Wednesday, February 1, 2023

ವಾಯುಸೇನೆ ಟ್ರೈನಿಂಗ್‌ನಲ್ಲಿ ರಿಜೆಕ್ಟ್-ಮನನೊಂದು ಯುವಕ ಜೀವಾಂತ್ಯ…

ಬೆಂಗಳೂರು: ವಾಯುಸೇನೆ ಟ್ರೈನಿಂಗ್‌ಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಏರ್‌ಫೋರ್ಸ್ ಟೆಕ್ನಿಕಲ್ ಕಾಲೇಜು ಕ್ಯಾಂಪಸ್​ನಲ್ಲಿ ನಡೆದಿದೆ.

ದೆಹಲಿ ಮೂಲದ ಅಂಕಿತ್ ಕುಮಾರ್ (27) ಮೃತ ವಿದ್ಯಾರ್ಥಿ.


ಕೆಲವು ವರ್ಷಗಳ ಬಹಿಂದೆ ಈತ ವಾಯುಸೇನೆ ತರಬೇತಿಗೆಂದು ಬೆಂಗಳೂರಿಗೆ ಬಂದಿದ್ದ. ಜಾಲಹಳ್ಳಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ.

ವಾಯುಸೇನೆ ತರಬೇತಿಯಲ್ಲಿ ಅತ್ಯಂತ ಆಸಕ್ತಿ ಹೊಂದಿದ್ದ ಅಂಕಿತ್‌ನನ್ನು ಕೆಲವು ಕಾರಣಗಳಿಂದ ಅಧಿಕಾರಿಗಳು ಅಮಾನತು ಮಾಡಿದ್ದರು ಎನ್ನಲಾಗಿದೆ.

ಇದರಿಂದ ಬೇಸರಗೊಂಡ ಯುವಕ ಸೆ. 21ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ.

ಈ ಬಗ್ಗೆ ಎಎಫ್​ಟಿಸಿ ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಇದರ ಅನ್ವಯ ಗಂಗಮ್ಮನಗುಡಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೃತರ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ರಾಜ್ಯದಲ್ಲಿ ಚುನಾವಣಾ ಕಾವು :ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ ವರ್ಗಾವಣೆ..!

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ...

ಮಂಗಳೂರು ನ್ಯಾಯಾಲಯದ ಆವರಣದಲ್ಲೇ ವಕೀಲೆಗೆ ಕೊಲೆ ಬೆದರಿಕೆ ಹಾಕಿದ ಆರೋಪಿ..!

ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ‌ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು...

ಉಡುಪಿ: ನಾಗಬನದಲ್ಲಿನ ಶ್ರೀಗಂಧ ಮರ ಕಳವು- ಆರೋಪಿ ಬಂಧನ

ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು  ವಶಕ್ಕೆ ಪಡೆದುಕೊಂಡಿದ್ದಾರೆ.ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್...