LATEST NEWS
ಒಲಿಂಪಿಕ್ಸ್ ಬಳಿಕ ಮನು ಭಾಕರ್‌ಗೆ ಕುಲಾಯಿಸಿದ ಅದೃಷ್ಟ .! ಜಾಹಿರಾತಿಗಾಗಿ ಬ್ರ್ಯಾಂಡ್ ಕಂಪೆನಿಗಳಿಂದ ಆಫರ್..!
ಪ್ಯಾರಿಸ್/ಮಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮಹಾದಾಸೆಯನ್ನು ಇಟ್ಟಿದ್ದ ಮನು ಪ್ರಭಾಕರ್ ಕನಸು ಕಮರಿದೆ. ಈ ಹಿಂದೆ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕವನ್ನು ಪಡೆದಿದ್ದ ಮನು ಇದೀಗ ಅಂತಿಮ ಸುತ್ತಿನಲ್ಲಿ ಕೂದಲೆಳೆಯಲ್ಲಿ ಅವಕಾಶವನ್ನು ಕಳೆದುಕೊಂಡಿದ್ದಾರೆ. ಭಾರತಕ್ಕೆ ಮೂರನೇ ಕಂಚಿನ ಪದಕವನ್ನು ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದಾರೆ. ಫ್ರಾನ್ಸ್‌ನ ಚಟೌರಾಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕವನ್ನು ಕೆಳದುಕೊಂಡಿದ್ದಾರೆ. 2 ಪದಕ ಗೆದ್ದ ಬಳಿಕ ಮನು ಭಾಕರ್ 3ನೇ ಪದಕದ ಮೇಲೆ ಕಣ್ಣಿಟ್ಟಿದ್ದರು. ಆದರೆ 4ನೇ ಸ್ಥಾನಕ್ಕೆ ಕುಸಿದಿದ್ದು ತೀವ್ರ ನಿರಾಸೆಯನ್ನುಂಟು ಮಾಡಿದೆ. ಆದರೂ ಮನು ಭಾಕರ್ ಅವರ ಸಾಧನೆಗೆ ಹ್ಯಾಟ್ಸಾಫ್ ಅಂತ ಕೋಟ್ಯಾಂತರ ಭಾರತೀಯರು ಹೇಳುತ್ತಿದ್ದಾರೆ.
ಫೈನಲ್ನಲ್ಲಿ ಮನು ಭಾಕರ್ 28 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರೆ, ಕಂಚಿನ ಪದಕ ಗೆದ್ದ ಹಂಗೇರಿಯಾದ ಮೇಜರ್ ವೆರೋನಿಕಾ 31 ಪಾಯಿಂಟ್ಸ್ ಕಲೆಹಾಕಿದ್ದರು. ಅಂದರೆ ಕೇವಲ ಮೂರು ಅಂಕಗಳ ಅಂತರದಿಂದ ಮೂರನೇ ಪದಕ ಗೆಲ್ಲುವ ಅವಕಾಶವನ್ನು ಮನು ಭಾಕರ್ ಕೈಚೆಲ್ಲಿಕೊಂಡರು.
ಪ್ಯಾರಿಸ್ ಒಲಿಂಪಿಕ್ಸ್ : ಮನು ಭಾಕರ್ ಹ್ಯಾಟ್ರಿಕ್ ಪದಕದ ಕನಸು ಭಗ್ನ
ಮನು ಭಾಕರ್‌ಗೆ ಕುಲಾಯಿಸಿದ ಅದೃಷ್ಟ..!
ಪ್ಯಾರೀಸ್ ಒಲಿಂಪಿಕ್ಸ್ ಬಳಿಕ ಮನು ಭಾಕರ್ ಅವರಿಗೆ ಜಾಹೀರಾತು ಕ್ಷೇತ್ರದಲ್ಲಿ ಭಾರೀ ಬೇಡಿಕೆ ಹೆಚ್ಚಾಗಿದೆ. 20 ಲಕ್ಷ 25 ಲಕ್ಷ ರೂಪಾಯಿಗಳ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ತಂದುಕೊಟ್ಟ ಬಳಿಕ ಮನು ಅವರಿಗೆ ಜಾಹೀರಾತಿಗಾಗಿ ಬ್ರ್ಯಾಂಡ್ ಕಂಪೆನಿಗಳು ಅವರನ್ನು ಹುಡುಕಿಕೊಂಡು ಬರುತ್ತಿದೆ. ಒಲಿಂಪಿಕ್ಸ್ನಲ್ಲಿ ತಮ್ಮ ಸಾಧನೆ ಹೊರ ಹೊಮ್ಮುತ್ತಿದ್ದಂತೆ ಬರೋಬ್ಬರಿ 40 ವಿವಿಧ ಬ್ರ್ಯಾಂಡ್ ಕಂಪನಿಗಳು ಮನು ಭಾಕರ್ ಅವರನ್ನು ಸಂಪರ್ಕಿಸಿವೆ. ತಮ್ಮ ಕಂಪನಿಯ ಜಾಹೀರಾತು ಮಾಡಿಕೊಡುವಂತೆ ಕೇಳಿಕೊಂಡು ಬಂದಿವೆ ಎನ್ನಲಾಗಿದೆ. ಇದರ ಜೊತೆಗೆ ಅವರ ಸಂಭಾವನೆ 20-25 ಲಕ್ಷದಿಂದ 1.5 ಕೋಟಿ ರೂಪಾಯಿವರೆಗೆ ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಒಲಿಂಪಿಕ್ಸ್ ಬಳಿಕ ಮನು ಪ್ರಭಾಕರ್‌ರವರ ಅದೃಷ್ಟ ಕುಲಾಯಿಸಿದೆ.
LATEST NEWS
ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ 67ಸಾವಿರ ರೂ ಕಳೆದುಕೊಂಡ ಮಹಿಳೆ..! ದೂರು ದಾಖಲು
ಕೋಟ: ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನಂಬಿ ಯುವತಿಯೊಬ್ಬಳು 60 ಸಾವಿರ ರೂ. ಹಣವನ್ನು ಕಳೆದುಕೊಂಡಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲೇ ಕುಳಿತು ಮೊಬೈಲ್‌ನಲ್ಲಿ ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಂದ ಜಾಹೀರಾತನ್ನು ನೋಡಿ ಯುವತಿಯೊಬ್ಬಳು 60 ಸಾವಿರ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾಳೆ. ಇನ್ಸ್ಟಾಗ್ರಾಮ್‌ನಲ್ಲಿ ಬಂದ ಲಿಂಕನ್ನು ಅಕ್ಷತಾ(26 ವ) ಸ್ವೀಕರಿಸಿದ್ದಾರೆ. ಅದರಂತೆ ಲಿಂಕ್‌ಅನ್ನು ಒತ್ತಿದ ಕೂಡಲೇ ಅದು ವ್ಯಾಟ್ಸಾಪ್ ನಂಬರ್‌ಗೆ ಸಂಪರ್ಕಗೊಂಡಿದೆ. ಅದರಲ್ಲಿ ಮೊಬೈಲ್‌ನಲ್ಲಿ ಮಾಡುವ ಕೆಲಸದ ಬಗ್ಗೆ ಮಾಹಿತಿಯನ್ನು ನೀಡಿದ್ದರು.
ಆರಂಭದಲ್ಲಿ ನೋಂದಣಿ ಶುಲ್ಕ ಎಂದು ಅಕ್ಷತಾ 200 ರೂಪಾಯಿ ಹಣವನ್ನು ಫೋನ್ ಪೇ ಮೂಲಕ ವರ್ಗಾವಣೆ ಮಾಡಿದ್ದಾರೆ. ನಂತರ ಬೋನಸ್ ಎಂದು ಹೇಳಿ ಅಕ್ಷತಾ ರವರಿಗೆ 60 ರೂಪಾಯಿ ಹಣವನ್ನು ನೀಡಲಾಗಿದೆ. ಹೀಗೆ ಒಂದೇ ದಿನ 1,615 ರೂಪಾಯಿ ಅವರು ಪಾವತಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವೈದ್ಯರಿಗೆ ಕೋಟ್ಯಾಂತರ ರೂಪಾಯಿ ಆನ್ಲೈನ್ ವಂಚನೆ..! ಆರೋಪಿಗಳಿಂದ 13,95,000 ನಗದು ವಶ..!!
ಜಾಹಿರಾತುದಾರರು 1/09/2024ರಂದು ಒಂಭತ್ತು ಆರ್ಡರ್‌ಗಳನ್ನು ಮುಗಿಸುವಂತೆ ತಿಳಿಸಿದ್ದು ಮೊದಲಿಗೆ 500ರೂ. ಪಾವತಿಸಿ ಅಕ್ಷತಾ ಕೆಲಸವನ್ನು ಆರಂಭಿಸಿದ್ದಾರೆ. ಪ್ರತಿಯೊಂದು ಆರ್ಡರ್‌ಗೆ ಹಣ ಪಾವತಿಸಲು ಅವರು ತಿಳಿಸಿದ್ದು ಅದರಂತೆ ಅಕ್ಷತಾ ಒಟ್ಟು 67,330 ರೂಪಾಯಿ ಹಣ ಪಡೆದು ತನಗೆ ಹಣ ವಂಚನೆ ಮಾಡಿರುವುದಾಗಿ ಕೋಟ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
LATEST NEWS
ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಗಸ್ತು ತಿರುಗಲು ಮತ್ತು ವೈಮಾನಿಕ ಸಮೀಕ್ಷೆ ನಡೆಸಲು ಮಿಲಿಟರಿ ಹೆಲಿಕಾಪ್ಟರ್ ಅನ್ನು ನಿಯೋಜಿಸಲಾಗಿದ್ದು, ಕೂಂಬಿಂಗ್ ಕಾರ್ಯಾಚರಣೆಯೂ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ.
LATEST NEWS
ಹಳಿಗಳ ಮೇಲೆ ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟ ಕಿಡಿಗೇಡಿಗಳು: ತಪ್ಪಿದ ರೈಲು ದುರಂತ
ಅಜ್ಮೀರ್: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ತಲಾ 70 ಕೆ.ಜಿ ತೂಕದ ಸಿಮೆಂಟ್ ಬ್ಲಾಕ್ ಗಳಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್ ಗಳನ್ನು ಇಟ್ಟಿದ್ದಾರೆ. ಗೂಡ್ಸ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾನ್ಪುರದಲ್ಲಿ ಭಾನುವಾರ ಕಾಳಿಂದಿ ಎಕ್ಸ್ ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಯತ್ನವನ್ನು ಕಿಡಿಗೇಡಿಗಳು ನಡೆಸಿದ್ದರು. ಹಳಿ ಮೇಲೆ ಸಿಲಿಂಡರ್, ಪೆಟ್ರೋಲ್ ತುಂಬಿದ ಬಾಟಲಿಗಳು, ಗನ್ ಪೌಡರ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಇರಿ ರೈಲು ಸಿಲಿಂಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅದು ಸ್ಫೋಟಗೊಂಡಿತ್ತು. ಆದರೆ ರೈಲಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ.
ಲೊಕೊ ಪೈಲಟ್ ತುರ್ತು ಬ್ರೇಕ್ ಹಾಕಿದ್ದರಿಂದ ರೈಲು ಹಳಿಯಲ್ಲಿ ಅಡಚಣೆ ಉಂಟಾದ ಕಾರಣ ತಕ್ಷಣ ರೈಲ್ವೆ ಸಂರಕ್ಷಣಾ ಪಡೆಗೆ ಎಚ್ಚರಿಕೆ ನೀಡಿ ಸಂಪೂರ್ಣ ತಪಾಸಣೆ ನಡೆಸಿದ ನಂತರ ದೊಡ್ಡ ರೈಲು ಅಪಘಾತವನ್ನು ತಪ್ಪಿಸಲಾಯಿತು.
- LATEST NEWS6 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- DAKSHINA KANNADA5 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM5 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
- LATEST NEWS1 day ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
Pingback: ಪ್ರೀತಿಯಲ್ಲಿದ್ದಾರಾ..ಮನು ಭಾಕರ್-ನೀರಜ್ ಛೋಪ್ರಾ..! ಶೂಟರ್ ತಂದೆ ಹೇಳಿದ್ದೇನು? - NAMMAKUDLA NEWS - ನಮ್ಮಕುಡ್ಲ ನ್ಯೂಸ್