಟ್ಟಿದ್ದ ಕ್ರೇಟ್‌ಗಳೆಲ್ಲ ಚೆಲ್ಲಾ ಪಿಲ್ಲಿಯಾಗಿದ್ದು, ಅಪಾರ ಪ್ರಮಾಣದ ಹಾಲು ರಸ್ತೆ ಪಾಲಾಗಿದೆ. ಪಿಕಪ್ ವಾಹನ ಚಾಲಕನ ಅತೀ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಅವಘಡಕ್ಕೆ ಕಾರಣ ಎನ್ನಲಾಗಿದ್ದು, ಪಿಕಪ್ ಚಾಲಕ ಪರಾರಿಯಾಗಿದ್ದಾನೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
Kundapura: ಲಂಚ ಪ್ರಕರಣ- ಸಬ್ ಇನ್‌ಸ್ಪೆಕ್ಟ್ರರ್ ಶಂಭುಲಿಂಗಯ್ಯ ಅಮಾನತು
ಕುಂದಾಪುರ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ ಪಿ ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ನಿಯೋಜಿಸಲಾಗಿತ್ತು.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್