Connect with us

DAKSHINA KANNADA

Kadaba: ಒಂದುವರೆ ವರ್ಷಗಳ ನಂತರ ಮನೆ ಕಳ್ಳತನದ ಆರೋಪಿಗಳ ಬಂಧನ..!

Published

on

ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕ ವರ್ಗೀಸ್ ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಕಡಬ: ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕ ವರ್ಗೀಸ್ ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು.

ಇವರಲ್ಲಿ ಸದ್ದಾಂ ಈ ಹಿಂದೆ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿ.

ಈತನ ಮೊಬೈಲ್ ಸಿಡಿಆರ್ ಆಧಾರದಲ್ಲಿ ಕಳ್ಳತನ ಪ್ರಕರಣ ಪತ್ತೆ ಹಚ್ಚಲಾಗಿದೆ. 2021 ರ ಡಿಸೆಂಬರ್ 13ರಂದು ಬೆಳಿಗ್ಗೆ 8:45 ಗಂಟೆಗೆ ದಂಪತಿ ಕೆಲಸಕ್ಕೆ ಹೋದ ಸಂದರ್ಭ ಕಳವು ನಡೆದಿತ್ತು.

ಸುಮಾರು 24ಗ್ರಾಂ ತೂಕದ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಸರ, 6ಗ್ರಾಂ ತೂಕದ ಚಿನ್ನದ ಬೆಂಡೋಲೆ, ಮಕ್ಕಳ ಬೆಂಡೋಲೆಗಳು ಸೇರಿದಂತೆ ಅಂದಾಜು ರೂಪಾಯಿ 1.50 ಲಕ್ಷ ಮೌಲ್ಯದ ಸುಮಾರು 41ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿತ್ತು.

ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಸ್ತುತ ಕಳವಾದ 41 ಗ್ರಾಂ ಚಿನ್ನದಲ್ಲಿ 17 ಗ್ರಾಂ ಚಿನ್ನವನ್ನು ಪೊಲೀಸರು ಆರೋಪಿಗಳಿಂದ ವಶಪಡಿಸಿ ಮನೆಯವರಿಗೆ ಹಸ್ತಾಂತರ ಮಾಡಿದ್ದಾರೆ.

ಉಳಿದ ಚಿನ್ನಾಭರಣ ಪತ್ತೆಯಾಗಬೇಕಿದೆ. ಆರೋಪಿ ಸದ್ದಾಂ ನೀಡಿದ ಹೇಳಿಕೆಯಂತೆ ಪೊಲೀಸರು ಆತ ಕಳವು ಮಾಡಿದ ಜೀಪನ್ನು ವಶಕ್ಕೆ ಪಡೆಯಲು ಮನೆಗೆ ಹೋದಾಗ ಮಹಿಳೆಯರು ಮಕ್ಕಳೊಂದಿಗೆ ಪೊಲೀಸರನ್ನು ಅಡ್ಡಗಟ್ಟಿದ್ದು, ಜೀಪನ್ನು ಬಿಟ್ಚುಕೊಡದ ಘಟನೆಯೂ ನಡೆಯಿತು.

Click to comment

Leave a Reply

Your email address will not be published. Required fields are marked *

Ancient Mangaluru

ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ

Published

on

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನಾ ಸಮಾರಂಭ ಮೇ 10 ರಂದು ಮಧ್ಯಾಹ್ನ 12 ಗಂಟೆಗೆ ಮುಲ್ಕಿಯ ಲಘುವಿ ಕಾಂಪ್ಲೆಕ್ಸ್ ಮುಖ್ಯರಸ್ತೆ ಪಕ್ಷಿಕೆರೆಯಲ್ಲಿ ನಡೆಯಲಿದೆ.

ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರ ಧರ್ಮಗುರು ಅತಿ ವಂದನೀಯ ಗುರುಗಳು ಮೆಲ್ವಿನ್ ನೊರೊಹ್ನಾ ದ್ವೀಪ ಪ್ರಜ್ವಲಿಸಲಿದ್ದಾರೆ. ಪಕ್ಷಿಕೆರೆ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ.ಸೀತಾರಾಮ್ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಪಕ್ಷಿಕೆರೆ, ಎಸ್ ಕೋಡಿ, ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

ಸಮಾಜಸೇವಕ ಧನಂಜಯ ಶೆಟ್ಟಿಗಾರ್ ಇ-ಮುದ್ರಾಂಕ ಸೇವೆಗೆ, ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಆವರ್ತನ ಠೇವಣಿಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.

Continue Reading

DAKSHINA KANNADA

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

Published

on

ಮಂಗಳೂರು:  2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.  ಈ ಪೈಕಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.

ಇದೀಗ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು ಉಡುಪಿ ಜಿಲ್ಲೆ  ಶೇಕಡಾ 94 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ. 92.12 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಹೊಂದಿದೆ. ಶಿವಮೊಗ್ಗ ಶೇ.88.67 ಫಲಿತಾಂಶದಿಂದ  ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

ರಾಜ್ಯಕ್ಕೆ ಬಾಗಲಕೋಟೆ ಮುಧೋಳಿನ ಅಂಕಿತಾ 625 ಅಂಕ ಪಡೆದು ಪ್ರಥಮ ಸ್ಥಾನ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ದಕ್ಷಿಣ ಕನ್ನಡ ಚಿನ್ಮಯ್ 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಮುಂದೆ ಓದಿ..; ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

ವಿದ್ಯಾರ್ಥಿಗಳು ಫಲಿತಾಂಶವನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದು. kseab.karnataka.gov.in ಅಥವಾ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸ ಬಹುದಾಗಿದೆ.

Continue Reading

DAKSHINA KANNADA

ಮಂಗಳೂರು: ಸರಕಾರಿ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.!!

Published

on

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20 ವ) ಎಂಬವರು ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಮೇ.8ರಂದು ಬೆಳಿಗ್ಗೆ 10.30ರ ಸುಮಾರಿಗೆ ನಡೆದಿದೆ. ನಗರದ ಬೀಬಿ ಅಲಾಬಿ ರಸ್ತೆಯ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್‌ನಲ್ಲಿದ್ದ ನಿತೇಶ್ 2ನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು.

suicide

ಮುಂದೆ ಓದಿ..; PUTTUR : ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ತೆಗೆದವರಿಗೆ ಬಿತ್ತು ಧರ್ಮದೇಟು!

ಇವರು ಉಡುಪಿ ಜಿಲ್ಲೆಯ ನಿವಾಸಿಯಾಗಿದ್ದು, ಕಳೆದ 2 ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು 5 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಈ ಬಗ್ಗೆ ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

LATEST NEWS

Trending