Connect with us

    LATEST NEWS

    ಒಲಿಂಪಿಕ್ಸ್‌ ಬಳಿಕ ಮನು ಭಾಕರ್‌ಗೆ ಕುಲಾಯಿಸಿದ ಅದೃಷ್ಟ .! ಜಾಹಿರಾತಿಗಾಗಿ ಬ್ರ್ಯಾಂಡ್ ಕಂಪೆನಿಗಳಿಂದ ಆಫರ್..!

    Published

    on

    ಪ್ಯಾರಿಸ್/ಮಂಗಳೂರು: ಪ್ಯಾರಿಸ್ ಒಲಿಂಪಿಕ್ಸ್‌ ಶೂಟಿಂಗ್ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮಹಾದಾಸೆಯನ್ನು ಇಟ್ಟಿದ್ದ ಮನು ಪ್ರಭಾಕರ್‌ ಕನಸು ಕಮರಿದೆ. ಈ ಹಿಂದೆ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕವನ್ನು ಪಡೆದಿದ್ದ ಮನು ಇದೀಗ ಅಂತಿಮ ಸುತ್ತಿನಲ್ಲಿ ಕೂದಲೆಳೆಯಲ್ಲಿ ಅವಕಾಶವನ್ನು ಕಳೆದುಕೊಂಡಿದ್ದಾರೆ. ಭಾರತಕ್ಕೆ ಮೂರನೇ ಕಂಚಿನ ಪದಕವನ್ನು ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದಾರೆ. ಫ್ರಾನ್ಸ್‌ನ ಚಟೌರಾಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕವನ್ನು ಕೆಳದುಕೊಂಡಿದ್ದಾರೆ. 2 ಪದಕ ಗೆದ್ದ ಬಳಿಕ ಮನು ಭಾಕರ್ 3ನೇ ಪದಕದ ಮೇಲೆ ಕಣ್ಣಿಟ್ಟಿದ್ದರು. ಆದರೆ 4ನೇ ಸ್ಥಾನಕ್ಕೆ ಕುಸಿದಿದ್ದು ತೀವ್ರ ನಿರಾಸೆಯನ್ನುಂಟು ಮಾಡಿದೆ. ಆದರೂ ಮನು ಭಾಕರ್ ಅವರ ಸಾಧನೆಗೆ ಹ್ಯಾಟ್ಸಾಫ್ ಅಂತ ಕೋಟ್ಯಾಂತರ ಭಾರತೀಯರು ಹೇಳುತ್ತಿದ್ದಾರೆ.

    ಫೈನಲ್​ನಲ್ಲಿ ಮನು ಭಾಕರ್ 28 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರೆ, ಕಂಚಿನ ಪದಕ ಗೆದ್ದ ಹಂಗೇರಿಯಾದ ಮೇಜರ್ ವೆರೋನಿಕಾ 31 ಪಾಯಿಂಟ್ಸ್ ಕಲೆಹಾಕಿದ್ದರು. ಅಂದರೆ ಕೇವಲ ಮೂರು ಅಂಕಗಳ ಅಂತರದಿಂದ ಮೂರನೇ ಪದಕ ಗೆಲ್ಲುವ ಅವಕಾಶವನ್ನು ಮನು ಭಾಕರ್ ಕೈಚೆಲ್ಲಿಕೊಂಡರು.

    ಪ್ಯಾರಿಸ್ ಒಲಿಂಪಿಕ್ಸ್ : ಮನು ಭಾಕರ್ ಹ್ಯಾಟ್ರಿಕ್ ಪದಕದ ಕನಸು ಭಗ್ನ

    ಮನು ಭಾಕರ್‌ಗೆ ಕುಲಾಯಿಸಿದ ಅದೃಷ್ಟ..!

    ಪ್ಯಾರೀಸ್ ಒಲಿಂಪಿಕ್ಸ್‌ ಬಳಿಕ ಮನು ಭಾಕರ್‌ ಅವರಿಗೆ ಜಾಹೀರಾತು ಕ್ಷೇತ್ರದಲ್ಲಿ ಭಾರೀ ಬೇಡಿಕೆ ಹೆಚ್ಚಾಗಿದೆ. 20 ಲಕ್ಷ 25 ಲಕ್ಷ ರೂಪಾಯಿಗಳ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಒಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ತಂದುಕೊಟ್ಟ ಬಳಿಕ ಮನು ಅವರಿಗೆ ಜಾಹೀರಾತಿಗಾಗಿ ಬ್ರ್ಯಾಂಡ್ ಕಂಪೆನಿಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ. ಒಲಿಂಪಿಕ್ಸ್​​ನಲ್ಲಿ ತಮ್ಮ ಸಾಧನೆ ಹೊರ ಹೊಮ್ಮುತ್ತಿದ್ದಂತೆ ಬರೋಬ್ಬರಿ 40 ವಿವಿಧ ಬ್ರ್ಯಾಂಡ್​ ಕಂಪನಿಗಳು ಮನು ಭಾಕರ್ ಅವರನ್ನು ಸಂಪರ್ಕಿಸಿವೆ. ತಮ್ಮ ಕಂಪನಿಯ ಜಾಹೀರಾತು ಮಾಡಿಕೊಡುವಂತೆ ಕೇಳಿಕೊಂಡು ಬಂದಿವೆ ಎನ್ನಲಾಗಿದೆ. ಇದರ ಜೊತೆಗೆ ಅವರ ಸಂಭಾವನೆ 20-25 ಲಕ್ಷದಿಂದ 1.5 ಕೋಟಿ ರೂಪಾಯಿವರೆಗೆ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಒಲಿಂಪಿಕ್ಸ್‌ ಬಳಿಕ ಮನು ಪ್ರಭಾಕರ್‌ರವರ ಅದೃಷ್ಟ ಕುಲಾಯಿಸಿದೆ.

    BIG BOSS

    BBK 11: ಮೋಕ್ಷಿತಾ ಎರಡು ತಲೆ ನಾಗರಹಾವು: ಗುಡುಗಿದ ತ್ರಿವಿಕ್ರಮ್

    Published

    on

    ದೊಡ್ಮನೆ ಇದೀಗ ಬಿಗ್ ಬಾಸ್ ಸಾಮ್ರಾಜ್ಯವಾಗಿ ಬದಲಾಗಿದೆ. ಉಗ್ರಂ ಮಂಜು ರಾಜನಾಗಿ ಮನೆಯನ್ನು ಆಳುತ್ತಿದ್ದಾರೆ. ಮಂಜು ಸಾಮ್ರಾಜ್ಯದಲ್ಲಿ ಬಿಗ್ ಬಾಸ್ ನಾಮಿನೇಷನ್ ವಿಭಿನ್ನವಾಗಿದೆ ನಡೆದಿದೆ. ಈ ವೇಳೆ, ಮೋಕ್ಷಿತಾಗೆ ತ್ರಿವಿಕ್ರಮ್ ಎರಡು ತಲೆ ನಾಗರಹಾವು ಎಂದು ಗುಡುಗಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿರುವ ಪ್ರಜೆಯ ಫೋಟೋವನ್ನು ಬಾಣದಿಂದ ಚುಚ್ಚಿ ಮನೆಯ ಮುಖ್ಯದ್ವಾರದಿಂದ ಹೊರಹೋಗುವಂತೆ ಹೊಡೆದು ನಾಮಿನೇಟ್ ಮಾಡಬೇಕು ಎಂದು ಬಿಗ್ ಬಾಸ್ ನಿಯಮ ಹೇಳಿರುತ್ತಾರೆ. ಅದರಂತೆ ಮೋಕ್ಷಿತಾ ಪೈ ಅವರು ನಾಮಿನೇಷನ್‌ಗೆ ಭವ್ಯ ಗೌಡ ಹಾಗೂ ತ್ರಿವಿಕ್ರಮ್ ಹೆಸರನ್ನು ಹೇಳುತ್ತಾರೆ. ಮಂಜು ಮುಂದೆ ತ್ರಿವಿಕ್ರಮ್ ಬಿಲ್ಡಪ್ ಕೊಡುತ್ತಾರೆ. ಆಚೆ ಬಂದ್ಮೇಲೆ ಅದೇ ಮಂಜು ಬಗ್ಗೆ ಏನೂ ಅಲ್ಲ ಎನ್ನುತ್ತಾರೆ ಎಂದು ಮೋಕ್ಷಿತಾ ಕಾರಣ ಹೇಳ್ತಾರೆ. ಅದಕ್ಕೆ, ಉಗ್ರಂ ಮಂಜು, ಅದು ನಂಬಿಕೆ ದ್ರೋಹ ಎಂದು ಕೂಗಾಡಿದ್ದಾರೆ.

    ನಂತರ ತ್ರಿವಿಕ್ರಮ್ ತಮ್ಮನ್ನು ಸಮರ್ಥಿಸಿಕೊಂಡು, ನಾನು ಇವರನ್ನು ಮ್ಯಾನಿಪುಲೇಟ್ ಮಾಡುತ್ತಿಲ್ಲ. ನಿಜವಾಗಿಯೂ ಮಾಡ್ತಿರೋದು ಇವರು. ಅದಕ್ಕೆ ಸಿಟ್ಟಿಗೆದ್ದ ಉಗ್ರಂ ಮಂಜು, ಮಾತು ಬರುತ್ತದೆ ಎಂದು ನೀವು ಮಾತನಾಡಬೇಡಿ ಎನ್ನುತ್ತಾರೆ. ಆಗ ನನ್ನನ್ನು ಗೋಮುಖ ವ್ಯಾಘ್ರ ಎನ್ನುತ್ತಾರೆ. ನಿಜವಾಗಿಯೂ ಇವರು ಎರಡು ತಲೆ ನಾಗರಹಾವು ಎಂದು ಮೋಕ್ಷಿತಾ ವಿರುದ್ಧ ತ್ರಿವಿಕ್ರಮ್ ರೊಚ್ಚಿಗೆದ್ದಿದ್ದಾರೆ.

    Continue Reading

    International news

    14 ಬಾರಿಯ ಒಲಿಂಪಿಕ್ ಪದಕ ವಿಜೇತೆ ವಿದಾಯ !

    Published

    on

    ಮಂಗಳೂರು/ಸಿಡ್ನಿ: ಆಸ್ಟ್ರೇಲಿಯಾದ ಸ್ಟಾರ್ ಒಲಿಂಪಿಯನ್ ‘ಎಮ್ಮಾ ಮೆಕ್ ಕೀನ್’ ಸೋಮವಾರ ಸ್ಪರ್ಧಾತ್ಮಕ ಈಜು ಸ್ಪರ್ಧೆಗೆ ವಿದಾಯ ಘೋಷಿಸಿದ್ದಾರೆ.

    ಮೆಕ್ ಕಿಯಾನ್ ಮೂರು ಬೇಸಿಗೆ ಒಲಿಂಪಿಕ್ಸ್ ಗಳಲ್ಲಿ 14 ಒಲಿಂಪಿಕ್ ಪದಕಗಳ ಗೆದ್ದ ದಾಖಲೆಯನ್ನು ಹೊಂದಿದ್ದಾರೆ.

    ಇದನ್ನೂ ಓದಿ:ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
    ಇವರ ಪದಕಗಳ ಪಟ್ಟಿಯಲ್ಲಿ ಆರು ಚಿನ್ನದ ಪದಕಗಳು, ಮೂರು ಬೇಸಿಗೆ ಒಲಿಂಪಿಕ್ ಗಳಲ್ಲಿ ಪದಕ ಬಂದಿದೆ. ಇನ್ನೂ ಟೋಕಿಯೊ ಒಲಿಂಪಿಕ್ 2020ರಲ್ಲಿ, ಎಮ್ಮಾ ಏಳು ಪದಕ ಗೆಲ್ಲುವುದರೊಂದಿಗೆ ಒಂದೇ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ.

    Continue Reading

    LATEST NEWS

    ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್​ನ್ಯೂಸ್..!

    Published

    on

    ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು ಸಮಯಾವಕಾಶವನ್ನು ಆಹಾರ ಸಚಿವ ಮುನಿಯಪ್ಪ ನೀಡಿದ್ದಾರೆ.

    ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ವಂಚಿತರಾದವರು ಚಿಂತೆ ಮಾಡಬೇಕಾಗಿಲ್ಲ. ಇನ್ನೂ 3 ದಿನದೊಳಗಡೆ ಪಡಿತರ ಪಡೆಯಬಹುದು ಎಂದು ಆಹಾರ ಸಚಿವರು ಹೇಳಿದ್ದಾರೆ. ಪರಿಶೀಲನೆ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ವಾಪಸ್ ಆಗಲಿದೆ. ನವೆಂಬರ್ 28ರೊಳಗೆ ಸಮಸ್ಯೆಗೆ ಪರಿಹಾರ ಕೊಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

    ಬಿಪಿಎಲ್ ಕಾರ್ಡ್​ಗಳ ಗೊಂದಲ ನಿವಾರಣೆ ಆಗಿದೆ. ಒಂದು ವಾರದಲ್ಲಿ ಗೊಂದಲ ಪರಿಹರಿಸುವುದಾಗಿ ಹೇಳಿದ್ದೆ. ನವೆಂಬರ್ 28 ರ ನಂತರ ಹಿಂದಿನಂತೆ ಬಿಪಿಎಲ್ ಕಾರ್ಡ್‌ನವರು ಪಡಿತರ ಪಡೆಯಬಹುದು. ಬಿಪಿಎಲ್ ಕಾಡ್೯ ಪರಿಷ್ಕರಣೆಯಲ್ಲಿ ನಾವು ಕೇಂದ್ರ ಸರ್ಕಾರದ ಮಾನದಂಡಗಳು ಅನುಸರಿಸಿದ್ದೇವೆ ಹೊರತು ಯಾವುದೇ ಅವೈಜ್ಞಾನಿಕ ಕ್ರಮ ಅನುಸರಿಸಿಲ್ಲ ಎಂದಿದ್ದಾರೆ.

    Continue Reading

    LATEST NEWS

    Trending