LATEST NEWS
Ahmedabad: ಆಸ್ಪತ್ರೆಯಲ್ಲಿ ಬೆಂಕಿ ಅವಘಡ- 125 ರೋಗಿಗಳ ಸ್ಥಳಾಂತರ..!
ಆಸ್ಪತ್ರೆಯೊಂದರ ಬಹುಮಹಡಿ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ಜು.30ರಂದು ನಡೆದಿದೆ.
ಅಹಮದಾಬಾದ್ : ಆಸ್ಪತ್ರೆಯೊಂದರ ಬಹುಮಹಡಿ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ಜು.30ರಂದು ನಡೆದಿದೆ.
ಆಸ್ಪತ್ರೆಯಲ್ಲಿದ್ದ ಸುಮಾರು 125 ರೋಗಿಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಘಡದಲ್ಲಿ ಸಾವು- ನೋವು ಸಂಭವಿಸಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಂ ಡಿ ಚಂಪಾವತ್ ತಿಳಿಸಿದ್ದಾರೆ.
ಆಸ್ಪತ್ರೆಯ ನೆಲಮಾಲಿಗೆಯಲ್ಲಿದ್ದ ಹಲವು ವಸ್ತುಗಳಿಗೆ ಬೆಂಕಿ ಸಂಭವಿಸಿ ಭಾರಿ ಹೊಗೆ ಉಂಟಾಗಿ ಬೆಂಕಿ ಹತ್ತಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
VIDEO | A fire broke out in the basement of Rajasthan hospital, located in Gujarat's Ahmedabad earlier today. Nearly 100 patients were evacuated from the multi-storey building as a precautionary measure.
READ | https://t.co/OLF5NQnJnM pic.twitter.com/qCvW2cdy2N
— Press Trust of India (@PTI_News) July 30, 2023
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
DAKSHINA KANNADA
ಇಂದು ಕರ್ನಾಟಕ ಬಂದ್: ಕರಾವಳಿಗರಿಂದ ನೈತಿಕ ಬೆಂಬಲ-ಬಸ್, ಹೊಟೇಲ್, ಶಾಲೆಗಳು ಎಂದಿನಂತೆ
ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.
ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.
ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.
LATEST NEWS
ಭೀಕರ ಬ್ಲಾಸ್ಟ್: ಮೊಬೈಲ್ ಬಳಿಯಲ್ಲಿ ಡಿಯೋಡರೆಂಟ್ ಬಾಟಲಿಗಳನ್ನು ಇಡ್ಡುತ್ತೀರಾ ಹಾಗಾದ್ರೆ ಹುಷಾರ್..!!
ಮಹಾರಾಷ್ಟ್ರ: ಮೂವರು ಮೊಬೈಲ್ ಫೋನ್ ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್‌ನ ಸಿಡ್ಕೋ ಉತ್ತಮ್ ನಗರ ಪ್ರದೇಶದಲ್ಲಿ ಮಂಗಳವಾರದಂದು ನಡೆದಿದೆ.
ಮನೆಯೊಳಗೆ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡ ಕಾರಣ ಈ ಘಟನೆ ನಡೆದಿದೆ.
ಫೋನ್ ಪಕ್ಕದಲ್ಲಿ ಡಿಯೋಡರೆಂಟ್ ಕ್ಯಾನ್ ಸ್ಫೋಟದ ತೀವ್ರತೆ ಮತ್ತಷ್ಟು ಹೆಚ್ಚಿಸಿದೆ.
ಸ್ಫೋಟದ ತೀವ್ರತೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದು ಸುತ್ತಮುತ್ತಲಿನ ಪ್ರತಿಯೊಂದು ಕಿಟಕಿಗಳನ್ನು ಒಡೆದು ಹಾಕಿತು.
ಸ್ಫೋಟದ ತೀವ್ರತೆಯಿಂದಾಗಿ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜುಗಳು ಕೂಡ ಒಡೆದಿವೆ.
ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳೂ ಒಡೆದಿರುವ ಬಗ್ಗೆ ವರದಿಯಾಗಿದೆ.
ಸ್ಫೋಟದ ವೇಳೆ ಮನೆಯಲ್ಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಪೊಲೀಸರ ತನಿಖೆ ಮುಂದುವರೆದಿದೆ.
- FILM7 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA7 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?