Connect with us

DAKSHINA KANNADA

ಕಲಾವಿದರಿಗೆ ಸಹಾಯ ಧನ: ವಯೋಮಿತಿ ಇಳಿಕೆಗೆ ಸಂಸದರಿಗೆ ನಾಟಕ ಕಲಾವಿದರ ಒಕ್ಕೂಟದಿಂದ ಮನವಿ

Published

on

ಮಂಗಳೂರು: ಸರಕಾರ ಕಲಾವಿದರಿಗೆ ಆರ್ಥಿಕ ಸಹಾಯ ನೀಡಲು 35 ವರ್ಷದ ವಯೋಮಿತಿಯಿಂದ ಕಡಿಮೆ ವಯಸ್ಸಿನ ಕಲಾವಿದರು ಅವಕಾಶ ವಂಚಿತರಾಗುತ್ತಿದ್ದಾರೆ.

ಹೀಗಾಗಿ ವಯೋಮಿತಿಯನ್ನು ಕಡಿಮೆ ಗೊಳಿಸ ಬೇಕೆಂದು ತುಳು ನಾಟಕ ಕಲಾವಿದರ ಒಕ್ಕೂಟ ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದೆ.

ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ಕಿಶೋರ್ ಡಿ ಶೆಟ್ಟಿ ನೇತೃತ್ವದಲ್ಲಿ ಮನವಿ ನೀಡಲಾಯಿತು.

ಲಾಕ್ಡೌನ್ ನಿಂದಾಗಿ ನಾಟಕ ಪ್ರದರ್ಶನಗಳಿಲ್ಲದೆ ತೊಂದರೆ ಅನುಭವಿಸಿದ ಕಲಾವಿದರಿಗಾಗಿ ಸರಕಾರ ಘೋಷಿಸಿರುವ ಧನಸಹಾಯ ಪಡೆಯಲು ಕನಿಷ್ಠ 35 ವರುಷಗಳ ವಯೋಮಿತಿ ಸೂಚಿಸಿತ್ತು ,

35 ವರುಷ ಪೂರೈಸಿದ ಕಲಾವಿದರು ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ ಬೆನ್ನಲ್ಲೇ 35 ವರುಷಕ್ಕಿಂತ ಕಡಿಮೆ ವಯಸ್ಸಿನ ಕಲಾವಿದರಿಗೂ ಸರಕಾರ ಸಹಾಯಹಸ್ತ ನೀಡಬೇಕು.

ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶದಲ್ಲಿರುವ ಮುನ್ನೂರಕ್ಕೂ ಅಧಿಕ ತುಳು ನಾಟಕ ಕಲಾವಿದರಿಗೆ ಸರಕಾರ ಯಾವುದೇ ಪರಿಹಾರ. ಘೋಷಣೆ ಮಾಡಿಲ್ಲ.

ಅವರಿಗೂ ಸರಕಾರದ ಧನಸಹಾಯ ಸೌಲಭ್ಯ ದೊರೆಯುವಂತಾಗಬೇಕೆಂದು ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇವರಿಗೆ ಮನವಿ ಸಲ್ಲಿಸಲಾಯಿತು.

ಸದ್ಯವೇ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ, ಒಕ್ಕೂಟದ ಅಧ್ಯಕ್ಷರಾದ ಕಿಶೋರ್ ಡಿ.ಶೆಟ್ಟಿ , ಕಾರ್ಯದರ್ಶಿ ಲಕ್ಷ್ಮಣ ಕುಮಾರ್ ಮಲ್ಲೂರು, ಕೋಶಾಧಿಕಾರಿ ಮೋಹನ್ ಕೊಪ್ಪಲ, ಕ್ಷೇಮ ನಿಧಿ ಸಂಚಾಲಕ ಪ್ರದೀಪ್ ಆಳ್ವ ಕದ್ರಿ, ಸಲಹೆಗಾರರಾದ ತಾರನಾಥ ಶೆಟ್ಟಿ ಬೋಳಾರ, ಕದ್ರಿ ನವನೀತ್ ಶೆಟ್ಟಿ, ಪ್ರಶಾಂತ್ ಸಿ.ಕೆ ಮುಂತಾದವರು ಉಪಸ್ಥಿತರಿದ್ದರು…

DAKSHINA KANNADA

ಚೈತ್ರಾ ಹೆಬ್ಬಾರ್ ನಾಪತ್ತೆ ಹಿಂದೆ ಅನ್ಯಕೋಮಿನ ಯುವಕನ ಕೈವಾಡ ಶಂಕೆ- ಆರೋಪಿಯ ಬಂಧಿಸಲು ಹಿಂದೂ‌ ಸಂಘಟನೆ ಒತ್ತಾಯ

Published

on

ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ‌ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ ಇದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಶಾರೂಕ್ ಶೇಖ್ ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿಯಾಗಿದ್ದಾನೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಶಂಕಿತ ಬರುತ್ತಿದ್ದ. ಚೈತ್ರಾ ಪೋಷಕರಿಗೆ ಮಾಡೂರು ಬಜರಂಗದಳ ಮುಖಂಡರು ಮಾಹಿತಿಯನ್ನೂ ನೀಡಿದ್ದರು. ಇದೀಗ ಮಾಹಿತಿ ನೀಡಿದ ಬಳಿಕ ನಾಪತ್ತೆಯಾದ ಚೈತ್ರಾ ಹೆಬ್ಬಾರ್‌ ಹಿಂದೆ ಈ ಆರೋಪಿ ಇರುವುದು ದೃಢಪಡುತ್ತಿರುವುದರಿಂದ ಎರಡು ದಿನದಲ್ಲಿ ಚೈತ್ರಾಳನ್ನು ಪೊಲೀಸರು ಕರೆ ತರಬೇಕು. ಇಲ್ಲದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

Continue Reading

DAKSHINA KANNADA

Ullala: ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಸ್ಕೂಟರ್ ಪತ್ತೆ..!

Published

on

ಮಂಗಳೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನಿಕೆ ಚುರುಕುಗೊಳಿಸಿ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಆದರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾದ್ಯತೆ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

DAKSHINA KANNADA

Mangaluru: ಮನೆಗೆ ಆಕಸ್ಮಿಕ ಬೆಂಕಿ- ಸೊತ್ತುಗಳು ಸಂಪೂರ್ಣ ನಾಶ..!

Published

on

ಮಂಗಳೂರು: ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಫೆ.24ರಂದು ನಡೆದಿದೆ.

ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು, ಇಬ್ಬರೂ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಗ್ನಿ ದುರಂತ ನಡೆದಿದೆ. ಬೆಂಕಿ ತಗುಲಿದ್ದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರಿಗೂ ಮಾಹಿತಿ ನೀಡಿದ್ದು, ಬಳಿಕ ಅವರೂ ಬಂದಿದ್ದಾರೆ. ಕ್ಯಾಟರಿಂಗ್ ಸಂಸ್ಥೆಯ 4 ಟ್ಯಾಂಕ್‌ ನೀರನ್ನು ತರಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಲಾಗಿದೆ. ಆದರೆ ಅಷ್ಟರಲ್ಲಿ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.

ಗ್ಯಾಸ್‌ ಸಂಪರ್ಕವನ್ನು ತೆಗೆದು ಹೊರಗೆ ಇರಿಸಿದ್ದರಿಂದ ಭಾರೀ ದುರಂತ ತಪ್ಪಿದೆ. ಬಟ್ಟೆ ಬರೆಗಳೆಲ್ಲ ಸುಟ್ಟು ಹೋಗಿವೆ. ಕಪಾಟಿನಲ್ಲಿದ್ದ 20 ಸಾವಿರ ರೂಪಾಯಿ ನಗದು ಮತ್ತು ಒಂದು ಲಕ್ಷ ರೂಪಾಯಿ ಅಂದಾಜು ಬೆಲೆಯ ಚಿನ್ನಾಭರಣ ಬೆಂಕಿಗೆ ಆಹುತಿಯಾಗಿದೆ ಎಂದು ಶ್ಯಾಮಲಾ ಅವರು ತಿಳಿಸಿದ್ದಾರೆ. ಮಾಹಿತಿ ಲಭಿಸಿದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಮನೆ ಮಂದಿಗೆ ತಾತ್ಕಾಲಿಕವಾಗಿ ಪಕ್ಕದ ಬಾಡಿಗೆ ಮನೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ.

ನಷ್ಟದ ಪ್ರಮಾಣ ಅಂದಾಜಿಸಿಲ್ಲ. ದೇವರ ದೀಪಕ್ಕೆ ಇರಿಸಿದ್ದ ಹಣತೆಯನ್ನು ಇಲಿ ಮಗುಚಿ ಹಾಕಿದ ಪರಿಣಾಮ ಬೆಂಕಿ ಹಿಡಿದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Continue Reading

LATEST NEWS

Trending