Monday, July 4, 2022

ಮತ್ತೆ ಮುತಾಲಿಕ್ ಗೆ ಕೈ ಕೊಟ್ಟ ಬಿಜೆಪಿ..!

ಮತ್ತೆ ಮುತಾಲಿಕ್ ಗೆ ಕೈ ಕೊಟ್ರಾ ಬಿಜೆಪಿ..?

ನವದೆಹಲಿ:ಕಳೆದ ಸಪ್ಟೆಂಬರ್ ನಲ್ಲಿ ಕೋವಿಡ್ ಸೋಂಕಿನ ತೀವ್ರತೆ ಹೆಚ್ಚಾಗಿದ್ದ ಸಮಯದಲ್ಲಿ ಕೋವಿಡ್ 19ಸೋಂಕಿಗೆ ತುತ್ತಾದ ಸುರೇಶ್ ಅಂಗಡಿ ಕೋವಿಡ್ 19ಸೋಂಕಿಗೆ ತುತ್ತಾಗಿ ನಿಧನರಾಗಿದ್ದರು. ಇದರಿಂದ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾಗಿತ್ತು.

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋ಼ಷಣೆ ಮಾಡಿದೆ.

ಅನೇಕ ಬಾರಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರಿಗೆ ಬಿಜೆಪಿ ಟಿಕೆಟ್ ತಪ್ಪಿದೆ. ಇದರಿಂದ ಸುರೇಶ ಅಂಗಡಿಯವರ ನಿಧನದಿಂದ ತೆರವಾಗಿದ್ದ ಅವರ ಸ್ಥಾನಕ್ಕೆ  ಈ ಬಾರಿ ಬೆಳಗಾವಿಯಲ್ಲಿ  ತನಗೇ ಬಿಜೆಪಿ ಟಿಕೆಟ್ ನೀಡಲಿದೆಎನ್ನುವ ವಿಶ್ವಾಸ ಹೊಂದಿದ್ದ ಪ್ರಮೋದ್ ಮುತಾಲಿಕ್ ಗೆ ಟಿಕೆಟ್ ನೀಡುವ ಬಗ್ಗೆ ಹಿರಿಯ ಮುಖಂಡರಿಂದ ಮಾತುಕತೆ ನಡೆದಿತ್ತು. ಆದರೆ ಅವರ ವಿಶ್ವಾಸಕ್ಕೆ  ಇದೀಗ ತಣ್ಣೀರೆರಚಿದಂತಾಗಿದೆ. ಈ ಹಿಂದೆ ಅನಂತ್ ಕುಮಾರ್ ನಿಧನದ ನಂತರ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡುವುದನ್ನು  ಕುಟುಂಬ ರಾಜಕಾರಣವಾಗಬಾರದೆಂಬ ಹಿನ್ನೆಲೆಯಲ್ಲಿ ಟಿಕೆಟ್ ನೀಡಿರಲಿಲ್ಲ

ಆದರೆ ಇದೀಗ ದಿ|ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ಘೋಷಣೆಯಾಗಿರುವುದರ ಕುರಿತು ವ್ಯಾಪಕ ಪರ ವಿರೋಧ ಚರ್ಚೆ ನಡೆಯುತ್ತಿದೆ ಇದರೊಂದಿಗೆ ಕುಟುಂಬ ರಾಜಕಾರಣದ ನಿಲುವಿನ ಬಗ್ಗೆಯೂ ಚರ್ಚೆಯಾಗುತ್ತಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ...

ಮಹಾ ಪಾಲಿಟಿಕ್ಸ್‌: ಮಹಾರಾಷ್ಟ್ರದ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದಾರೆ.ಬಿಜೆಪಿಯ ಅಭ್ಯರ್ಥಿ ರಾಹುಲ್‌ 164 ಮತಗಳನ್ನು ಪಡೆದು ಸ್ಪೀಕರ್‌ ಆಗಿ ಆಯ್ಕೆಯಾದರು.ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಶಿವಸೇನಾದ ಶಾಸಕ ರಾಜನ್‌...